ಪುತ್ತೂರು (ದಕ್ಷಿಣ ಕನ್ನಡ): ರಾಜ್ಯದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ರೈಫಲ್ ತರಬೇತಿ ನೀಡುವಂತ ತಾಲಿಬಾನ್ ಸಂಸ್ಕೃತಿಯ ಸರ್ಕಾರ ಇದೆ ಎಂಬ ವಿಪಕ್ಷ ಉಪನಾಯಕ ಯು.ಟಿ.ಖಾದರ್ ಹೇಳಿಕೆಗೆ ಕನ್ನಡ ಮತ್ತು ಸಂಸ್ಕತಿ ಇಲಾಖೆ ಸಚಿವ ಸುನೀಲ್ ಕುಮಾರ್ ತಿರುಗೇಟು ನೀಡಿದ್ದಾರೆ.
ಪುತ್ತೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ತಾಲಿಬಾನ್ ಸಂಸ್ಕತಿಯ ಬಗ್ಗೆ ಮಾತನಾಡುವ ಯು.ಟಿ.ಖಾದರ್ ಜಿಲ್ಲೆಯ ಶಾಂತಿ ಕದಡಲು ಎಷ್ಟು ಕೊಡುಗೆ ನೀಡಿದ್ದಾರೆ ಎನ್ನುವುದು ಜನತೆಗೆ ಗೊತ್ತಿದೆ ಎಂದು ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ ಸರ್ಕಾರ ಇದ್ದ ಸಂದರ್ಭದಲ್ಲಿ ಪ್ರಾಯೋಜಿತ ಹತ್ಯೆಗಳು ನಡೆದಿವೆ. ಉಡುಪಿ, ಕೊಡಗು ಮತ್ತು ಉತ್ತರ ಕನ್ನಡದಲ್ಲಿ ನಿರ್ದಿಷ್ಟ ಸಮುದಾಯ ಮತ್ತು ಸಂಘಟನೆಗಳನ್ನು ಗುರಿಯಾಗಿಸಿ ಹತ್ಯೆ ಮಾಡಲಾಗಿತ್ತು. ಆದರೆ, ಕಳೆದ 4 ವರ್ಷಗಳಿಂದ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಇಂತಹ ಘಟನೆಗಳಿಗೆ ಕಡಿವಾಣ ಹಾಕಲಾಗಿದೆ ಎಂದರು.
ಇದನ್ನೂ ಓದಿ: ಶಾಲಾ ವಿದ್ಯಾರ್ಥಿಗಳಿಗೆ ರೈಫಲ್ ತರಬೇತಿ, ತಾಲಿಬಾನ್ ಸಂಸ್ಕೃತಿ ಬಿಂಬಿಸುತ್ತದೆ: ಯು ಟಿ ಖಾದರ್