ಸುಳ್ಯ: ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಗುಂಡ್ಯದಲ್ಲಿ ನಿರ್ಮಿಸಿದ ನೂತನ ಚೆಕ್ ಪೋಸ್ಟ್ಅನ್ನು ಸುಳ್ಯ ಶಾಸಕ ಎಸ್.ಅಂಗಾರ ಉದ್ಘಾಟಿಸಿದರು.
ಉಪ್ಪಿನಂಗಡಿ ಠಾಣಾಧಿಕಾರಿ ಈರಯ್ಯ ಅಧಿಕಾರ ವಹಿಸಿಕೊಂಡ ನಂತರ ಇಲ್ಲಿ ಒಂದು ಸುಸಜ್ಜಿತವಾದ ಚೆಕ್ ಪೋಸ್ಟ್ ಮಾಡಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿಗಳು, ಪುತ್ತೂರು ಉಪ ಆಯುಕ್ತರು, ಲೋಕೋಪಯೋಗಿ ಇಲಾಖೆ, ಅರಣ್ಯ ಇಲಾಖೆಗೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸುಸಜ್ಜಿತವಾದ ಚೆಕ್ ಪೋಸ್ಟ್ ನಿರ್ಮಾಣವಾಗಿದೆ.
ಈ ಸಂದರ್ಭದಲ್ಲಿ ಪುತ್ತೂರು ಸಹಾಯಕ ಉಪ ಆಯುಕ್ತ ಡಾ. ಯತೀಶ್ ಉಳ್ಳಾಲ್, ಕಡಬ ತಹಶೀಲ್ದಾರ್ ಜಾನ್ ಪ್ರಕಾಶ್ ರೋಡ್ರಿಗ್ಸ್, ಪುತ್ತೂರು ಡಿವೈಎಸ್ಪಿ ದಿನಕರ ಶೆಟ್ಟಿ, ಸರ್ಕಲ್ ಇನ್ಸ್ಪೆಕ್ಟರ್ ಉಮೇಶ್ ಉಪ್ಪಳಿಕೆ, ಅರಣ್ಯ ಇಲಾಖೆಯ ಅಧಿಕಾರಿಗಳು, ಲೋಕೊಪಯೋಗಿ ಇಲಾಖಾಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.