ETV Bharat / state

ಆಕ್ಸಿಜನ್ ರೀಫಿಲ್ಲಿಂಗ್ ಘಟಕಕ್ಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಭೇಟಿ, ಪರಿಶೀಲನೆ - Kota Srinivasa Poojary visits Oxygen Refilling Unit

ಮಂಗಳೂರಿನ ಆಕ್ಸಿಜನ್ ರೀಫಿಲ್ಲಿಂಗ್ ಘಟಕಗಳಿಗೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಆಕ್ಸಿಜನ್ ಉತ್ಪಾದನೆ ಹಾಗೂ ಸಿಲಿಂಡರ್​ಗಳ ಭರ್ತಿ ಪ್ರಕ್ರಿಯೆಯನ್ನು ಪರಿಶೀಲನೆ ನಡೆಸಿದರು.

minister-kota-srinivasa-poojary-visits-oxygen-refilling-unit
ಆಕ್ಸಿಜನ್ ರೀಫಿಲ್ಲಿಂಗ್ ಘಟಕಕ್ಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಭೇಟಿ, ಪರಿಶೀಲನೆ
author img

By

Published : May 9, 2021, 9:01 PM IST

ಮಂಗಳೂರು: ನಗರದ ಬೈಕಂಪಾಡಿಯ ಮಲಬಾರ್, ಲಕ್ಷ್ಮಿ ಹಾಗೂ ಕಾರ್ನಾಡ್ ಆಕ್ಸಿಜನ್ ರೀಫಿಲ್ಲಿಂಗ್ ಘಟಕಗಳಿಗೆ ಭೇಟಿ ನೀಡಿರುವ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಆಕ್ಸಿಜನ್ ಉತ್ಪಾದನೆ ಹಾಗೂ ಸಿಲಿಂಡರ್​ಗಳ ಭರ್ತಿ ಪ್ರಕ್ರಿಯೆ ಪರಿಶೀಲನೆ ನಡೆಸಿದರು.

ಆಕ್ಸಿಜನ್ ರೀಫಿಲ್ಲಿಂಗ್ ಘಟಕಗಳಿಗೆ ಯಾವ ಯಾವ ಜಿಲ್ಲೆಯ ಆಕ್ಸಿಜನ್ ಉತ್ಪಾದನಾ ಘಟಕಗಳಿಂದ ವಾರದಲ್ಲಿ ಎಷ್ಟು ಪ್ರಮಾಣದ ಆಕ್ಸಿಜನ್ ಬರುತ್ತದೆ ಹಾಗೂ ಸ್ಥಳೀಯವಾಗಿ ಆಕ್ಸಿಜನ್ ಉತ್ಪಾದಿಸುವ ಬಗ್ಗೆ ಹಾಗೂ ಅವುಗಳನ್ನು ರೀಫಿಲ್ಲಿಂಗ್ ಮಾಡಿ ಯಾವ ಯಾವ ತಾಲೂಕಿನ ಆಸ್ಪತ್ರೆಗಳಿಗೆ ಕಳುಹಿಸಲಾಗುತ್ತಿದೆ ಎಂಬುದರ ಬಗ್ಗೆ ಸಚಿವರು ಮಾಹಿತಿ ಪಡೆದರು.

ಆಕ್ಸಿಜನ್ ರೀಫಿಲ್ಲಿಂಗ್ ಘಟಕಕ್ಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಭೇಟಿ, ಪರಿಶೀಲನೆ

ನಂತರ ಈ ಕುರಿತು ಮಾತನಾಡಿ, ದ.ಕ.ಜಿಲ್ಲೆಯಲ್ಲಿನ 3 ಆಕ್ಸಿಜನ್ ಉತ್ಪಾದನಾ ಹಾಗೂ ರೀಫಿಲ್ಲಿಂಗ್ ಘಟಕಗಳಲ್ಲಿ ಆಕ್ಸಿಜನ್​ನ್ನು ಆಸ್ಪತ್ರೆಗಳಲ್ಲಿನ ರೋಗಿಗಳ ಚಿಕಿತ್ಸೆಯ ಬೇಡಿಕೆಗನುಗುಣವಾಗಿ ಪೂರೈಕೆ ಆಗಬೇಕು. ಜಿಲ್ಲೆಯ ಆಸ್ಪತ್ರೆಗಳಲ್ಲಿ ಆಮ್ಲಜನಕದ ಕೊರತೆಯಾಗದಂತೆ, ಸಾಗಾಣಿಕೆಯಲ್ಲಿ ವ್ಯತ್ಯಯ ಆಗದಂತೆ ಅಗತ್ಯಕ್ಕನುಸಾರವಾಗಿ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ಕೈಗಾರಿಕೆಗೆ ಬಳಸಲು ನೀಡುವ ಪ್ರಮಾಣ ಕಡಿತಗೊಳಿಸಿ ವೈದ್ಯಕೀಯ ಕ್ಷೇತ್ರಕ್ಕೆ ಆದ್ಯತೆಯ ಮೇಲೆ ಆಕ್ಸಿಜನ್ ಒದಗಿಸಬೇಕು ಎಂದು ಸೂಚಿಸಿದರು.

ಓದಿ: ಸೋಂಕಿತನಿಗೆ ರೆಮ್​ಡಿಸಿವಿರ್ ಇಂಜೆಕ್ಷನ್ ಕೊಟ್ಟಿದ್ದೇನೆಂದ ವೈದ್ಯ - ಇಲ್ಲ ಎಂದ ಸಂಬಂಧಿಕ: ಆಸ್ಪತ್ರೆಯಲ್ಲಿ ರಂಪಾಟ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.