ETV Bharat / state

ಸ್ಥಳೀಯ ರೈತರಿಂದಲೇ ಕುಚ್ಚಲಕ್ಕಿ ಸಂಗ್ರಹಿಸಿ ಪಡಿತರದಾರರಿಗೆ ವಿತರಿಸಿ: ಸಚಿವರಿಂದ ಸಿಎಂಗೆ ಮನವಿ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗೆ ಬೇಕಾಗುವ ಕುಚಲಕ್ಕಿಯನ್ನು ಸ್ಥಳೀಯ ರೈತರಿಂದ ಸಂಗ್ರಹಿಸಿ ಅಲ್ಲಿಯ ಪಡಿತರ ಇರುವ ಜನಸಾಮಾನ್ಯರಿಗೆ ವಿತರಿಸಬೇಕೆಂದು ಸಿಎಂಗೆ ಮನವಿ ಮಾಡಲಾಯಿತು.

ಸಚಿವರಿಂದ ಸಿಎಂಗೆ ಮನವಿ
ಸಚಿವರಿಂದ ಸಿಎಂಗೆ ಮನವಿ
author img

By

Published : Feb 19, 2021, 4:32 AM IST

ಮಂಗಳೂರು/ಬೆಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪಡಿತರದ ಮೂಲಕ ವಿತರಿಸುತ್ತಿರುವ ಕುಚಲಕ್ಕಿ ಕಳಪೆ ಗುಣಮಟ್ಟದ್ದಾಗಿರುವುದರಿಂದ ಸ್ಥಳೀಯ ರೈತರಿಂದಲೆ ಕುಚ್ಚಲಕ್ಕಿ ಪಡೆದು ಈ ಎರಡು ಜಿಲ್ಲೆಯ ಪಡಿತರದಾರರಿಗೆ ನೀಡುವಂತೆ ಕರಾವಳಿಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಮತ್ತು ಅಂಗಾರ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ.

ಜನಸಾಮಾನ್ಯರು ಪಡಿತರದಲ್ಲಿ ಸಿಗುವ ಕುಚ್ಚಲಕ್ಕಿಯನ್ನು ಉಪಯೋಗಿಸದೆ ಕಡಿಮೆ ದರಕ್ಕೆ ಮಾರಾಟ ಮಾಡಿ ಹೆಚ್ಚು ದರದ ಕೆಂಪು ಕುಚಲಕ್ಕಿಯನ್ನು ಖರೀದಿಸುತ್ತಿದ್ದಾರೆ. ಕೆಲವು ಕಡೆ ಪಡಿತರ ಅಕ್ಕಿಯನ್ನೇ ಸ್ವೀಕರಿಸುತ್ತಿಲ್ಲ. ಇದರಿಂದಾಗಿ ಪಡಿತರ ಮೂಲಕ ತೆಗೆದುಕೊಂಡ ಕಳಪೆ ಗುಣಮಟ್ಟದ ಅಕ್ಕಿಯನ್ನು ಮಾರಾಟ ಮಾಡಿದ ಹಿನ್ನೆಲೆಯಲ್ಲಿ ಕ್ರಿಮಿನಲ್ ಕೇಸುಗಳು ದಾಖಲಾಗುತ್ತಿವೆ. ಆದ್ದರಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗೆ ಬೇಕಾಗುವ ಕುಚಲಕ್ಕಿಯನ್ನು ಸ್ಥಳೀಯ ರೈತರಿಂದ ಸಂಗ್ರಹಿಸಿ ಅಲ್ಲಿಯ ಪಡಿತರ ಇರುವ ಜನಸಾಮಾನ್ಯರಿಗೆ ವಿತರಿಸಬೇಕೆಂದು ಮನವಿ ಮಾಡಿದರು.

ಸಚಿವರಿಂದ ಸಭೆ
ಸಚಿವರಿಂದ ಸಭೆ
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗೆ ಸುಮಾರು 98 ಸಾವಿರ ಕ್ವಿಂಟಲ್ ಪಡಿತರ ಅಕ್ಕಿಯ ಅಗತ್ಯವಿದ್ದು, ಒಟ್ಟು ಸರಾಸರಿ ತಿಂಗಳಿಗೆ ಒಂದು ಲಕ್ಷ ಕ್ವಿಂಟಲ್ ಆಗತ್ಯವಿದೆ. ಇದಕ್ಕೆ ಬೇಕಾಗುವಷ್ಟು ಭತ್ತದ ಬೆಳೆ ಅವಳಿ ಜಿಲ್ಲೆಯಲ್ಲಿ ಲಭ್ಯವಿಲ್ಲದೇ ಇರುವುದರಿಂದ ಮೈಸೂರು, ಮಂಡ್ಯ ಮುಂತಾದೆಡೆಯಿಂದ ಜಯ ಮತ್ತು ಇನ್ನಿತರ ಭತ್ತದ ತಳಿಯ ಫಸಲನ್ನು ಸಂಗ್ರಹಿಸಿ ಕುಚಲಕ್ಕಿಯನ್ನು ತಯಾರಿಸುವ ಕುರಿತು ಮುಖ್ಯ ಮಂತ್ರಿಗಳಿಗೆ ಮನವಿ ನೀಡಲಾಯಿತು. ನಂತರ ವಿಧಾನಸೌಧದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಕಚೇರಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರಾದ ಉಮೇಶ್ ಕತ್ತಿ, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ, ರಾಜ್ಯ ಆಹಾರ ನಿಗಮದ ಉಪಾಧ್ಯಕ್ಷರಾದ ಕಿರಣ್ ಕೊಡ್ಗಿ, ಶಾಸಕರಾದ ಉಮಾನಾಥ್ ಕೋಟ್ಯಾನ್, ಸಂಜೀವ ಮಠಂದೂರು ಸಭೆ ನಡೆಸಿದರು. ಮುಂದಿನ ಒಂದು ವಾರದಲ್ಲಿ ಕರಾವಳಿ ಜಿಲ್ಲೆಯ ಅಕ್ಕಿ ಗಿರಣಿ ಮಾಲೀಕರು ಮತ್ತು ಆಹಾರ ನಿಗಮದ ಅಧಿಕಾರಿಗಳು ಮತ್ತು ಅವಳ ಜಿಲ್ಲೆಯ ಜಿಲ್ಲಾಧಿಕಾರಿಗಳ ಸಮಕ್ಷಮ ಸಭೆ ನಡೆಸಿ ಕುಚಲಕ್ಕಿಯ ತಯಾರಿಕೆಗಾಗಿ ಭತ್ತ ಖರೀದಿ, ಸಂಸ್ಕರಣೆ, ವಿತರಣೆ ಕುರಿತು ಸೂಕ್ತ ಮಾರ್ಗೋಪಾಯ ಕಂಡುಹಿಡಿಯಲು ಅಗತ್ಯ ಕ್ರಮಕೈಗೊಳ್ಳುವಂತೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳಿಗೆ ಸಚಿವ ಉಮೇಶ್ ಕತ್ತಿ ಸೂಚಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.