ಬೆಳ್ತಂಗಡಿ(ದಕ್ಷಿಣ ಕನ್ನಡ): ತಾಲೂಕಿನ ಕಳೆಂಜ ಗ್ರಾಮದ ಸ್ವಾಮಿ ವಿವೇಕಾನಂದ ಸೇವಾಶ್ರಮ ಟ್ರಸ್ಟ್ ನೇತೃತ್ವದಲ್ಲಿ ಬಂಡೇರಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ನಂದಗೋಕುಲ ಗೋಶಾಲೆಯನ್ನ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ನಂದಗೋಕುಲ ಗೋಶಾಲೆಯಲ್ಲಿ ಗೋವುಗಳ ರಕ್ಷಣೆ, ನಿರ್ಗತಿಕ, ಅನಾಥ ಹಾಗೂ ಅಶಕ್ತ ಗೋವುಗಳ ರಕ್ಷಣೆಗೆ ಪೂರಕವಾದ ವಾತಾವರಣ ನಿರ್ಮಾಣವಾಗಲಿದೆ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಜಯಂತ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ಸುಬ್ರಹ್ಮಣ್ಯ ಗೌಡ ಕೈಕುರೆ, ಶ್ರೀನಿವಾಸ್ ರಾವ್, ಟ್ರಸ್ಟ್ನ ಅಧ್ಯಕ್ಷ, ಉಜಿರೆ ದಂತ ವೈದ್ಯ ಡಾ. ಎಂ.ಎಂ.ದಯಾಕರ್ ಮತ್ತಿತರರು ಉಪಸ್ಥಿತರಿದ್ದರು.