ETV Bharat / state

ವಿಟ್ಲ ಸಬ್ ರಿಜಿಸ್ಟ್ರಾರ್ ಅನ್ನು ತರಾಟೆಗೆ ತೆಗೆದುಕೊಂಡ ಪುತ್ತೂರು ಶಾಸಕ ಸಂಜೀವ ಮಠಂದೂರು - Sajvee Matandoor

ಸಾರ್ವಜನಿಕರ ನಿರಂತರ ದೂರಿನ ಹಿನ್ನೆಲೆಯಲ್ಲಿ ವಿಟ್ಲ ಉಪನೋಂದಣಿ ಕಚೇರಿಗೆ ದಿಢೀರನೆ ಭೇಟಿ ನೀಡಿದ ಪುತ್ತೂರು ಶಾಸಕ ಸಂಜೀವ ಮಠಂದೂರು ಅವರು ಉಪ ನೋಂದಣಿ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡ ಘಟನೆ ಶುಕ್ರವಾರ ನಡೆದಿದೆ.

Vitla
ವಿಟ್ಲ ಉಪನೋಂದಣಿ ಕಚೇರಿ
author img

By

Published : Sep 11, 2020, 9:08 PM IST

ಬಂಟ್ವಾಳ: ಸಾರ್ವಜನಿಕರ ನಿರಂತರ ದೂರಿನ ಹಿನ್ನೆಲೆಯಲ್ಲಿ ವಿಟ್ಲ ಉಪನೋಂದಣಿ ಕಚೇರಿಗೆ ದಿಢೀರನೆ ಭೇಟಿ ನೀಡಿದ ಪುತ್ತೂರು ಶಾಸಕ ಸಂಜೀವ ಮಠಂದೂರು ಅವರು ಉಪ ನೋಂದಣಿ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡ ಘಟನೆ ಶುಕ್ರವಾರ ನಡೆದಿದೆ.

ನಿಮ್ಮ ಬಗ್ಗೆ ಕಳೆದ ಒಂದು ತಿಂಗಳುಗಳಿಂದ ದೂರುಗಳು ಬರುತ್ತಿವೆ. ನೀವು ಬೆಳಿಗ್ಗೆ 11 ಗಂಟೆಗೆ ಕರ್ತವ್ಯ ಹಾಜರಾಗುತ್ತಿದ್ದೀರಿ, ಪ್ರತಿನಿತ್ಯ ಜನರು ತಮ್ಮ ಕೆಲಸಕ್ಕೆ ಕಾಯಬೇಕು. ಕೆಲವರು ಕೆಲಸ ನಡೆಯದೇ ಹಿಂತಿರುಗುತ್ತಿದ್ದಾರೆ. ಜನರೊಂದಿಗೆ ದರ್ಪದಿಂದ ವರ್ತಿಸುತ್ತಿದ್ದೀರಿ ಎಂಬ ದೂರು ಬರುತ್ತಿದೆ. ನಾನು ಬಂದು ಕೆಲವು ಹೊತ್ತು ಕಳೆದರೂ ಹೊರಗಡೆ ನಿಂತುಕೊಂಡಿದ್ದೆ. ಶಾಸಕರ ಜತೆ ಹೇಗೆ ನಡೆದುಕೊಳ್ಳಬೇಕೆಂದು ನಿಮಗೆ ಗೊತ್ತಿಲ್ಲ. ಇನ್ನೂ ಜನರನ್ನು ಯಾವ ರೀತಿ ನಡೆದುಕೊಳ್ಳುತ್ತೀರಿ ಸ್ವಲ್ಪವಾದರೂ ಜವಾಬ್ದಾರಿ ಇದೆಯಾ ನಿಮಗೆ ಎಂದು ಪ್ರಶ್ನಿಸಿದರು.

ವಿಟ್ಲ ಸಬ್ ರಿಜಿಸ್ಟ್ರಾರ್ ಅನ್ನು ತರಾಟೆಗೆ ತೆಗೆದುಕೊಂಡ ಪುತ್ತೂರು ಶಾಸಕ

ಈ ಸಂದರ್ಭ ಮಾತನಾಡಿದ ಉಪನೋಂದಣಾಧಿಕಾರಿ ಪ್ರೇಮಾ, ನೀವು ಹಾಗೆ ಮಾತನಾಡಬೇಡಿ ಎಂದರು. ಸರ್ವರ್ ಸಮಸ್ಯೆ ಇದೆ. ಇಬ್ಬರು ಮಾತ್ರ ಸಿಬ್ಬಂದಿಗಳು ಮಾತ್ರ ಇರುವುದು. ಕಂಪ್ಯೂಟರ್ ಕೂಡಾ ಕೈ ಕೊಡುತ್ತಿದೆ. ಈ ಸಮಸ್ಯೆಯಿಂದ ಕೆಲಸಕಾರ್ಯ ತಡವಾಗುತ್ತದೆ. ನಾನು ಸಮಯಕ್ಕೆ ಸರಿಯಾಗಿ ಕರ್ತವ್ಯ ಹಾಜರಾಗುತ್ತಿದ್ದೇನೆ. ಟೋಕನ್ ನೀಡಿದ ಎಲ್ಲರ ಕೆಲಸ ನಡೆಯುತ್ತಿದೆ ಎಂದು ಹೇಳಿದರು.

ನಂತರ ಮಾತನಾಡಿದ ಶಾಸಕರು ತಾಂತ್ರಿಕ ಸಮಸ್ಯೆಗಳ ಬಗ್ಗೆ ಸಂಬಂಧಪಟ್ಟ ಇಲಾಖೆಗೆ ಮಾಹಿತಿ ನೀಡಿ ಸರಿಪಡಿಸುವ ಜವಾಬ್ದಾರಿ ನಿಮ್ಮದಾಗಿದೆ. ತಮ್ಮ ಕೆಲಸಕಾರ್ಯಗಳಿಗೆ ಬರುವ ಜನರಿಗೆ ಯಾವುದೇ ಸಮಸ್ಯೆ ಆಗಬಾರದು. ಅವರೊಂದಿಗೆ ಸೌಜನ್ಯದಿಂದ ವರ್ತಿಸಬೇಕು ಎಂದು ಹೇಳಿದ ಅವರು ಬಳಿಕ ಮೇಲಾಧಿಕಾರಿಗಳಿಗೆ ಕರೆ ಮಾಡಿ ಮಾತನಾಡಿ ಇಲ್ಲಿಯ ಪರಿಸ್ಥಿತಿಯ ಬಗ್ಗೆ ವಿವರಿಸಿ, ತಕ್ಷಣವೇ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಸೂಚನೆ ನೀಡಿದರು.

ಈ ವೇಳೆ ಪುತ್ತೂರು ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಮುಗುಳಿ ಮನೆ, ವಿಟ್ಲ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಅರುಣ್ ಎಂ ವಿಟ್ಲ, ಕಾರ್ಯದರ್ಶಿ ಕರುಣಾಕರ ನಾಯ್ತೋಟ್ಟು, ಮುಖಂಡರಾದ ರಾಮ್ದಾಸ್ ಶೆಣೈ, ನವೀನ್ ಪಡ್ನೂರು, ರಾಜೇಶ್ ಅನ್ನಮೂಲೆ, ಉದಯ ಆಲಂಗಾರು ಮೊದಲಾದವರು ಉಪಸ್ಥಿತರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.