ETV Bharat / state

ಅಂತ್ಯ ಸಂಸ್ಕಾರಕ್ಕೆ ಅವಕಾಶ ನೀಡದ ಶಾಸಕರನ್ನು ಬಂಧಿಸಿ: ಹರೀಶ್ ಕುಮಾರ್ - Harish Kumar Talking against To Dakshin kannad MLA's

ಮೃತದೇಹವನ್ನು ಗೌರವಯುತವಾಗಿ ಅಂತ್ಯಕ್ರಿಯೆ ನಡೆಸಬೇಕು. ಅಲ್ಲಿ ಯಾವುದೇ ರೀತಿಯಲ್ಲಿ ಸೋಂಕು ಹರಡುವ ಸಾಧ್ಯತೆಗಳಿಲ್ಲ. ಆದರೂ ಉದ್ದೇಶಪೂರ್ವಕವಾಗಿ ಬೇಜವಾಬ್ದಾರಿಯಿಂದ ಶಾಸಕರೇ ಮುಂದೆ ನಿಂತು ಅಂತ್ಯಕ್ರಿಯೆ ಮಾಡುವುದನ್ನು ತಡೆದಿದ್ದಾರೆ. ಇದು ಬಹಳ ಬೇಸರದ ವಿಚಾರ ಎಂದು ವಿಧಾನ ಪರಿಷತ್ ಸದಸ್ಯ ಕೆ.ಹರೀಶ್ ಕುಮಾರ್ ಹೇಳೀದರು.

mlc-harish-kumar
ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್
author img

By

Published : Apr 24, 2020, 5:33 PM IST

ಬೆಳ್ತಂಗಡಿ: ಜಿಲ್ಲೆಯಲ್ಲಿ ಕೋವಿಡ್​ನಿಂದ ಮೃತಪಟ್ಟ ಮಹಿಳೆಯ ಅಂತ್ಯ ಸಂಸ್ಕಾರಕ್ಕೆ ಅವಕಾಶ ನೀಡದೆ ತಡರಾತ್ರಿಯವರೆಗೆ ಜಿಲ್ಲಾಡಳಿತವನ್ನು ತಡೆದ ಶಾಸಕರನ್ನೂ ಕೂಡಲೇ ಬಂಧಿಸಬೇಕೆಂದು ಎಂದು ವಿಧಾನ ಪರಿಷತ್ ಸದಸ್ಯ ಕೆ.ಹರೀಶ್ ಕುಮಾರ್ ಒತ್ತಾಯಿಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೃತದೇಹವನ್ನು ಗೌರವಯುತವಾಗಿ ಅಂತ್ಯಕ್ರಿಯೆ ನಡೆಸಬೇಕು. ಅಲ್ಲಿ ಯಾವುದೇ ರೀತಿಯಲ್ಲಿ ಸೋಂಕು ಹರಡುವ ಸಾಧ್ಯತೆಗಳಿಲ್ಲ. ಆದರೂ ಉದ್ದೇಶಪೂರ್ವಕವಾಗಿ ಬೇಜವಾಬ್ದಾರಿಯಿಂದ ಶಾಸಕರೇ ಮುಂದೆ ನಿಂತು ಅಂತ್ಯಕ್ರಿಯೆ ಮಾಡುವುದನ್ನು ತಡೆದಿದ್ದಾರೆ. ಇದು ಬಹಳ ಬೇಸರದ ವಿಚಾರವಾಗಿದೆ. ಇದು ಕೊರೊನಾ ವಿರುದ್ಧದ ಹೋರಾಟಕ್ಕೆ ದೊಡ್ಡ ಹಿನ್ನಡೆಯಾಗಿದೆ. ಇದೇ ರೀತಿಯಲ್ಲಿ ಮುಂದುವರೆದರೆ ನಾವು ಕೊರೊನಾ ವಿರುದ್ಧ ಹೋರಾಡುವುದು ಹೇಗೆ ಎಂದು ಪ್ರಶ್ನಿಸಿದರು.

ರಾಜ್ಯ ಸರ್ಕಾರ ವೈದ್ಯಕೀಯ ಸಿಬಂದಿಗೆ ತರಿಸಿರುವ ಕಿಟ್​ಗಳು ಕಳಪೆ ಗುಣಮಟ್ಟದ್ದಾಗಿವೆ ಎಂಬ ವರದಿಗಳು ಮಾಧ್ಯಮಗಳಲ್ಲಿ ಬರುತ್ತಿವೆ. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಹಾಗೂ ಇದಕ್ಕೆ ಕಾರಣವಾದ ಅಧಿಕಾರಿಗಳ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಕೇಂದ್ರದ ಬಳಿ ಗೋಧಿ, ಅಕ್ಕಿ ಹೆಚ್ಚಾಗಿದ್ದರೆ ಅದನ್ನು ಬಡವರಿಗೆ, ನಿರ್ಗತಿಕರಿಗೆ ನೀಡಲಿ. ದೇಶಾದ್ಯಂತ ಎಷ್ಟೋ ಜನರು ಆಹಾರವಿಲ್ಲದೆ ಪರದಾಡುತ್ತಿದ್ದಾರೆ. ಅವರಿಗೆ ನೀಡದೆ ಅದನ್ನು ಸ್ಯಾನಿಟೈಸರ್ ಮಾಡಲು ಬಳಸುವ ನಿರ್ಧಾರವನ್ನು ಕೂಡಲೇ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.