ಮಂಗಳೂರು: ಮೂಡುಬಿದಿರೆ ತಾಲೂಕಿನ ಐವರು ಪೊಲೀಸರಲ್ಲಿ ಕೊರೊನಾ ಪಾಸಿಟಿವ್ ದೃಢಗೊಂಡಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆಯನ್ನು ಸೀಲ್ಡೌನ್ ಮಾಡಲಾಗಿದೆ.
ಇಲ್ಲಿನ ಪೊಲೀಸರಲ್ಲಿ ಸೋಂಕಿನ ಲಕ್ಷಣ ಕಂಡು ಬಂದಿದ್ದು, ಅವರ ಗಂಟಲು ದ್ರವದ ಮಾದರಿ ತಪಾಸಣೆಗೆ ಕಳುಹಿಸಲಾಗಿತ್ತು. ಬುಧವಾರ ಸಂಜೆ ವರದಿ ಬಂದಿದ್ದು, ಐವರಲ್ಲಿ ಸೋಂಕು ದೃಢಗೊಂಡಿದೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದೆ. ಅಲ್ಲದೇ, ಠಾಣೆಯಲ್ಲಿರುವ ಪೊಲೀಸರು ಕ್ವಾರಂಟೈನ್ಗೆ ಒಳಗಾಗಿದ್ದಾರೆ.
ಮೇ 22ರಂದು ಮುಂಬೈನಿಂದ ಆಗಮಿಸಿದ್ದ ವ್ಯಕ್ತಿಯೊಬ್ಬರು ಮೂಡುಬಿದಿರೆಯ ಕಡದಂದಲೆ ಬಳಿಯಿರುವ ಕ್ವಾರಂಟೈನ್ ಕೇಂದ್ರದಲ್ಲೇ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರ ಮೃತದೇಹದ ಸ್ವ್ಯಾಬ್ ಟೆಸ್ಟ್ ವರದಿಯಲ್ಲಿ ಪಾಸಿಟಿವ್ ಬಂದಿತ್ತು. ಈ ಹಿನ್ನೆಲೆಯಲ್ಲಿ ಅಂದು ಅವರ ಮರಣೋತ್ತರ ಕಾರ್ಯದಲ್ಲಿ ಭಾಗವಹಿಸಿದ್ದ ಮೂಡುಬಿದಿರೆಯ ಪೊಲೀಸರು ಕ್ವಾರಂಟೈನ್ಗೆ ಒಳಗಾಗಿದ್ದರು.