ಬಂಟ್ವಾಳ : ತಾಲೂಕಿನ ಕರೋಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು 7.05 ಕೋಟಿ ರೂ. ವೆಚ್ಚದ ನಾನಾ ಕಾಮಗಾರಿಗಳ ಉದ್ಘಾಟನೆ ಮತ್ತು ಶಿಲಾನ್ಯಾಸವನ್ನು ಶಾಸಕ ಉಳಿಪ್ಪಾಡಿಗುತ್ತು ರಾಜೇಶ್ ನಾಯ್ಕ್ ಅವರು ನೆರವೇರಿಸಿದರು.
ಈ ವೇಳೆ ಮಾತನಾಡಿದ ಅವರು, ಗ್ರಾಮದ ಅಭಿವೃದ್ಧಿ ಸರ್ಕಾರದ ಮೂಲಮಂತ್ರವಾಗಿದೆ. ಗ್ರಾಮದ ಜನರ ಬೇಡಿಕೆ ಹಂತ ಹಂತವಾಗಿ ಈಡೇರಿಸಲಾಗುವುದು. ಪ್ರಧಾನಮಂತ್ರಿ ಮತ್ತು ಮುಖ್ಯಮಂತ್ರಿಯವರ ನಾಯಕತ್ವದಡಿ ತಾಲೂಕಿನ ಅಭಿವೃದ್ಧಿಯಾಗಲಿದೆ ಎಂದರು.
ಆಶೀರ್ವಚನ ನೀಡಿದ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ, ರಸ್ತೆ ಅಭಿವೃದ್ಧಿಯಾದ್ರೆ ಗ್ರಾಮ ಅಭಿವೃದ್ಧಿಯಾಗುತ್ತದೆ ಎಂದರು. ಕಾರ್ಯಕ್ರಮದಲ್ಲಿ ಬಂಟ್ವಾಳ ಬೂಡಾ ಅಧ್ಯಕ್ಷ ದೇವದಾಸ ಶೆಟ್ಟಿ, ಜಲದುರ್ಗಾಪರಮೇಶ್ವರಿ ದೇವಸ್ಥಾನದ ಧರ್ಮದರ್ಶಿ ಗೋಪಾಲಕೃಷ್ಣ ಭಟ್ ಬೇತ, ಲೋಕೋಪಯೋಗಿ ಇಲಾಖೆ ಹಿರಿಯ ವಿಭಾಗದ ಇಂಜಿನಿಯರ್ ಷಣ್ಮುಗಂ, ಕಿರಿಯ ವಿಭಾಗದ ಇಂಜಿನಿಯರ್ ಪ್ರೀತಂ, ಸಣ್ಣ ನೀರಾವರಿ ಇಲಾಖೆಯ ಇಂಜಿನಿಯರ್ ಶಿವ ಪ್ರಸನ್ನ, ಕೊಳ್ನಾಡು ಮಹಾ ಶಕ್ತಿ ಕೇಂದ್ರ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು.