ETV Bharat / state

ಅಪ್ರಾಪ್ತೆ ಅತ್ಯಾಚಾರ ಮಾಡಿ ವಿಡಿಯೋ ಚಿತ್ರೀಕರಿಸಿ ಬೆದರಿಕೆ: ಆರೋಪಿಗೆ 15 ವರ್ಷ ಶಿಕ್ಷೆ - ಮಂಗಳೂರಿನಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ

ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆಸಿ, ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್​ ಮಾಡುವುದಾಗಿ ಬೆದರಿಕೆ ಹಾಕಿದ್ದ ಆರೋಪಿಗೆ 15 ವರ್ಷಗಳ ಕಾರಾಗೃಹ ಶಿಕ್ಷೆ ವಿಧಿಸಲಾಗಿದೆ. ಜಿಲ್ಲಾ ಮತ್ತು ಸತ್ರ ಹಾಗೂ ಎಫ್ ಟಿಎಸ್ ಸಿ - 2 ನ್ಯಾಯಾಲಯ ಈ ತೀರ್ಪು ನೀಡಿದೆ.

ಸೀತಾರಾಮ ಶಿಕ್ಷೆಗೊಳಗಾದ ಆರೋಪಿ
ಸೀತಾರಾಮ ಶಿಕ್ಷೆಗೊಳಗಾದ ಆರೋಪಿ
author img

By

Published : Oct 7, 2022, 11:37 AM IST

ಮಂಗಳೂರು: ಅಪ್ರಾಪ್ತೆ ಅತ್ಯಾಚಾರಗೈದು, ವಿಡಿಯೋ ಚಿತ್ರೀಕರಿಸಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುವ ಬೆದರಿಕೆಯೊಡ್ಡಿದ್ದ, ಆರೋಪಿಗೆ ದಕ್ಷಿಣ ಕನ್ನಡ ಜಿಲ್ಲಾ ಮತ್ತು ಸತ್ರ ಹಾಗೂ ಎಫ್​ಟಿಎಸ್​ಸಿ - 2 ನ್ಯಾಯಾಲಯ 15 ವರ್ಷಗಳ ಕಾರಾಗೃಹ ಶಿಕ್ಷೆ ವಿಧಿಸಿದೆ. ತೋಡಾರು ಗ್ರಾಮ ನಿವಾಸಿ ಸೀತಾರಾಮ ಶಿಕ್ಷೆಗೊಳಗಾದ ಆರೋಪಿ. ಈತನ ಮೇಲಿರುವ ಆರೋಪ ಸಾಬೀತಾಗಿರುವ ಹಿನ್ನೆಲೆ ಕಾರಾಗೃಹ ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಲಾಗಿದೆ.

ಸೀತಾರಾಮ ತನ್ನ ಸಂಬಂಧಿಯಾಗಿರುವ ಬಾಲಕಿಯನ್ನು 2019ರ ಜನವರಿ 8ರಂದು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ನಡೆಸಿದ್ದಾನೆ‌. ಅಲ್ಲದೆ ಕೃತ್ಯದ ವಿಡಿಯೋ ಚಿತ್ರೀಕರಿಸಿ ವೈರಲ್ ಮಾಡುವುದಾಗಿ ಬೆದರಿಕೆಯನ್ನೊಡ್ಡಿದ್ದಾನೆ. ಈ ವಿಚಾರವನ್ನು ಸಂತ್ರಸ್ತ ಬಾಲಕಿ ಮನೆಯಲ್ಲಿ ಹೇಳಿದ್ದಾಳೆ. ಆ ಬಳಿಕ ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ಸರ್ಕಾರಿ ನೌಕರ ಮತ್ತು ಸಹಚರರಿಂದ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ..

ಪ್ರಕರಣದ ತನಿಖೆ ನಡೆಸಿದ ಬಜ್ಪೆ ಠಾಣಾ ನಿರೀಕ್ಷಕ ಕೆ.ಆರ್.ನಾಯಕ್ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡ ಜಿಲ್ಲಾ ಮತ್ತು ಸತ್ರ ಹಾಗೂ ಎಫ್ ಟಿಎಸ್ ಸಿ - 2 ನ್ಯಾಯಾಲಯ ಆರೋಪಿ ಸೀತಾರಾಮ ತಪ್ಪಿತಸ್ಥನೆಂದು ಘೋಷಣೆ ಮಾಡಿ, 15 ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.