ಮಂಗಳೂರು : ಶಾರ್ಟ್ ಸರ್ಕ್ಯೂಟ್ನಿಂದ ಇಲೆಕ್ಟ್ರಾನಿಕ್ ವಸ್ತುಗಳ ರಿಪೇರಿ ಅಂಗಡಿಗೆ ಬೆಂಕಿ ತಗುಲಿದ ಪರಿಣಾಮ ಅಪಾರ ಪ್ರಮಾಣದ ನಷ್ಟ ಉಂಟಾಗಿದೆ.
ನಗರದ ಬಿಜೈನಲ್ಲಿರುವ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ಇರುವ ಭವಾನಿ ಕಾಂಪ್ಲೆಕ್ಸ್ ನ ಕೆಳ ಅಂತಸ್ತಿನಲ್ಲಿರುವ ಇಲೆಕ್ಟ್ರಾನಿಕ್ ರಿಪೇರಿ ಅಂಗಡಿಯಲ್ಲಿ ಈ ಘಟನೆ ನಡೆದಿದೆ. ಅಂಗಡಿಯಲ್ಲಿ ರಿಪೇರಿಗೆ ಬಂದಿದ್ದ ಹಲವು ಇಲೆಕ್ಟ್ರಾನಿಕ್ ವಸ್ತುಗಳು ಬೆಂಕಿಗಾಹುತಿಯಾಗಿವೆ. ಕದ್ರಿ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸಿದರು.