ಮಂಗಳೂರು : ಶಿವಮೊಗ್ಗದಲ್ಲಿ ಹತ್ಯೆಯಾದ ಬಜರಂಗದಳ ಕಾರ್ಯಕರ್ತ ಹರ್ಷ ಕುಟುಂಬಕ್ಕೆ, ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ 2 ಲಕ್ಷ ರೂ. ಆರ್ಥಿಕ ನೆರವು ಘೋಷಣೆ ಮಾಡಿದ್ದಾರೆ.
ಈ ಬಗ್ಗೆ ಅವರು ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಘೋಷಣೆ ಮಾಡಿಕೊಂಡಿದ್ದಾರೆ. ಅಲ್ಲದೇ ಹಿಂದೂ ಕಾರ್ಯಕರ್ತ ಹರ್ಷ ಹತ್ಯೆ ಹಿಂದೂ ಸಮಾಜಕ್ಕೆ ಆಗಿರುವ ಭಾರೀ ದೊಡ್ಡ ನಷ್ಟ ಎಂದಿದ್ದಾರೆ.
ಈ ದುಃಖವನ್ನು ಭರಿಸುವ ಶಕ್ತಿ ಅವರ ಕುಟುಂಬಕ್ಕೆ ದೊರಕಲೆಂದು ದೇವರಲ್ಲಿ ಪ್ರಾರ್ಥಿಸುವೆ ಎಂದು ಶಾಸಕ ವೇದವ್ಯಾಸ ಕಾಮತ್ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: ಹರ್ಷ ಕೊಲೆ ಪ್ರಕರಣ.. ಶಿವಮೊಗ್ಗದಲ್ಲಿ ಆರು ಆರೋಪಿಗಳ ಬಂಧನ, ಕರ್ಫ್ಯೂ ವಿಸ್ತರಣೆ