ಬಂಟ್ವಾಳ : ಶಾಸಕ ಯು ರಾಜೇಶ್ ನಾಯ್ಕ್ ನೇತೃತ್ವದಲ್ಲಿ ಬಿಜೆಪಿ ಕ್ಷೇತ್ರ ಸಮಿತಿ ಮೂಲಕ ಸುಮಾರು 18 ಸಾವಿರಕ್ಕೂ ಅಧಿಕ ಜನರಿಗೆ ಆಯುಷ್ಮಾನ್ ಕಾರ್ಡ್ ಗಳನ್ನು ಉಚಿತವಾಗಿ ವಿತರಿಸಲಾಗಿದೆ ಎಂದು ಬಿಜೆಪಿ ಕ್ಷೇತ್ರ ಪ್ರಧಾನ ಕಾರ್ಯದರ್ಶಿ ಡೊಂಬಯ ಹೇಳಿದರು.
ಕರ್ಪೆ ಸಮಾಜ ಮಂದಿರದಲ್ಲಿ ಬಿಜೆಪಿಯ ಕ್ಷೇತ್ರ ಸಮಿತಿ, ಮಹಿಳಾ ಮೋರ್ಚಾ, ಯುವ ಮೋರ್ಚಾ ಮತ್ತು ಬೂತ್ ಸಮಿತಿ ವತಿಯಿಂದ ನಡೆದ ಆಯುಷ್ಮಾನ್ ಕಾರ್ಡ್ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಅಧ್ಯಕ್ಷ ದೇವಪ್ಪ ಪೂಜಾರಿ ಮಾರ್ಗದರ್ಶನದಲ್ಲಿ ಪ್ರಧಾನಿ ಮೋದಿ ಅವರ ಜನ್ಮದಿನಾಚರಣೆಯ ಸೇವಾ ಸಪ್ತಾಹದ ಅಂಗವಾಗಿ ಕಾರ್ಯಕ್ರಮ ನಡೆಯುತ್ತಿದೆ ಎಂದರು.