ಪುತ್ತೂರು(ದಕ್ಷಿಣ ಕನ್ನಡ): ಕಾಂಗ್ರೆಸ್ ರಾಜ್ಯದ ಜನತೆಯ ಆರೋಗ್ಯದ ವಿಚಾರದಲ್ಲಿ ಚೆಲ್ಲಾಟವಾಡುತ್ತಿದೆ ಎಂದು ಪುತ್ತೂರು ಶಾಸಕ ಸಂಜೀವ ಮಠಂದೂರು ಆರೋಪಿಸಿದ್ದಾರೆ.
ಕಾಂಗ್ರೆಸ್ ಮೇಕೆದಾಟು ವಿಚಾರದಲ್ಲಿ ನಡೆಸುತ್ತಿರುವ ಪಾದಯಾತ್ರೆ ಕುರಿತು ಪುತ್ತೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಇದು ವಿಪಕ್ಷ ನಾಯಕ ಸಿದ್ಧರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಡುವೆ ನಡೆಯುತ್ತಿರುವ ಕುರ್ಚಿ ಹೋರಾಟವಾಗಿದ್ದು, ಮೇಕೆದಾಟಿಗೂ ಈ ಪಾದಯಾತ್ರೆಗೂ ಯಾವುದೇ ಸಂಬಂಧವಿಲ್ಲ ಎಂದರು.
ಮುಂದಿನ ವಿಧಾನಸಭಾ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಚುನಾವಣೆ ಗೆಲ್ಲೋದು ಹೇಗೆ, ಗೆದ್ದಲ್ಲಿ ಮುಖ್ಯಮಂತ್ರಿ ಯಾರಾಗಬೇಕು ಎನ್ನುವ ಉದ್ಧೇಶವನ್ನಿಟ್ಟುಕೊಂಡು ಈ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ. ಇದರಲ್ಲಿ ಸಿದ್ಧರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಹಿತಾಸಕ್ತಿಯೇ ಮುಖ್ಯವಾಗಿದೆ. ರಾಜ್ಯದ ಜನತೆಯ ಹಿತಾಸಕ್ತಿ ಕಿಂಚಿತ್ತೂ ಇಲ್ಲ.
ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಸಮಯದಲ್ಲಿ ಕಾಂಗ್ರೆಸ್ ಪಾದಯಾತ್ರೆ ಮಾಡುವ ಮೂಲಕ ಮತ್ತಷ್ಟು ಕೊರೊನಾ ಹರಡುವ ಕೆಲಸ ಮಾಡುತ್ತಿದೆ. ಕಾಂಗ್ರೆಸ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಸರ್ಕಾರವನ್ನು ಒತ್ತಾಯಿಸಿದರು.
ಇದನ್ನೂ ಓದಿ: ಆ್ಯಪ್ ಮೂಲಕ ಸಾಲ ಪಡೆದ ಯುವಕ ಆತ್ಮಹತ್ಯೆ ಕೇಸ್.. ಜನತೆಗೆ ಮಂಗಳೂರು ಪೊಲೀಸ್ ಕಮೀಷನರ್ ಸಲಹೆ ಏನು?