ETV Bharat / state

ಕಬಕದಲ್ಲಿ ದಾಂಧಲೆ ಮಾಡಿದ SDPI ಕಾರ್ಯಕರ್ತರ ಮೇಲೆ ಕ್ರಮಕ್ಕೆ ಸಚಿವ ಅಂಗಾರ ಸೂಚನೆ - ಕಬಕದಲ್ಲಿ SDPI ಕಾರ್ಯಕರ್ತರ ದಾಂಧಲೆ

ಸ್ವಾತಂತ್ರ್ಯ ರಥಕ್ಕೆ ಕಬಕ ಗ್ರಾಮ ಪಂಚಾಯತ್ ವಠಾರದಲ್ಲಿ ಎಸ್​ಡಿಪಿಐ ಕಾರ್ಯಕರ್ತರು ತಡೆಯೊಡ್ಡಿದ ಘಟನೆ ಸಂಬಂಧ ಮೀನುಗಾರಿಕೆ ಸಚಿವ ಎಸ್. ಅಂಗಾರರವರು ಕ್ರಮಕ್ಕೆ ಆಗ್ರಹಿಸಿದ್ದಾರೆ..

Minister S Angara
ಸಚಿವ ಅಂಗಾರ
author img

By

Published : Aug 15, 2021, 10:19 PM IST

ಮಂಗಳೂರು : ಪುತ್ತೂರು ತಾಲೂಕಿನ ಕಬಕ ಗ್ರಾಪಂ ಸ್ವಾತಂತ್ರ್ಯ ರಥದಲ್ಲಿ ಸಾವರ್ಕರ್ ಫೋಟೋ ತೆಗೆಯಬೇಕೆಂದು ದಾಂಧಲೆ ನಡೆಸಿರುವ ಎಸ್​​ಡಿಪಿಐ ಕಾರ್ಯಕರ್ತರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡುವೆ ಎಂದು ಮೀನುಗಾರಿಕೆ ಸಚಿವ ಎಸ್. ಅಂಗಾರ ಹೇಳಿದ್ದಾರೆ.

ಮೀನುಗಾರಿಕೆ ಸಚಿವ ಎಸ್. ಅಂಗಾರ ಪ್ರತಿಕ್ರಿಯೆ ನೀಡಿರುವುದು..

ಈ ಕುರಿತಂತೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 75ನೇ ಸ್ವಾತಂತ್ರ್ಯ ದಿನಾಚರಣೆ ಅಮೃತ ಮಹೋತ್ಸವದ ಅಂಗವಾಗಿ ಪುತ್ತೂರು ತಾಲೂಕಿನ ಕಬಕ ಗ್ರಾಪಂ ವತಿಯಿಂದ ನಡೆದ ರಥಯಾತ್ರೆಯಲ್ಲಿ ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಅವರ ಭಾವಚಿತ್ರವನ್ನು ಅಳವಡಿಸಲಾಗಿತ್ತು. ಆದರೆ, ಕಬಕ ಗ್ರಾಪಂನ ಎಸ್​​ಡಿಪಿಐ ಸದಸ್ಯ ನಜೀರ್ ವಿರೋಧಿಸಿದ್ದಾರೆ. ಇದನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದರು.

ಇದರ ಜೊತೆಗೆ ಅಜೀದ್, ನೌಶಾದ್, ಅದ್ದು, ಸಮೀರ್ ಇವರುಗಳು ಪಂಚಾಯತ್ ಅಧ್ಯಕ್ಷ ಹಾಗೂ ಅಧ್ಯಕ್ಷರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಘಟನೆ ನಡೆಸಿದ ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡುತ್ತೇನೆ ಎಂದು ಸಚಿವರು ಹೇಳಿದರು.

ಘಟನೆ ಹಿನ್ನೆಲೆ : ಕಬಕ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಂಚರಿಸಲಿರುವ ಸ್ವಾತಂತ್ರ್ಯ ರಥಕ್ಕೆ ಕಬಕ ಗ್ರಾಪಂ ವಠಾರದಲ್ಲಿ ಅಧ್ಯಕ್ಷರು ಚಾಲನೆ ನೀಡಿ ಜೈಕಾರ ಹಾಕುತ್ತಿದ್ದಂತೆ ಎಸ್​ಡಿಪಿಐ ಕಾರ್ಯಕರ್ತರು ಧಿಕ್ಕಾರ ಕೂಗಿದರು. ಬಳಿಕ ಸ್ವಾತಂತ್ರ್ಯ ರಥಕ್ಕೆ ತಡೆ ಉಂಟು ಮಾಡಿದರು.

ಈ ವೇಳೆ ಪರಸ್ಪರ ವಾಗ್ವಾದ ನಡೆಯಿತು. ಗ್ರಾಪಂ ಅಧ್ಯಕ್ಷರು ಹಾಗೂ ಪಿಡಿಒ ಸಮಾಧಾನ ಮಾಡಿದರೂ ಕೇಳಿಸಿಕೊಳ್ಳದ ತಂಡ ಸಾವರ್ಕರ್ ಫೋಟೊ ತೆಗೆದು ಟಿಪ್ಪು ಸುಲ್ತಾನ್ ಫೋಟೊ ಅಳವಡಿಸುವಂತೆ ಪಟ್ಟು ಹಿಡಿಯಿತು.

ಓದಿ: ಪುತ್ತೂರು: ಸಾವರ್ಕರ್ ಫೋಟೋ ತೆಗೆದು ಟಿಪ್ಪು ಫೋಟೋ ಹಾಕುವಂತೆ SDPI ಕಾರ್ಯಕರ್ತರ ಪಟ್ಟು

ಪುತ್ತೂರು ನಗರ ಠಾಣಾ ಇನ್ಸ್ ಪೆಕ್ಟರ್ ಗೋಪಾಲ ನಾಯ್ಕ್ ನೇತೃತ್ವದ ಪೊಲೀಸರ ತಂಡ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರ ಗುಂಪನ್ನು ಚದುರಿಸಿತು. ಬಳಿಕ ಗ್ರಾಪಂ ಅಧಿಕಾರಿಗಳು ಎಸ್​ಡಿಪಿಐ ಕಾರ್ಯಕರ್ತ ವಿರುದ್ಧ ದೂರು ದಾಖಲಿಸಿದ್ದರು. ಪ್ರಕರಣ ಸಂಬಂಧ ಪೊಲೀಸರು ಮೂವರು ಎಸ್​ಡಿಪಿಐ ಕಾರ್ಯಕರ್ತರನ್ನು ಬಂಧಿಸಿದ್ದಾರೆ.

ಓದಿ: ಕಬಕ ಗ್ರಾಪಂನಲ್ಲಿ ಗ್ರಾಮ ಸ್ವರಾಜ್ಯ ರಥಕ್ಕೆ ಅಡ್ಡಿ : ಮೂವರು SDPI ಕಾರ್ಯಕರ್ತರ ಬಂಧನ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.