ಮಂಗಳೂರು: ಮೈಸೂರು ಕೃಷ್ಣರಾಜ ಕ್ಷೇತ್ರದ ಶಾಸಕ ರಾಮದಾಸ್ ಅವರು ಸಂಚರಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಮೋರಿಗೆ ಡಿಕ್ಕಿ ಹೊಡೆದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಜಾಲ್ಸೂರಿನ ಅರಣ್ಯ ಚೆಕ್ ಪೋಸ್ಟ್ ಬಳಿ ನಡೆದಿದೆ.
ಮೈಸೂರಿನಿಂದ ಮಂಗಳೂರಿಗೆ ಬರುತ್ತಿದ್ದ ವೇಳೆ ಸುಳ್ಯದ ಜಾಲ್ಸೂರಿನಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ಮೋರಿಗೆ ಗುದ್ದಿದೆ. ಙಘಟನೆಯಲ್ಲಿ ಕಾರಿನಲ್ಲಿದ್ದ ಶಾಸಕ ರಾಮದಾಸ್ ಮತ್ತು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಈ ಸಂದರ್ಭದಲ್ಲಿ ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡರ ಸಹೋದರನ ಮಗ ಆಶಿಕ್, ರಾಮದಾಸ್ ಮತ್ತು ಚಾಲಕನನ್ನು ಸುಳ್ಯದ ಆಸ್ಪತ್ರೆಗೆ ಕರೆದುಕೊಂಡು ಬಂದು ಚಿಕಿತ್ಸೆ ನೀಡಲು ನೆರವಾದರು.

ಸುಳ್ಯ ಖಾಸಗಿ ಆಸ್ಪತ್ರೆಯಲ್ಲಿ ಹೊರರೋಗಿಯಾಗಿ ಚಿಕಿತ್ಸೆ ಪಡೆದ ಬಳಿಕ ಅಲ್ಲಿಂದ ಅವರು ತೆರಳಿದ್ದಾರೆ. ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.