ಮಂಗಳೂರು: ಕಾಂಗ್ರೆಸ್ ಜೆಡಿಎಸ್ ಪಕ್ಷದ ಶಾಸಕರ ರಾಜೀನಾಮೆಯಿಂದ ಮೈತ್ರಿ ಸರ್ಕಾರದ ಅಳಿವು ಉಳಿವಿನ ಹಿನ್ನೆಲೆಯಲ್ಲಿ ಟೆಂಪಲ್ ರನ್ ಮಾಡ್ತಿರುವ ಸಚಿವ ಹೆಚ್ ಡಿ ರೇವಣ್ಣ ಧರ್ಮಸ್ಥಳ ಶ್ರೀಮಂಜುನಾಥೇಶ್ವರನ ದರ್ಶನ ಪಡೆದರು.
ಉಡುಪಿ ಜಿಲ್ಲೆಯಲ್ಲಿ ದೇವಸ್ಥಾನಗಳಿಗೆ ಭೇಟಿ ನೀಡಿ, ಕಟೀಲು ದುರ್ಗಾಪರಮೇಶ್ವರಿ ದರ್ಶನ ಪಡೆದ ಬಳಿಕ ರೇವಣ್ಣ ಧರ್ಮಸ್ಥಳ ಶ್ರೀಮಂಜುನಾಥೇಶ್ವ ಕ್ಷೇತ್ರಕ್ಕೆ ಭೇಟಿ ನೀಡಿದರು. ಶ್ರೀಕ್ಷೇತ್ರದಲ್ಲಿ ವಿಶೇಷ ಪೂಜೆ ಬಳಿಕ ಅವರು ಸೌತಡ್ಕ ಕ್ಷೇತ್ರಕ್ಕೆ ತೆರಳಿದ್ದಾರೆ.