ETV Bharat / state

ಬಂಟ್ವಾಳ: ಆಯುಷ್ಮಾನ್ ಕಾರ್ಡ್ ಅಭಿಯಾನಕ್ಕೆ ಶಾಸಕ ರಾಜೇಶ್ ನಾಯ್ಕ್ ಚಾಲನೆ

author img

By

Published : Aug 30, 2020, 4:58 PM IST

ಬಂಟ್ವಾಳ ತಾಲೂಕಿನ ಪೆರಾಜೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಆಯುಷ್ಮಾನ್ ಕಾರ್ಡ್ ಅಭಿಯಾನವನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಉದ್ಘಾಟಿಸಿದರು.

Mla Rajesh Nayk ulippadiguttu gave drive to ayushman card abhiyan

ಬಂಟ್ವಾಳ: ಪ್ರತಿಯೊಬ್ಬ ವ್ಯಕ್ತಿಯೂ ಆರೋಗ್ಯಕರ ಜೀವನ ನಡೆಸಬೇಕು.‌ ಎಲ್ಲರೂ ಆರೋಗ್ಯವಂತರಾದರೆ ಇಡೀ ದೇಶವೇ ಆರೋಗ್ಯವಾದಂತೆ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ತಿಳಿಸಿದರು.

ತಾಲೂಕಿನ ಪೆರಾಜೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಆಯುಷ್ಮಾನ್ ಕಾರ್ಡ್ ಅಭಿಯಾನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಆರೋಗ್ಯದ ಬಗ್ಗೆ ಗಮನ ನೀಡುವುದು ಅಗತ್ಯವಾಗಿದ್ದು, ಕೇಂದ್ರ ಸರ್ಕಾರದ ಈ ಆಯುಷ್ಮಾನ್ ಕಾರ್ಡ್ ಪ್ರತಿಯೊಬ್ಬರಿಗೂ ಆಪತ್ಕಾಲದಲ್ಲಿ ಸಹಕಾರಿಯಾಗುತ್ತದೆ ಎಂದು ಶಾಸಕರು ಶುಭ ಹಾರೈಸಿದರು.

ನೇರಳೆಕಟ್ಟೆ ಸಿ.ಎ ಬ್ಯಾಂಕ್ ಅಧ್ಯಕ್ಷ ಪುಷ್ಪರಾಜ್ ಚೌಟ, ಮಾಣಿ ಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಸನತ್ ಕುಮಾರ್ ರೈ, ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸುದರ್ಶನ್ ಬಜ, ಹಿರಿಯರಾದ ಬಿ.ಟಿ. ನಾರಾಯಣ ಭಟ್, ನಾರಾಯಣ ಶೆಟ್ಟಿ ತೋಟ ಮಾಣಿ, ಗ್ರಾ.ಪಂ ಸದಸ್ಯ ಉಮೇಶ ಎಸ್.ಪಿ., ಬೂತ್ ಸಮಿತಿ ಅಧ್ಯಕ್ಷ ರಾಜಾರಾಮ ಕಾಡೂರು, ಜಿಲ್ಲಾ ಯುವ ಮೋರ್ಚಾದ ವಿನೀತ್ ಶೆಟ್ಟಿ, ತಾಲೂಕು ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸೀಮಾ ಮಾಧವ, ಉಪಾಧ್ಯಕ್ಷರಾದ ಲಖಿತ ಆರ್. ಶೆಟ್ಟಿ, ಹಿರಣ್ಮಯಿ ಕಲ್ಲಡ್ಕ, ಹರೀಶ್ ರೈ ಪಾನೂರು, ಶ್ರೀನಿವಾಸ ಪೂಜಾರಿ, ರಾಘವ ಏನಾಜೆ, ಹಿಂದು ಜಾಗರಣ ವೇದಿಕೆ ವಿಭಾಗ ಸಂಪರ್ಕ ಪ್ರಮುಖ ರತ್ನಾಕರ ಶೆಟ್ಟಿ ಕಲ್ಲಡ್ಕ ಹಾಗೂ ಬಿಜೆಪಿ ಯುವ ಮೋರ್ಚಾ ಮತ್ತು ಮಹಿಳಾ ಮೋರ್ಚಾದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.