ETV Bharat / state

ಮೆದುಳು ನಿಷ್ಕ್ರಿಯಗೊಂಡಿದ್ದ ಮಗನ ಅಂಗಾಂಗ ದಾನ ಮಾಡಿದ್ದ ಪೋಷಕರು.. ಸಂತ್ರಸ್ತ ಕುಟುಂಬಕ್ಕೆ ನೆರವು ಒದಗಿಸಿದ ಶಾಸಕ ಖಾದರ್ - UT khadar

ಗಂಭೀರವಾಗಿ ಗಾಯಗೊಂಡು ಮೆದುಳು ನಿಷ್ಕ್ರಿಯಗೊಂಡಿದ್ದ ಮಗನ ಅಂಗಾಂಗ ದಾನ ಮಾಡಿ ಸಮಾಜಕ್ಕೆ ಮಾದರಿಯಾಗಿದ್ದ ಸಂತ್ರಸ್ತ ಕುಟುಂಬಕ್ಕೆ ಮುಖ್ಯಮಂತ್ರಿಯವರ ವಿಶೇಷ ಅನುದಾನದಿಂದ 5 ಲಕ್ಷ ರೂಪಾಯಿ ಪರಿಹಾರ ತೆಗೆಸಿಕೊಟ್ಟ ಶಾಸಕ ಯುಟಿ ಖಾದರ್.

mla-khader-gave-5-lakh-compensation-to-the-victim-family
ಮೆದುಳು ನಿಷ್ಕ್ರಿಯಗೊಂಡಿದ್ದ ಮಗನ ಅಂಗಾಂಗ ದಾನ ಮಾಡಿದ್ದ ಪೋಷಕರು, ಸಂತ್ರಸ್ತ ಕುಟುಂಬಕ್ಕೆ 5 ಲಕ್ಷ ಪರಿಹಾರ ದೊರಕಿಸಿ ಕೊಟ್ಟ ಶಾಸಕ ಖಾದರ್
author img

By

Published : Mar 23, 2023, 3:32 PM IST

ಉಳ್ಳಾಲ(ದಕ್ಷಿಣ ಕನ್ನಡ): ಬಸ್ಸಿನಿಂದ ಬಿದ್ದು ಗಂಭೀರವಾಗಿ ಗಾಯಗೊಂಡ ಪಿ.ಯು ವಿದ್ಯಾರ್ಥಿಯ ಮೆದುಳು ನಿಷ್ಕ್ರಿಯಗೊಂಡಿದ್ದ ಪರಿಣಾಮ ಪರಿಣಾಮ ಪೋಷಕರು ಆತನ ಅಂಗಾಂಗ ದಾನ ಮಾಡಿ ಸಮಾಜಕ್ಕೆ ಮಾದರಿಯಾಗಿದ್ದರು. ಸಂತ್ರಸ್ತ ಕುಟುಂಬಕ್ಕೆ ಶಾಸಕ ಹಾಗೂ ವಿರೋಧ ಪಕ್ಷದ ಉಪನಾಯಕ ಯು ಟಿ ಖಾದರ್ ಅವರು ಮುಖ್ಯಮಂತ್ರಿಯವರ ವಿಶೇಷ ಅನುದಾನದಿಂದ 5 ಲಕ್ಷ ರೂಪಾಯಿ ಪರಿಹಾರ ತೆಗೆಸಿ ಕೊಟ್ಟಿದ್ದಾರೆ.

ಉಳ್ಳಾಲ ಮಾಸ್ತಿಕಟ್ಟೆ, ಬೈದೆರೆಪಾಲು ನಿವಾಸಿಗಳಾದ ತ್ಯಾಗರಾಜ್, ಮಮತಾ ಕರ್ಕೇರ ದಂಪತಿಯ ಪ್ರಥಮ ಪುತ್ರ ಯಶರಾಜ್ (16) ಕಳೆದ ಸೆಪ್ಟೆಂಬರ್​ 7 ರಂದು ಬೆಳಗ್ಗೆ ಉಳ್ಳಾಲದಿಂದ ಸಿಟಿ ಬಸ್ಸಿನಲ್ಲಿ ಮಂಗಳೂರಿನ ಕಾಲೇಜಿಗೆ ಪ್ರಯಾಣಿಸುತ್ತಿದ್ದಾಗ ಬಸ್ಸಿನಿಂದ ಹೊರಗೆಸೆಯಲ್ಪಟ್ಟಿದ್ದರು. ತಲೆಗೆ ಗಂಭೀರ ಗಾಯಗೊಂಡ ಯಶರಾಜನ್ನು ನಗರದ ಇಂಡಿಯಾನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸೆ.13 ರಂದು ಮಧ್ಯಾಹ್ನ ಯಶರಾಜ್ ಮೆದುಳು ನಿಷ್ಕ್ರಿಯಗೊಂಡಿರುವುದನ್ನು ವೈದ್ಯರು ಘೋಷಿಸಿದ್ದರು. ಪೋಷಕರ ನಿರ್ಧಾರದಂತೆ ಯಶರಾಜ್ ಅಂಗಾಂಗಗಳನ್ನು ದಾನ ಮಾಡಲಾಗಿತ್ತು.

ಮಾತು ಕೊಟ್ಟಂತೆ ಪರಿಹಾರ ಕೊಡಿಸಿದ ಶಾಸಕ : ಸಾವಲ್ಲೂ ಸಾರ್ಥಕತೆ ಮೆರೆದ ಯಶರಾಜ್ ಮನೆಗೆ ಭೇಟಿ ನೀಡಿದ ಮಂಗಳೂರು ಕ್ಷೇತ್ರದ ಶಾಸಕ ಯು ಟಿ ಖಾದರ್ ಅವರು ಮುಖ್ಯಮಂತ್ರಿಗಳ ವಿಶೇಷ ಅನುದಾನದಿಂದ‌ ಪರಿಹಾರ ಕೊಡಿಸುವುದಾಗಿ ಮಾತು ಕೊಟ್ಟಿದ್ದಲ್ಲದೆ ತಮ್ಮ ಆಪ್ತ ಸಹಾಯಕರ ಮೂಲಕವೇ ಎಲ್ಲಾ ದಾಖಲೆಗಳನ್ನು ಸರ್ಕಾರಕ್ಕೆ ಸಲ್ಲಿಸಿದ್ದರು. ಇದೀಗ ಯಶರಾಜ್ ತಂದೆ ತ್ಯಾಗರಾಜ್ ಅವರ ಬ್ಯಾಂಕ್ ಖಾತೆಗೆ ಮುಖ್ಯಮಂತ್ರಿಗಳ ವಿಶೇಷ ಅನುದಾನದಿಂದ 5 ಲಕ್ಷ ರೂಪಾಯಿ ಜಮೆ ಆಗಿದೆ.

ಅಂಗಾಂಗ ದಾನದ ಬಗ್ಗೆ ಜನಜಾಗೃತಿ ಮೂಡಿಸಬೇಕು : ಈ ಬಗ್ಗೆ ಪ್ರತಿಕ್ರಿಯಿಸಿದ ತ್ಯಾಗರಾಜ್ ಅವರು, ನೊಂದ ಕುಟುಂಬಕ್ಕೆ ಕೇಳದೇನೆ ಬಂದು ಪರಿಹಾರ ಒದಗಿಸಿಕೊಟ್ಟ ಶಾಸಕ ಯು ಟಿ ಖಾದರ್ ಅವರ ಸರಳತೆ, ಕಾಳಜಿಗೆ ಕೃತಜ್ಞತೆಯನ್ನು ಸಲ್ಲಿಸಿದ್ದಾರೆ. ಅಂಗಾಂಗ ದಾನ ಎಂಬುದು ಭಾವನಾತ್ಮಕ ವಿಚಾರ. ಇದರ ಬಗ್ಗೆ ಜನಜಾಗೃತಿ ಮೂಡಿಸಬೇಕು. ಯಶರಾಜ್ ಮೆದುಳು ನಿಷ್ಕ್ರಿಯಗೊಂಡಿದ್ದ ಸಂದರ್ಭದಲ್ಲಿ ಆತನ ಕುಟಂಬದವರು ಅಂಗಾಂಗ ದಾನ ಮಾಡಿ ಎಲ್ಲರಿಗೂ ಮಾದರಿಯಾಗಿದ್ದರು. ಆತನಿಂದ ಇವತ್ತು ಆರು ಜನ ಜೀವಿಸುವಂತಾಗಿದೆ.

ಇದನ್ನೂ ಓದಿ : ಅಂಗಾಂಗ ದಾನ ಮಾಡಿದ ರಕ್ಷಿತಾ ಮನೆಗೆ ಭೇಟಿ ನೀಡಿದ ಸಚಿವರು: ಕುಟುಂಬಸ್ಥರಿಗೆ 8 ಲಕ್ಷ ರೂ ಚೆಕ್ ವಿತರಣೆ

ಮನೆ ಮಗನನ್ನು ಕಳೆದುಕೊಂಡ ಕುಟುಂಬಕ್ಕೆ ಎಷ್ಟು ಕೊಟ್ಟರೂ ಕಮ್ಮಿನೆ. ಅವರನ್ನ ಅಭಿನಂದಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳಲ್ಲಿ ಮಾತನಾಡಿ ಪರಿಹಾರ ಕೊಡಿಸಿದ್ದೇನೆ. ಇತ್ತೀಚೆಗೆ ಕುತ್ತಾರಲ್ಲಿ ಸಂಭವಿಸಿದ್ದ ಅಪಘಾತದಲ್ಲಿ ಕಲ್ಲಾಪಿನ ಭೂಷಣ್ ರೈ ಎಂಬ ಯುವಕನ ಮೆದುಳು ನಿಷ್ಕ್ರಿಯಗೊಂಡಿತ್ತು. ಬಳಿಕ ಅವರ ದೇಹದ ಅಂಗಾಂಗ ದಾನ ಮಾಡಲಾಗಿತ್ತು. ಅವರ ಬಡ ಕುಟುಂಬಕ್ಕೂ ಸಹಾಯವಾಗುವ ನಿಟ್ಟಿನಲ್ಲಿ ಪರಿಹಾರಕ್ಕಾಗಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದು, ಶೀಘ್ರವೇ ಹಣ ಬಿಡುಗಡೆಯಾಗುವುದೆಂದು ಶಾಸಕ ಯು ಟಿ ಖಾದರ್ ಹೇಳಿದ್ದಾರೆ.

ಇದನ್ನೂ ಓದಿ : ಕುತ್ತಾರು, ಬೈಕ್ ಅಪಘಾತದ ಗಾಯಾಳುವಿನ ಮೆದುಳು ನಿಷ್ಕ್ರಿಯ.. ಕುಟುಂಬಸ್ಥರಿಂದ ಮಗನ ಅಂಗಾಂಗ ದಾನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.