ಮಂಗಳೂರು: ಸಿಡಿ ಪ್ರಕರಣ ವಿಚಾರದಲ್ಲಿ ವೈಯಕ್ತಿಕವಾಗಿ ಅದರ ಬಗ್ಗೆ ಮಾತನಾಡಲು ಇಷ್ಟಪಡುವುದಿಲ್ಲ ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.
ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ಚುನಾವಣಾ ಪ್ರಚಾರದಲ್ಲಿ ಪಕ್ಷ ನನ್ನ ಹೆಸರನ್ನು ಹಾಕಿಲ್ಲ. ಆದರೆ, ಮಸ್ಕಿಯಲ್ಲಿ ಪ್ರಚಾರ ಮಾಡಲು ಹೋಗಲು ನಿರ್ಧರಿಸಿದ್ದೇನೆ ಎಂದರು.
ರಾಜ್ಯದಲ್ಲಿ ಕೊರೊನಾ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ನಿನ್ನೆ ಮಾರ್ಗಸೂಚಿ ಬಗ್ಗೆ ಹೇಳಿಕೆ ನೀಡಿದ್ದರು. ಇವತ್ತು ಮಾರ್ಗಸೂಚಿಯಲ್ಲಿ ಏನೇನು ಇರುತ್ತದೆ ಎನ್ನುವುದನ್ನು ಸರ್ಕಾರವು ಪ್ರಕಟಿಸಲಿದೆ. ಎರಡು ವಾರಗಳ ಕಾಲ ಚಳವಳಿಗೆ ನಿರ್ಬಂಧ ಹೇರಲಾಗಿದೆ. ಬೆಂಗಳೂರಿನಲ್ಲಿ ಚಳವಳಿ ಮೇಲೆ ಹೆಚ್ಚಿನ ನಿರ್ಬಂಧ ಹೇರಲಾಗಿದೆ ಎಂದರು.