ETV Bharat / state

ಪುತ್ತೂರಲ್ಲಿ ಫಲಾನುಭವಿಗಳಿಗೆ ನಿವೇಶನ ಹಕ್ಕುಪತ್ರ ವಿತರಿಸಿದ ಶಾಸಕ ಸಂಜೀವ ಮಠಂದೂರು - Prime Minister Narendra Modi

ಕೊರೊನಾ ಲಾಕ್​ಡೌನ್​ ಹಿನ್ನೆಲೆ ಜಿಲ್ಲೆಯಲ್ಲಿ ನಿವೇಶನ ಹಕ್ಕುಪತ್ರ ವಿತರಣೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿತ್ತು. ಇದೀಗ ಈ ಕಾರ್ಯಕ್ಕೆ ಶಾಸಕ ಸಂಜೀವ ಮಠಂದೂರು ಚಾಲನೆ ನೀಡಿದ್ದಾರೆ. ಇಲ್ಲಿನ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸಭಾಭವನದಲ್ಲಿ ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಿದ್ದಾರೆ.

MLA issued the household Charter to the beneficiaries in Puttur
ಪುತ್ತೂರಲ್ಲಿ ಫಲಾನುಭವಿಗಳಿಗೆ ನಿವೇಶನ ಹಕ್ಕುಪತ್ರ ವಿತರಿಸಿದ ಶಾಸಕ ಸಂಜೀವ ಮಠಂದೂರು
author img

By

Published : Jun 6, 2020, 5:26 PM IST

ಪುತ್ತೂರು (ದಕ್ಷಿಣ ಕನ್ನಡ): ಕೊರೊನಾ ಮಹಾಮಾರಿಯಿಂದ ರಕ್ಷಣೆ ಮತ್ತು ಆರೋಗ್ಯ ಕಾಪಾಡುವ ದೃಷ್ಟಿಯಿಂದ ಈ ಬಾರಿ ಹಕ್ಕುಪತ್ರ ವಿತರಣೆಯಲ್ಲಿ ತಡವಾಗಿದೆ. ಆದರೆ ಕಳೆದ 5 ವರ್ಷದಿಂದ ನಮ್ಮ ರಾಜ್ಯದಲ್ಲಿ ಹಕ್ಕುಪತ್ರಗಳನ್ನು ಕಾಲಮಿತಿಯಲ್ಲೇ ವಿತರಿಸಲಾಗಿದೆ ಎಂದು ಶಾಸಕ ಸಂಜೀವ ಮಠಂದೂರು ತಿಳಿಸಿದ್ದಾರೆ.

ಪುತ್ತೂರಲ್ಲಿ ಫಲಾನುಭವಿಗಳಿಗೆ ನಿವೇಶನ ಹಕ್ಕುಪತ್ರ ವಿತರಿಸಿದ ಶಾಸಕ ಸಂಜೀವ ಮಠಂದೂರು

ಮುಂದಿನ ಜು. 5ರ ಒಳಗೆ ಉಳಿದ ಎಲ್ಲಾ ಅರ್ಹ ಫಲಾನುಭವಿಗಳಿಗೂ ಹಕ್ಕುಪತ್ರ ವಿತರಣೆ ಮಾಡುವ ಮೂಲಕ ಜಿಲ್ಲೆಯಲ್ಲಿ ಪುತ್ತೂರಿನಲ್ಲಿ ನೂರಕ್ಕೆ ನೂರು ಹಕ್ಕುಪತ್ರ ವಿತರಣೆ ಆಗಬೇಕು ಎಂದರು. ತಾಲೂಕು ಆಡಳಿತದಿಂದ ಇಲ್ಲಿನ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸಭಾಭವನದಲ್ಲಿ ನಡೆದ ಹಕ್ಕುಪತ್ರ ವಿತರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಮಾಡಿದರು.

ಫೆಬ್ರವರಿ ಬಳಿಕ ಅಧಿವೇಶನ ಹಾಗೂ ಕೊರೊನಾದಿಂದಾಗಿ ಹಕ್ಕುಪತ್ರ ಕೊಡಲಾಗಿಲ್ಲ. ಹಾಗೆಂದು ಯಾರೂ ಕೂಡಾ ಹಕ್ಕುಪತ್ರ ಪಡೆಯುವಲ್ಲಿ ವಂಚಿತರಾಗಬಾರದು. ಪುತ್ತೂರಿನಲ್ಲಿ 13,757 ಜನರು 94 ಸಿಗೆ ಅರ್ಜಿ ಸಲ್ಲಿಸಿದ್ದರು. ಈಗಾಗಲೇ 7,759 ಮಂದಿಗೆ 94 ಸಿ ಮಂಜೂರಾಗಿದೆ. 5,900 ಅರ್ಜಿಗಳು ತಿರಸ್ಕೃತಗೊಂಡಿವೆ. ನಗರಸಭೆ ವ್ಯಾಪ್ತಿಯಲ್ಲಿ 94 ಸಿಸಿ 87 ಅರ್ಜಿಗಳು ಇನ್ನೂ ಬಾಕಿ ಇವೆ. 94 ಸಿ ಮತ್ತು 94 ಸಿಸಿ ಸೇರಿ ಒಟ್ಟು ಸುಮಾರು 350 ಅರ್ಜಿಗಳು ಬಾಕಿ ಇವೆ. ಅವೆಲ್ಲವನ್ನು ಜು. 5ಕ್ಕೆ ವಿತರಣೆ ಮಾಡುವ ಕೆಲಸ ಆಗಬೇಕು ಎಂದು ತಾಲೂಕು ಆಡಳಿತಕ್ಕೆ ಸೂಚಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.