ಮಂಗಳೂರು: ಕರಾವಳಿ ಅಭಿವೃದ್ಧಿ ಪ್ರಾಧಿಕಾರವನ್ನು ಮಂಡಳಿಯನ್ನಾಗಿ ಮೇಲ್ದರ್ಜೆಗೇರಿಸಲು ಅನುಮೋದನೆ ನೀಡುವಂತೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸಚಿವ ಕೆ.ಸಿ.ನಾರಾಯಣಗೌಡ ಹೇಳಿದರು.
ನಗರದ ಓಷಿಯನ್ ಪರ್ಲ್ ಹೋಟೆಲ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಂಗಳೂರು ನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಂಜೂರಾದ 2.17 ಕೋಟಿ ರೂ. ವೆಚ್ಚದ ವಿವಿಧ ರೀತಿಯ 20 ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಕ್ರೀಡಾ ಕಿಟ್ ವಿತರಿಸಿ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕನಸಿನಂತೆ ಖೇಲೋ ಇಂಡಿಯಾದಲ್ಲಿ ಕರ್ನಾಟಕದ ಸಾಧಕರಿಂದ ಹೆಚ್ಚಿನ ಪ್ರಶಸ್ತಿ ಪಡೆಯಲು ವಿಶೇಷ ಶ್ರಮ ಹಾಕಲಾಗುವುದು ಎಂದು ಹೇಳಿದರು.
ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ್ ಹೆಗಡೆ ಮಾತನಾಡಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಭಿವೃದ್ಧಿಗಾಗಿ 500 ಕೋಟಿ ರೂಪಾಯಿಯನ್ನು ಬಜೆಟ್ನಲ್ಲಿ ಮೀಸಲಿರಿಸುವಂತೆ ಮನವಿ ಮಾಡಿದರು.