ETV Bharat / state

ಕಡಬ ಸರ್ಕಾರಿ ಶಾಲೆಗಿಲ್ಲ ಅಭಿವೃದ್ಧಿ ಭಾಗ್ಯ : ಕಳಪೆ ಕಾಮಗಾರಿಗೆ ಕನ್ನಡ ಶಾಲೆ ಬಲಿ - ಮಂಗಳೂರು ಜಿಲ್ಲಾ ಸುದ್ದಿ

ಸುಮಾರು 40 ವಿದ್ಯಾರ್ಥಿಗಳಿರುವ ಶಾಲೆ ಆರಂಭಗೊಂಡು ಕೇವಲ 15 ವರ್ಷಗಳಷ್ಟೇ ಆಗಿದೆ. ಸುಮಾರು 13 ವರ್ಷಗಳ ಹಿಂದೆ ಶಾಲೆಯ ಹೊಸ ಕಟ್ಟಡ ನಿರ್ಮಾಣಗೊಂಡಿದೆ. ಶಾಲೆಯ ತರಗತಿಯ ಕೊಠಡಿ ಛಾವಣಿ ಕಳಪೆ ಕಾಮಗಾರಿಯಿಂದಾಗಿ ಬಿರುಕು ಬಿಟ್ಟು ಕಬ್ಬಿಣದ ಸರಳುಗಳು ಹೊರಗೆ ಕಾಣಿಸುತ್ತಿವೆ. ಛಾವಣಿ ಭಾಗಿರುವುದರಿಂದ ಗೋಡೆಯೂ ಬಿರುಕುಬಿಟ್ಟು ಅಪಾಯವನ್ನು ಆಹ್ವಾನಿಸುತ್ತಿದೆ.

ಸರಕಾರಿ ಕಿರಿಯ ಪ್ರಾಥಮಿಕ ಶಾಲೆ
author img

By

Published : Sep 28, 2019, 5:38 PM IST

Updated : Sep 28, 2019, 7:06 PM IST

ಕಡಬ(ಮಂಗಳೂರು) : ಕೇವಲ 13 ವರ್ಷಗಳ ಹಿಂದಷ್ಟೇ ನಿರ್ಮಿಸಿದ್ದ ಶಾಲಾ ಕಟ್ಟಡ ಬಾಗಿ ಬೆಂಡಾಗಿದ್ದು ಅಪಾಯದ ಮುನ್ಸೂಚನೆ ನೀಡುತ್ತಿದ್ದರೂ ಸಹ ಯಾವೊಬ್ಬ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಗಮನ ಹರಿಸದ ಕಾರಣ, ಅದೇ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುವ ಪರಿಸ್ಥಿತಿ ಕಡಬ ತಾಲೂಕಿನ ಮೂರಾಜೆ ಕೊಪ್ಪ ಸರ್ಕಾರಿ ಶಾಲಾ ಮಕ್ಕಳಿಗೆ ಒದಗಿಬಂದಿದೆ.

ಮಂಗಳೂರು ಜಿಲ್ಲೆಯ ಕಡಬ ತಾಲೂಕಿನ ಮೂರಾಜೆ ಕೊಪ್ಪ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಅಭಿವೃದ್ದಿ ವಂಚಿತವಾಗಿದೆ. ಶಾಲಾ ಕಟ್ಟಡ ಶಿಥಿಲಾವಸ್ಥೆಗೆ ತಲುಪಿದ್ದರೂ ಸಹ ಯಾವುದೇ ಅಧಿಕಾರಿಗಳು, ಜನಪ್ರತಿನಿಧಿಗಳು ಶಾಲೆಯತ್ತ ಗಮನ ಹರಿಸುತ್ತಿಲ್ಲ. ಶಾಲಾ ಕಟ್ಟಡ ಕೂಡಲೇ ತೆರವುಮಾಡಿ ಹೊಸ ಕಟ್ಟಡ ನಿರ್ಮಿಸುತ್ತೇವೆ ಎಂಬ ಸುಳ್ಯ ಶಾಸಕ ಎಸ್​. ಅಂಗಾರರ ಮಾತು ಬರೀ ಮಾತಾಗಿಯೇ ಉಳಿದಿದೆ.

