ETV Bharat / state

ಕೆಸರು ಗದ್ದೆಯಲ್ಲಿ ನೇಗಿಲು ಹಿಡಿದು ಶಾಸಕ ಸಂಜೀವ ಮಠಂದೂರು ಉಳುಮೆ - ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ

ಕೃಷಿ ವಲಯದಲ್ಲಿ ಯಂತ್ರೋಪಕರಣಗಳೇ ತುಂಬಿರುವ ಕಾಲದಲ್ಲಿ ಮತ್ತೆ ಸಾಂಪ್ರದಾಯಿಕ ಕೃಷಿ ಮಾಡಲು ‘ಗದ್ದೆಗೆ ಇಳಿಯೋಣ-ಬೇಸಾಯ ಮಾಡೋಣ’ ಅಭಿಯಾನ ಕೈಗೊಳ್ಳಲಾಗಿದೆ.

mla-sanjeeva-matanduru-performs-agriculture-activity-in-muddy-land
ಕೆಸರು ಗದ್ದೆಯಲ್ಲಿ ನೇಗಿಲು ಹಿಡಿದು ಶಾಸಕ ಸಂಜೀವ ಮಠಂದೂರು ಉಳುಮೆ
author img

By

Published : Jul 4, 2021, 5:13 PM IST

ಪುತ್ತೂರು (ದ.ಕ): ಇಲ್ಲಿನ ಸಂಪ್ಯ ಮಹಾವಿಷ್ಣುಮೂರ್ತಿ ದೇವಸ್ಥಾನದ ಪಕ್ಕದ ಗದ್ದೆಯಲ್ಲಿ ಶಾಸಕ ಸಂಜೀವ ಮಠಂದೂರು ಉಳುಮೆ ಮಾಡಿ ಗಮನ ಸೆಳೆದಿದ್ದಾರೆ. ಆರ್ಯಾಪು ಗ್ರಾಮದ ಸಂಪ್ಯ ವಿಷ್ಣುಮೂರ್ತಿ ದೇವಸ್ಥಾನ ಹಾಗೂ ಸಂಪ್ಯ ನವಚೇತನಾ ಯುವಕ ಮಂಡಲದ ಸಹಭಾಗಿತ್ವದಲ್ಲಿ ದಿ. ಉಗ್ಗಪ್ಪ ಗೌಡ ಅವರ ಹಡೀಲು ಬಿದ್ದ ಗದ್ದೆಯಲ್ಲಿ ‘ಗದ್ದೆಗೆ ಇಳಿಯೋಣ-ಬೇಸಾಯ ಮಾಡೋಣ’ ಅಭಿಯಾನ ನಡೆಯಿತು.

ಕೆಸರು ಗದ್ದೆಯಲ್ಲಿ ನೇಗಿಲು ಹಿಡಿದು ಶಾಸಕ ಸಂಜೀವ ಮಠಂದೂರು ಉಳುಮೆ

ಅಭಿಯಾನ ಉದ್ಘಾಟಿಸಿದ ಶಾಸಕ ಸಂಜೀವ ಮಠಂದೂರು, ಸ್ವತಃ ತಾವೇ ಗದ್ದೆಗೆ ಇಳಿದು, ನೇಗಿಲ ಹಿಡಿದು ಸಾಂಪ್ರದಾಯಿಕ ಶೈಲಿಯಲ್ಲಿ ಉಳುಮೆ ಮಾಡುವ ಮೂಲಕ ಚಾಲನೆ ನೀಡಿದರು. ಇವರ ಜೊತೆಗೆ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಹಾಗೂ ಸಂಪ್ಯ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು, ಮಹಾವೀರ ಆಸ್ಪತ್ರೆಯ ಡಾ.ಸುರೇಶ್ ಪುತ್ತೂರಾಯರವರೂ ನೇಗಿಲ ಹಿಡಿದು ಸಾಂಪ್ರಾದಾಯಿಕ ಉಳುಮೆ ಮಾಡಿದರು.

ಸುಮಾರು 40 ವರ್ಷಗಳಿಂದ ಸ್ವತಃ ತಾನೇ ಸಾಂಪ್ರದಾಯಿಕ ಶೈಲಿಯಲ್ಲಿ ಉಳುಮೆ ಮಾಡಿ ಬೇಸಾಯ ಮಾಡುತ್ತಿರುವ 70 ವರ್ಷದ ಬಾರಿಕೆ ಪರಮೇಶ್ವರ ನಾಯ್ಕರವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಸೀತಾರಾಮ ಶೆಟ್ಟಿ ಕಂಬಳತ್ತಡ್ಡ, ಜಯಕುಮಾರ್ ನಾಯರ್, ಪ್ರೇಮಾ ಸಪಲ್ಯ, ವಿನ್ಯಾಸ್ ಗೌಡ, ತಾ.ಪಂ ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೃಷಿ ಅಧಿಕಾರಿ ಉಮೇಶ್‌ ಸೇರಿ ಹಲವರು ಭಾಗಿಯಾಗಿದ್ದರು.

ಇದನ್ನೂ ಓದಿ: ಸಾಮಾಜಿಕ ಕಾರ್ಯಕರ್ತನ ವಿನೂತನ ಮದುವೆ ವಾರ್ಷಿಕೋತ್ಸವ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.