ಮಂಗಳೂರು: ರಾಜ್ಯದ ಪುರಸಭೆ, ಪಟ್ಟಣ ಪಂಚಾಯತ್‌ಗಳಿಗೆ ಇತ್ತೀಚೆಗೆ ನಡೆದ ಚುನಾವಣೆಯ ಮತ ಎಣಿಕೆ ನಿನ್ನೆ ನಡೆದಿದ್ದು, ಮೂಡುಬಿದಿರೆ ಪುರಸಭೆ ಹಾಗೂ ಸುಳ್ಯ ಪಟ್ಟಣ ಪಂಚಾಯತ್ನಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ. ಮುಲ್ಕಿಯಲ್ಲಿ ಮೈತ್ರಿ ಪಕ್ಷಗಳು ಮೇಲುಗೈ ಸಾಧಿಸಿವೆ.
ಇನ್ನು, ಮುಲ್ಕಿ ಪಟ್ಟಣ ಪಂಚಾಯತ್ನಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಪಕ್ಷ ಮೇಲುಗೈ ಸಾಧಿಸಿದೆ. ಸುಳ್ಯ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ 1ನೇ ವಾರ್ಡ್ನ ದುಗಲಡ್ಕ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶಶಿಕಲಾ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಜಯಂತಿ ಭಾಸ್ಕರ 314 ಮತ ಗಳಿಸಿ ಪರಾಭವಗೊಂಡಿದ್ದಾರೆ. ಮೂಡುಬಿದಿರೆ ಪುರಸಭೆ ಹಾಗೂ ಸುಳ್ಯ ಪಟ್ಟಣ ಪಂಚಾಯಿತಿಗಳ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಮೇಲುಗೈ ಸಾಧಿಸಿದೆ.