ಕಡಬ ಗ್ರಾಮದ ಮೂರಾಜೆ ಕೊಪ್ಪ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ

ಸುಮಾರು 40 ವಿದ್ಯಾರ್ಥಿಗಳಿರುವ ಶಾಲೆ ಆರಂಭಗೊಂಡು ಕೇವಲ 15 ವರ್ಷಗಳಷ್ಟೇ ಆಗಿದೆ. ಸುಮಾರು 13 ವರ್ಷಗಳ ಹಿಂದೆ ಶಾಲೆಯ ಹೊಸ ಕಟ್ಟಡ ನಿರ್ಮಾಣಗೊಂಡಿದೆ. ಶಾಲೆಯ ತರಗತಿಯ ಕೊಠಡಿ ಚಾವಣಿ ಕಳಪೆ ಕಾಮಗಾರಿಯಿಂದಾಗಿ ಬಿರುಕು ಬಿಟ್ಟು ಕಬ್ಬಿಣದ ಸರಳುಗಳು ಹೊರಗೆ ಕಾಣಿಸುತ್ತಿವೆ. ಛಾವಣಿ ಭಾಗಿರುವುದರಿಂದ ಗೋಡೆಯೂ ಬಿರುಕುಬಿಟ್ಟು ಅಪಾಯವನ್ನು ಆಹ್ವಾನಿಸುತ್ತಿದೆ.

ಶಾಲೆಯ ಕಟ್ಟಡ ಶಿಥಿಲಗೊಂಡಿರುವ ವಿಚಾರವನ್ನು ಕಡಬ ಗ್ರಾಮಸಭೆಯಲ್ಲಿ ಪ್ರಸ್ತಾಪಿಸಿದ್ದ ಸ್ಥಳೀಯ ಮುಂದಾಳು ಸುರೇಂದ್ರ ಅವರು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಈ ಬಗ್ಗೆ ಸೂಕ್ತ ಕ್ರಮ ಕೈಗೊಂಡು ವಿದ್ಯಾರ್ಥಿಗಳಿಗೆ ಅಪಾಯ ಸಂಭವಿಸದಂತೆ ಮುಂಜಾಗರೂಕತೆ ವಹಿಸಬೇಕೆಂದು ಆಗ್ರಹಿಸಿ ಇಲಾಖೆ ಅಧಿಕಾರಿಗಳಿಗೆ ಹಾಗೂ ಜನಪ್ರತಿನಿಧಿಗಳಿಗೆ ಮಾಹಿತಿ ನೀಡಿದ್ದರು. ಅಲ್ಲದೆ ಪಂಚಾಯ್​ ಅಭಿವೃದ್ಧಿ ಅಧಿಕಾರಿಗಳು ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕೂಡಲೇ ಸರಿಪಡಿಸುತ್ತೇವೆ ಎಂಬ ಮಾತು ಹೇಳಿ ಕಾಲ್ಕಿತ್ತಿದ್ದಾರೆ. ಆದರೆ ಫಲ ಮಾತ್ರ ಇನ್ನೂ ಶೂನ್ಯ.

ಗ್ರಾಮೀಣ ಪ್ರದೇಶದಲ್ಲಿನ ಸರ್ಕಾರಿ ಶಾಲೆಗಳೂ ಒಂದೊಂದಾಗಿ ಮುಚ್ಚುತ್ತಿವೆ. ಚಾಲನೆಯಲ್ಲಿರುವ ಶಾಲೆಗಳಿಗಾದರೂ ಸರ್ಕಾರ ಒತ್ತು ನೀಡಿ ಅಭಿವೃದ್ದಿಗೆ ಮುಂದಾದರೆ ಕನ್ನಡ ಸರ್ಕಾರಿ ಶಾಲೆಗಳು ಉಳಿಯುತ್ತವೆ ಎಂಬುದು ಸಾರ್ವಜನಿಕರ ಮಾತು.

