ETV Bharat / state

ಪಕ್ಷದ ಜವಾಬ್ದಾರಿಯನ್ನು ನಿಷ್ಠೆಯಿಂದ ನಿಭಾಯಿಸುತ್ತೇನೆ: ಸುಳ್ಯದಲ್ಲಿ ಅಭ್ಯರ್ಥಿ ಬದಲಾವಣೆ ಪ್ರಶ್ನೆಗೆ ಸಚಿವ ಎಸ್. ಅಂಗಾರ ಉತ್ತರ - political news

ಮಾರ್ಚ್ 24ರಂದು ತಾಲೂಕಿನಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ ಕಾರ್ಯಕ್ರಮ ನಡೆಯಲಿದ್ದು, ಎಸ್​.ಅಂಗಾರ ಅವರು ಅಧಿಕಾರಿಗಳ ಜೊತೆ ಸಭೆ ನಡೆಸಿದರು.

minister-s-angara-conducted-preliminary-meeting-with-officials
ಪಕ್ಷ ನೀಡಿದ ಜವಾಬ್ದಾರಿಯನ್ನು ನಿಷ್ಠೆಯಿಂದ ನಿಭಾಯಿಸುತ್ತೇನೆ: ಸುಳ್ಯದಲ್ಲಿ ಅಭ್ಯರ್ಥಿ ಬದಲಾವಣೆ ಪ್ರಶ್ನೆಗೆ ಸಚಿವ ಎಸ್.ಅಂಗಾರ ಉತ್ತರ
author img

By

Published : Mar 22, 2023, 8:39 PM IST

ಪಕ್ಷ ನೀಡಿದ ಜವಾಬ್ದಾರಿಯನ್ನು ನಿಷ್ಠೆಯಿಂದ ನಿಭಾಯಿಸುತ್ತೇನೆ: ಸುಳ್ಯದಲ್ಲಿ ಅಭ್ಯರ್ಥಿ ಬದಲಾವಣೆ ಪ್ರಶ್ನೆಗೆ ಸಚಿವ ಎಸ್.ಅಂಗಾರ ಉತ್ತರ

ಕಡಬ (ದಕ್ಷಿಣ ಕನ್ನಡ): ಇಲ್ಲಿಯವರೆಗೂ ನಾನು ಪಕ್ಷದಲ್ಲಿ ಎನನ್ನು ಕೇಳಿಲ್ಲ. ಪಕ್ಷವು ನನಗೆ ಹಲವು ಜವಾಬ್ದಾರಿಗಳನ್ನು ನೀಡಿದ್ದು, ಆ ಎಲ್ಲಾ ಜವಾಬ್ದಾರಿಗಳನ್ನು ನಿಷ್ಠೆಯಿಂದ ನಿಭಾಯಿಸಿದ್ದೇನೆ. ಆದ್ದರಿಂದ ಪಕ್ಷ ಏನು ತೀರ್ಮಾನ ತೆಗೆದುಕೊಳ್ಳುತ್ತದೋ ಅದನ್ನು ಪಾಲಿಸುತ್ತೇನೆ ಎಂದು ಬಂದರು ಮತ್ತು ಒಳನಾಡು ಮತ್ತು ಜಲಸಾರಿಗೆ ಸಚಿವ ಎಸ್​. ಅಂಗಾರ ಹೇಳಿದರು.

ನೂತನ ಕಡಬ ತಾಲೂಕು ಪಂಚಾಯತ್ ಕಟ್ಟಡ, ಮಿನಿ ವಿಧಾನ ಸೌಧ ಕಟ್ಟಡ, ಕೊಯಿಲ ಪಶು ವೈದ್ಯಕೀಯ ಕಾಲೇಜಿನ ಉದ್ಘಾಟನೆ ಮತ್ತು ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ, ಫಲಾನುಭವಿಗಳಿಗೆ ಸವಲತ್ತು ವಿತರಣೆ ಕಾರ್ಯಕ್ರಮಗಳು ಮಾರ್ಚ್​ 24ರಂದು ನಡೆಯಲಿದ್ದು, ಈ ಬಗ್ಗೆ ಕಡಬ ಅಂಬೇಡ್ಕರ್ ಭವನದಲ್ಲಿ ಪೂರ್ವಭಾವಿಯಾಗಿ ಸಚಿವ ಎಸ್.ಅಂಗಾರ ಅವರು ಅಧಿಕಾರಿಗಳ ಸಭೆ ನಡೆಸಿ ಮಾಹಿತಿ ನೀಡಿದರು.

ಸಭೆಯಲ್ಲಿ ಮಾತನಾಡಿದ ಸಚಿವ ಎಸ್.ಅಂಗಾರ ಅವರು, ಕಡಬ ತಾಲೂಕಿಗೆ ಸಂಬಂಧಪಟ್ಟು ಅತಿ ಅಗತ್ಯವಾಗಿದ್ದ ತಾಲೂಕು ಪಂಚಾಯತ್ ಕಟ್ಟಡ, ಕಂದಾಯ ಇಲಾಖೆಗೆ ಸಂಬಂಧ ಪಟ್ಟ ಮಿನಿ ವಿಧಾನಸೌಧ ಕಟ್ಟಡ, ಕೊಯಿಲ ಪಶು ವೈದ್ಯಕೀಯ ಕಾಲೇಜು ಇವುಗಳ ಉದ್ಘಾಟನೆ ನಡೆಸಲಾಗುವುದು. ಅಲ್ಲದೆ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸವಲತ್ತು ವಿತರಣೆಯೂ ನಡೆಸಲಾಗುವುದು ಎಂದು ಹೇಳಿದರು.

ಸುಳ್ಯದಲ್ಲಿ ಈ ಬಾರಿಯ ವಿಧಾನ ಸಭೆ ಚುನಾವಣೆಗೆ ಅಭ್ಯರ್ಥಿ ಬದಲಾವಣೆ ಇದೆಯೇ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಚಿವ ಎಸ್.ಅಂಗಾರ ಅವರು, ‘‘ನಾನು ಈ ತನಕ ಪಕ್ಷದಲ್ಲಿ ಯಾವುದನ್ನೂ ಕೇಳಿಲ್ಲ. ಆದರೂ ಪಕ್ಷ ನನಗೆ ಹಲವು ಜವಾಬ್ದಾರಿಗಳನ್ನು ನೀಡಿದೆ. ನನಗೆ ನೀಡಿದ ಎಲ್ಲಾ ಜವಾಬ್ದಾರಿಗಳನ್ನು ನಿಷ್ಠೆಯಿಂದ ನಿಭಾಯಿಸಿದ್ದೇನೆ. ಆದ್ದರಿಂದ ಪಕ್ಷ ಏನು ತೀರ್ಮಾನ ತೆಗೆದುಕೊಳ್ಳುತ್ತದೋ ಅದನ್ನು ಪಾಲಿಸುತ್ತೇನೆ’’ ಎಂದು ಹೇಳಿದರು.

ಇದನ್ನೂ ಓದಿ : ಕುಮಟಾ ಕ್ಷೇತ್ರದತ್ತ ನಿವೇದಿತ್ ಆಳ್ವಾ ಚಿತ್ತ; ಕೈ ಜಾರುವ ಆತಂಕದಲ್ಲಿ ಟಿಕೆಟ್ ಆಕಾಂಕ್ಷಿಗಳು!

ಕಡಬದಲ್ಲಿ ನಡೆಯುವ ಕಾರ್ಯಕ್ರಮಗಳಿಗೆ ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಆಗಮಿಸುವ ನಿರೀಕ್ಷೆ ಇದೆ. ಮಾತ್ರವಲ್ಲದೆ ರಾಜ್ಯದ ಪಶು ಸಂಗೋಪನಾ ಸಚಿವ ಪ್ರಭು ಚೌಹಾನ್, ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ, ಕೇಂದ್ರ ಸರ್ಕಾರದ ತೋಟಗಾರಿಕೆ ಸಚಿವೆ ಶೋಭಾ ಕರಂದ್ಲಾಜೆ ಸೇರಿದಂತೆ ಹಲವಾರು ಗಣ್ಯರು, ಸಚಿವರು ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ. ಕಾರ್ಯಕ್ರಮದ ಯಶಸ್ವಿಗೆ ಅಧಿಕಾರಿಗಳು ಇಂದಿನಿಂದಲೇ ಕಾರ್ಯಪ್ರವೃತ್ತರಾಗಬೇಕು ಎಂದು ಹೇಳಿದ ಸಚಿವರು ಕಾರ್ಯಕ್ರಮದ ತಯಾರಿಯ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದರು.

ವೇದಿಕೆಯಲ್ಲಿ ಕಡಬ ತಹಶೀಲ್ದಾರ್ ರಮೇಶ್ ಬಾಬು, ಕಡಬ ತಾಲೂಕು ಪಂಚಾಯತಿ ಕಾರ್ಯನಿರ್ವಾಹಣಾಧಿಕಾರಿ ನವೀನ್ ಭಂಡಾರಿ, ಪಿಆರ್‌ಇಡಿ ಯ ಸಹಾಯಕ ಕಾರ್ಯಪಾಲಕ ಅಭಿಯಂತರ ಭರತ್ ಬಿ. ಕಿರಿಯ ಇಂಜಿನಿಯರ್ ಎಸ್.ಎಸ್.ಹುಕ್ಕೇರಿ, ಸೇರಿದಂತೆ ವಿವಿಧ ಅಧಿಕಾರಿಗಳು, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ : ಕೈ ಹಿಡಿದ ಮಾಜಿ ಸಚಿವ ಬಾಬುರಾವ್ ಚಿಂಚನಸೂರು; ಮನೆಯಲ್ಲೇ ಬರಮಾಡಿಕೊಂಡ ಡಿಕೆಶಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.