ಮಂಗಳೂರು: ಕರಾವಳಿಯಲ್ಲಿ ಹೆಲ್ತ್ ಟೂರಿಸಂ ಹಾಗೂ ಟೆಂಪಲ್ ಟೂರಿಸಂ ಬಗ್ಗೆ ವಿಫುಲ ಅವಕಾಶವಿದೆ. ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಹಾಗೂ ಅಧಿಕಾರಿಗಳೊಂದಿಗೆ ನಾಳೆ ಚರ್ಚೆ ನಡೆಸಲಾಗುತ್ತದೆ ಎಂದು ಪರಿಸರ ಮತ್ತು ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ.
ಪಿಲಿಕುಳ ಜೈವಿಕ ಉದ್ಯಾನವನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಅಧಿಕಾರಿಗಳೊಂದಿಗೆ ಸಭೆ ನಡೆಸಿ ಬಳಿಕ ಮಾತನಾಡಿದರು. ಪಕ್ಕದ ಕೇರಳ, ಗೋವಾ ರಾಜ್ಯಗಳಿಗಿಂತ ವಿಭಿನ್ನವಾಗಿ ಪ್ರವಾಸೋದ್ಯಮಕ್ಕೆ ಪ್ರೋತ್ಸಾಹ ನೀಡಬಹುದು. ಈ ನಿಟ್ಟಿನಲ್ಲಿ ಪ್ರಯತ್ನ ಮಾಡಲಾಗುತ್ತದೆ ಎಂದರು. ಈ ವೇಳೆ ದ.ಕ ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ, ಶಾಸಕ ಉಮಾನಾಥ ಕೋಟ್ಯಾನ್, ಪಿಲಿಕುಳ ಜೈವಿಕ ಉದ್ಯಾನವನದ ನಿರ್ದೇಶಕ ಜಯಪ್ರಕಾಶ್ ಭಂಡಾರಿ ಮತ್ತಿತರರು ಉಪಸ್ಥಿತರಿದ್ದರು.
ಓದಿ: ಬೈರಾಡಿ ಕೆರೆ ಅಭಿವೃದ್ಧಿಗೆ ಮೊದಲ ಹಂತದಲ್ಲಿ 25 ಲಕ್ಷ ರೂ. ಅನುದಾನ: ಸಚಿವ ಸಿ.ಪಿ.ಯೋಗೇಶ್ವರ್