Intro:ಕಡಬ

ಬಿರುಕು ಬಿಟ್ಟು ಬೀಳಲು ಸಿದ್ದವಾದ ಶಾಲಾ ಕಟ್ಟಡ, ಕೂಡಲೇ ತೆರವುಮಾಡಿ ಹೊಸ ಕಟ್ಟಡ ಮಾಡುತ್ತೇವೆ ಎಂದು ಸುಳ್ಯ ಶಾಸಕರಾದ ಎಸ್ ಅಂಗಾರ ಸೇರಿದಂತೆ ಜನಪ್ರತಿನಿಧಿಗಳ ಭರವಸೆ, ಆದರೆ ಒಂದು ವರ್ಷ ಕಳೆದರೂ ಇವರ ಮಾತು ಬರೇ ಭರವಸೆಯಾಗಿಯೇ ಉಳಿಯಿತು, ಇನ್ನೂ ವಿಧಿಯೆಂಬತ್ತೇ ಶೆಡ್ಡ್ ನಲ್ಲಿಯೇ ಪಾಠ ಕೇಳಿಸುತ್ತಿರುವ ಪುಟಾಣಿಗಳು. ಇಂತಹದೊಂದು ದಯನೀಯ ಸ್ಥಿತಿ ಕಾಣಲು ಸಿಗುವುದು ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ ಮೂರಾಜೆ ಕೊಪ್ಪ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ.

ಶಾಲಾ ಕಟ್ಟಡದ ಗೋಡೆ ಹಾಗೂ ಛಾವಣಿಯಲ್ಲಿ ಬಿರುಕು ಕಂಡುಬಂದಿರುವ ಕಾರಣದಿಂದಾಗಿ ಶಾಲಾ ವಿದ್ಯಾರ್ಥಿಗಳು ಆತಂಕದಿಂದಲೇ ತರಗತಿ ಕೊಠಡಿಯಲ್ಲಿ ಕುಳಿತು ಪಾಠ ಕೇಳುವಂತಹ ಅತಂತ್ರ ಸ್ಥಿತಿ ಎದುರಾಗಿದೆ.

ಸುಮಾರು 40 ವಿದ್ಯಾರ್ಥಿಗಳಿರುವ ಮೂರಾಜೆ ಕೊಪ್ಪ ಶಾಲೆ ಆರಂಭಗೊಂಡು ಕೇವಲ 15 ವರ್ಷಗಳಷ್ಟೇ ಆಗಿದೆ. ಸುಮಾರು 13 ವರ್ಷಗಳ ಹಿಂದೆ ಶಾಲೆಗೆ ಹೊಸ ಕಟ್ಟಡ ನಿರ್ಮಾಣಗೊಂಡಿದೆ. 2 ತರಗತಿ ಕೊಠಡಿಗಳು ಹಾಗೂ 1 ಕಚೇರಿ ಕೊಠಡಿ ಇರುವ ಈ ಕಟ್ಟಡದ 1 ತರಗತಿ ಕೊಠಡಿಯ ಕಾಂಕ್ರೀಟ್ ಛಾವಣಿಯಲ್ಲಿ ಕಳಪೆ ಕಾಮಗಾರಿಯಿಂದಾಗಿ ಬಿರುಕು ಕಾಣಿಸಿಕೊಂಡು ಛಾವಣಿಗೆ ಹಾಕಿದ ಕಬ್ಬಿಣದ ಸರಳುಗಳು ಹೊರಗೆ ಕಾಣಿಸುತ್ತಿವೆ. ಛಾವಣಿ ಭಾಗಿರುವುದರೊಂದಿಗೆ ಗೋಡೆಯೂ ಬಿರುಕುಬಿಟ್ಟು ಅಪಾಯವನ್ನು ಆಹ್ವಾನಿಸುತ್ತಿದೆ.

ಶಾಲೆಯ ಕಟ್ಟಡ ಶಿಥಿಲಗೊಂಡಿರುವ ವಿಚಾರವನ್ನು ಕಡಬ ಗ್ರಾಮಸಭೆಯಲ್ಲಿ ಪ್ರಸ್ತಾಪಿಸಿ ಸ್ಥಳೀಯ ಮುಂದಾಳು ಸುರೇಂದ್ರ ಅವರು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಈ ಬಗ್ಗೆ ಸೂಕ್ತ ಕ್ರಮ ಕೈಗೊಂಡು ವಿದ್ಯಾರ್ಥಿಗಳಿಗೆ ಅಪಾಯ ಸಂಭವಿಸದಂತೆ ಮುಂಜಾಗರೂಕತೆ ವಹಿಸಬೇಕೆಂದು ಆಗ್ರಹಿಸಿದ್ದರು.

ಇಲಾಖಾಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ ಈ ಕುರಿತು ಮಾಹಿತಿಯನ್ನು ನೀಡಲಾಗಿತ್ತು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಶಿಕ್ಷಣ ಇಲಾಖಾ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆಯನ್ನೂ ಮಾಡಿದ್ದಾರೆ. ಮಾತ್ರವಲ್ಲದೆ ಸುಳ್ಯ ಶಾಸಕರಾದ ಎಸ್.ಅಂಗಾರ, ಜಿಲ್ಲಾ, ತಾಲೂಕು,ಗ್ರಾಮ ಪಂಚಾಯತ್ ಸದಸ್ಯರು, ಎಲ್ಲಾ ಭೇಟಿ ನೀಡಿ ಕೂಡಲೇ ಸರಿಪಡಿಸುತ್ತೇವೆ ಎಂಬ ಮಾತು ಹೇಳಿ ಕಾಲ್ಕಿತ್ತಿದ್ದಾರೆ.ಆದರೆ ಫಲ ಮಾತ್ರ ಇನ್ನೂ ಶೂನ್ಯ.

ಒಟ್ಟಿನಲ್ಲಿ ಬಿರುಕು ಬಿಟ್ಟಿರುವುದರಿಂದ ಪೋಷಕರು ಮಕ್ಕಳನ್ನು ಆತಂಕದಿಂದಲೇ ಶಾಲೆಗೆ ಕಳುಹಿಸುತ್ತಿದ್ದಾರೆ. ಸಂಬಂಧಪಟ್ಟವರು ಯಾವುದೇ ಕ್ರಮ ಕೈಗೊಳ್ಳದೇ ಹೋದರೆ ಮಕ್ಕಳನ್ನು ಶಾಲೆಗೆ ಕಳುಹಿಸದಿರಲು ಪೋಷಕರೂ ನಿರ್ಧರಿಸಿದ್ದಾರೆ. ಮಕ್ಕಳಿಲ್ಲದೆ ಅಲ್ಲಲ್ಲಿ ಸರಕಾರಿ ಶಾಲೆಗಳು ಮುಚ್ಚುಗಡೆಯಾಗುತ್ತಿರುವ ಸಮಯದಲ್ಲಿ ಗ್ರಾಮೀಣ ಪ್ರದೇಶದ ಈ ಶಾಲೆಯಲ್ಲಿ ಮಕ್ಕಳಿದ್ದರೂ ಕಟ್ಟಡ ಸರಿ ಇಲ್ಲದೇ ಮೂರಾಜೆ ಶಾಲೆ ಮುಚ್ಚುವ ಸ್ಥಿತಿ ತಲುಪುತ್ತಿರುವುದು ವಿಷಾದದ ಸಂಗತಿಯಾಗಿದೆ. ಜನಪ್ರತಿನಿಧಿಗಳು,ಅಧಿಕಾರಿಗಳು ಇನ್ನಾದರೂ ನಿದ್ದೆಯಿಂದ ಎದ್ದು ಕಾರ್ಯಪ್ರವೃತರಾಗಬೇಕಿದೆ ಎಂಬುದು ಸಾರ್ವಜನಿಕರ, ಮತ್ತು ಪೋಷಕರ ಮಾತು.Body:ಮೂರಾಜೆ ಶಾಲೆConclusion:ಪ್ರಕಾಶ್ ಕಡಬ, ಸುಳ್ಯ (ಮಂಗಳೂರು)
Last Updated : Sep 28, 2019, 7:06 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.