ETV Bharat / state

ಮೋದಿ ಕಾರ್ಯಕ್ರಮಕ್ಕೆ ಪುತ್ತೂರು ಕ್ಷೇತ್ರದಿಂದ 25 ಸಾವಿರ ಮಂದಿ ಭಾಗವಹಿಸಲಿದ್ದಾರೆ.. ಸಂಜೀವ ಮಠಂದೂರು

ಮಂಗಳೂರಿನ ಕೂಳೂರಿನಲ್ಲಿ ಸೆ.2ರಂದು ನಡೆಯಲಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಕಾರ್ಯಕ್ರಮಕ್ಕೆ ತೆರಳುವ ಫಲಾನುಭವಿಗಳಿಗೆ ವಾಹನ ಸೌಲಭ್ಯ ಹಾಗೂ ಊಟೋಪಚಾರದ ವ್ಯವಸ್ಥೆಯನ್ನು ತಾಲೂಕು ಹಾಗೂ ಜಿಲ್ಲಾಡಳಿತ ಮಾಡಲಿದೆ ಎಂದು ಶಾಸಕ ಸಂಜೀವ ಮಠಂದೂರು ತಿಳಿಸಿದರು.

mla sanjeeva matandoor
ಸಂಜೀವ ಮಠಂದೂರು ಸುದ್ದಿಗೋಷ್ಠಿ
author img

By

Published : Aug 27, 2022, 12:41 PM IST

ಪುತ್ತೂರು: ಮಂಗಳೂರಿನ ಕೂಳೂರಿನಲ್ಲಿ ಸೆ.2ರಂದು ನಡೆಯಲಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಕಾರ್ಯಕ್ರಮದಲ್ಲಿ ಪುತ್ತೂರು ವಿಧಾನ ಸಭಾ ಕ್ಷೇತ್ರದಿಂದ ಸುಮಾರು 10 ಸಾವಿರ ಮಂದಿ ವಿವಿಧ ಯೋಜನೆಗಳ ಫಲಾನುಭವಿಗಳು ಹಾಗೂ 15 ಸಾವಿರ ಮಂದಿ ಪಕ್ಷದ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಶಾಸಕ ಸಂಜೀವ ಮಠಂದೂರು ತಿಳಿಸಿದರು.

ಬಿಜೆಪಿ ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಕಾರ್ಯಕ್ರಮಕ್ಕೆ ತೆರಳುವ ಫಲಾನುಭವಿಗಳಿಗೆ ವಾಹನ ಸೌಲಭ್ಯ ಹಾಗೂ ಊಟೋಪಚಾರದ ವ್ಯವಸ್ಥೆಯನ್ನು ತಾಲೂಕು ಹಾಗೂ ಜಿಲ್ಲಾಡಳಿತ ಮಾಡಲಿದೆ. ಪಕ್ಷದ ಕಾರ್ಯಕರ್ತರಿಗೆ ಹಾಗೂ ಸಾರ್ವಜನಿಕರಿಗೆ ವಾಹನ ಸೌಲಭ್ಯ ಹಾಗೂ ಊಟದ ವ್ಯವಸ್ಥೆಯನ್ನು ಪಕ್ಷದ ವತಿಯಿಂದ ಮಾಡಲಾಗುವುದು ಎಂದರು.

ಸಂಜೀವ ಮಠಂದೂರು ಸುದ್ದಿಗೋಷ್ಠಿ

ಶುಕ್ರವಾರ ನರೇಂದ್ರ ಮೋದಿಯವರು ಎರಡನೇ ಅವಧಿಗೆ ಪ್ರಧಾನಿ ಮಂತ್ರಿಯಾದ ಬಳಿಕ ಪ್ರಥಮ ಬಾರಿಗೆ ಜಿಲ್ಲೆಗೆ ಬರುತ್ತಿದ್ದಾರೆ. ಜಿಲ್ಲೆಗೆ ನೀಡಿದ ಕೊಡುಗೆಗಳು ಹಾಗೂ ಸವಲತ್ತುಗಳ ಪ್ರಯೋಜನ ಪಡೆದ ಫಲಾನುಭವಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗುವುದು. ಜಿಲ್ಲಾಡಳಿತ, ಜಿಲ್ಲೆಯ ಉಸ್ತುವಾರಿ ಸಚಿವರು, ಸಂಸದರು, ಜಿಲ್ಲೆಯ ಜನಪ್ರತಿನಿಧಿಗಳನ್ನು ಸೇರಿಕೊಂಡು ಕಾರ್ಯಕ್ರಮದ ಯಶಸ್ವಿಗಾಗಿ ಸಿದ್ಧತೆ ನಡೆದಿದೆ ಎಂದರು.

ಪ್ರತಿ ಬೂತ್​ನಿಂದ ಕನಿಷ್ಠ ಒಂದು ಬಸ್​ ಮಂದಿ ಪ್ರಧಾನಿಯವರ ಕಾರ್ಯಕ್ರಮಲ್ಲಿ ಭಾಗವಹಿಸಲಿದ್ದಾರೆ. ಫಲಾನುಭವಿಗಳ ಹೊರತಾಗಿ ಪುತ್ತೂರು ವಿಧಾನ ಸಭಾ ಕ್ಷೇತ್ರದ ಪ್ರತಿ ಬೂತ್​ಗಳಿಂದ ಕನಿಷ್ಠ 1 ಬಸ್​​ನಲ್ಲಿ ಸಾರ್ವಜನಿಕರು ಹಾಗೂ ಕಾರ್ಯಕರ್ತರು ಭಾಗವಹಿಸುವರು. ಒಟ್ಟು 220 ಬೂತ್​ಗಳಿಂದ ಕನಿಷ್ಠ 15,000 ಮಂದಿ ಭಾಗವಹಿಸುವ ನಿರೀಕ್ಷೆ ಇದೆ. 15 ಸಾವಿರ ಮಂದಿಯನ್ನು ಕರೆದೊಯ್ಯಲು 75 ಖಾಸಗಿ ಬಸ್​ಗಳು, 100 ಕೆಎಸ್​ಆರ್​ಟಿಸಿ ಬಸ್​ಗಳು ಹಾಗೂ ಮಿನಿ ಬಸ್​ಗಳನ್ನು ಬಳಸಲಾಗುವುದು. ಜತೆಗೆ ಸುಮಾರು 400ರಷ್ಟು ಖಾಸಗಿ ವಾಹನಗಳು ಇರಲಿವೆ ಎಂದು ಅವರು ಮಾಹಿತಿ ನೀಡಿದರು.

ಇದನ್ನೂ ಓದಿ: ಸೆಪ್ಟೆಂಬರ್ 2ರಂದು ಮಂಗಳೂರಿಗೆ ಪ್ರಧಾನಿ ಮೋದಿ ಆಗಮನ: ಅಧಿಕಾರಿಗಳು, ಜನಪ್ರತಿನಿಧಿಗಳ ಸಭೆ

ವಾಹನ, ಊಟ ಸೌಲಭ್ಯ: ಪ್ರಧಾನಿಯವರ ಕಾರ್ಯಕ್ರಮಕ್ಕೆ ತೆರಳುವ ಕಾರ್ಯಕರ್ತರು ಹಾಗೂ ಸಾರ್ವಜನಿಕರಿಗೆ ಪಕ್ಷದ ವತಿಯಿಂದ ಪುತ್ತೂರಿನ ಕಲ್ಲೇಗ ಭಾರತ್ ಮಾತಾ ಸಮುದಾಯ ಭವನ, ಉಪ್ಪಿನಂಗಡಿಯ ಸಹಸ್ರಲಿಂಗೇಶ್ವರ ದೇವಳದ ಸಭಾ ಭವನ, ವಿಟ್ಲದ ಅಕ್ಷಯ ಸಭಾಭವನ, ಮಿತ್ತೂರು ಸೀತಾ ರಾಮಾಂಜನೇಯ ಭಜನಾ ಮಂದಿರ ಹಾಗೂ ಪೆನರೆಯಲ್ಲಿ ಊಟದ ಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದು ಸಂಜೀವ ಮಠಂದೂರು ತಿಳಿಸಿದರು.

ಪುತ್ತೂರು ವಿಧಾನ ಸಭಾ ಕ್ಷೇತ್ರದಲ್ಲಿ ಸುಮಾರು 10 ಸಾವಿರ ಮಂದಿ ವಿವಿಧ ಇಲಾಖೆಗಳ ಫಲಾನುಭವಿಗಳಿರುವುದಾಗಿ ಅಧಿಕಾರಿಗಳಿಂದ ಮಾಹಿತಿ ಲಭ್ಯವಾಗಿದೆ. ಈ ಫಲಾನುಭವಿಗಳಿಗೆ ಕಾರ್ಯಕ್ರಮಕ್ಕೆ ತೆರಳಲು ವಾಹನ ಹಾಗೂ ಊಟೋಪಚಾರಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ತಾಲೂಕು ಆಡಳಿತ ಹಾಗೂ ಜಿಲ್ಲಾಡಳಿತ ಸಂಬಂಧಪಟ್ಟ ಇಲಾಖೆಗಳ ಮುಖಾಂತರ ಎಲ್ಲ ಸಿದ್ಧತೆಗಳನ್ನು ನಡೆಸಲಾಗುತ್ತಿದೆ.

ತಾಲೂಕು ಮಟ್ಟದಲ್ಲಿ ತಹಶೀಲ್ದಾರ್, ತಾಲೂಕು ಪಂಚಾಯತ್​ ಕಾರ್ಯನಿರ್ವಹಣಾಧಿಕಾರಿಗಳು, ಸ್ಥಳೀಯಾಡಳಿತಗಳು, ಗ್ರಾಮ ಮಟ್ಟದಲ್ಲಿ ಗ್ರಾಮಪಂಚಾಯತ್​ ಅಭಿವೃದ್ಧಿ ಅಧಿಕಾರಿ ಹಾಗೂ ಗ್ರಾಮ ಕರಣಿಕರು ವ್ಯವಸ್ಥೆಗಳನ್ನು ಮಾಡುವರು ಎಂದು ಅವರು ತಿಳಿಸಿದರು.

ಪುತ್ತೂರು ನಗರ ಸಭಾ ಅಧ್ಯಕ್ಷ ಕೆ. ಜೀವಂಧರ್ ಜೈನ್, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರ ಮಂಡಲದ ಅಧ್ಯಕ್ಷ ಪಿ.ಜಿ ಜಗನ್ನಿವಾಸ ರಾವ್, ಗ್ರಾಮಾಂತರ ಮಂಡಲದ ಮಾಜಿ ಅಧ್ಯಕ್ಷರಾದ ಚನಿಲ ತಿಮ್ಮಪ್ಪ ಶೆಟ್ಟಿ, ಅಪ್ಪಯ್ಯ ಮಣಿಯಾಣಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ ಮತ್ತಿತರರು ಇದ್ದರು.

ಇದನ್ನೂ ಓದಿ: ಜನಪ್ರಿಯ ವಿಶ್ವ ನಾಯಕರಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಮತ್ತೆ ಅಗ್ರ ಸ್ಥಾನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.