ETV Bharat / state

ದಕ್ಷಿಣಕನ್ನಡ: ಪೊಲೀಸ್ ಸಿಬ್ಬಂದಿ ಮೇಲೆ ನೈತಿಕ ಪೊಲೀಸ್ ಗಿರಿ ಆರೋಪ, ಇಬ್ಬರ ಬಂಧನ - ಪೊಲೀಸ್ ಸಿಬ್ಬಂದಿ ತನ್ನ ಪತ್ನಿ

ಪೊಲೀಸ್​ ಕಾನ್ಸ್​ಟೇಬಲ್​ವೊಬ್ಬರಿಗೆ ಕೆಟ್ಟ ಅನುಭವವಾಗಿದೆ. ತಮ್ಮ ಪತ್ನಿಯ ಎದುರೇ ಕಾನ್ಸ್​ಟೇಬಲ್​ಗೆ ನೈತಿಕ ಪೊಲೀಸ್​ ಗಿರಿ ನಡೆದಿರುವ ಆರೋಪವೊಂದು ಕೇಳಿ ಬಂದಿದೆ. ಈ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದಿದೆ.

Moral Policing on police constable  police constable in Dakshina Kannada  Moral Policing  ಪೊಲೀಸ್ ಸಿಬ್ಬಂದಿ ಮೇಲೆ ನೈತಿಕ ಪೊಲೀಸ್ ಗಿರಿ  ಇಬ್ಬರ ಬಂಧನ  ಪೊಲೀಸ್​ ಕಾನ್ಸ್​ಟೇಬಲ್​ವೊಬ್ಬರಿಗೆ ಕೆಟ್ಟ ಅನುಭವ  ಕಾನ್ಸ್​ಟೇಬಲ್​ಗೆ ನೈತಿಕ ಪೊಲೀಸ್​ ಗಿರಿ  ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿ  ಮನೀಷ್ ಪೂಜಾರಿ ಮತ್ತು ಮಂಜುನಾಥ ಆಚಾರ್ಯ  ಪೊಲೀಸ್ ಸಿಬ್ಬಂದಿ ತನ್ನ ಪತ್ನಿ  ನೈತಿಕ ಪೊಲೀಸ್ ಗಿರಿ
ಪೊಲೀಸ್ ಸಿಬ್ಬಂದಿ ಮೇಲೆ ನೈತಿಕ ಪೊಲೀಸ್ ಗಿರಿ ಆರೋಪ
author img

By

Published : Jul 28, 2023, 5:14 PM IST

ಬಂಟ್ವಾಳ, ದಕ್ಷಿಣಕನ್ನಡ: ಪೊಲೀಸ್ ಮೇಲೆಯೇ ನೈತಿಕ ಪೊಲೀಸ್ ಗಿರಿ ನಡೆಸಿದ ಆರೋಪ ಕೇಳಿ ಬಂದಿರುವ ಘಟನೆ ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ. ತುಂಬೆ ನಿವಾಸಿಗಳಾದ ಮನೀಷ್ ಪೂಜಾರಿ ಮತ್ತು ಮಂಜುನಾಥ ಆಚಾರ್ಯ ಬಂಧಿತ ಆರೋಪಿಗಳೆಂದು ಗುರುತಿಸಲಾಗಿದೆ.

ಬಿ.ಸಿ ರೋಡ್ ನಿವಾಸಿಯಾಗಿರುವ ಪೊಲೀಸ್ ಸಿಬ್ಬಂದಿ ತನ್ನ ಪತ್ನಿಯ ಜೊತೆ ನಡೆದುಕೊಂಡು ಹೋಗುತ್ತಿದ್ದ ಸಂದರ್ಭ ಅವರ ಮೇಲೆ ನೈತಿಕ ಪೊಲೀಸ್ ಗಿರಿ ಮಾಡಿದ್ದಾಗಿ ಆಪಾದಿಸಲಾಗಿದೆ. ಹೀಗಾಗಿ ಅವರಿಬ್ಬರನ್ನು ಪೊಲೀಸರು ಬಂಧಿಸಿ ಹೆಚ್ಚಿನ ವಿಚಾರಣೆಗೊಳಪಡಿಸಿದ್ದಾರೆ.

ಘಟನೆಯ ವಿವರ: ಪೊಲೀಸ್ ಸಿಬಂದಿಯೊಬ್ಬರು ಬಿ.ಸಿ ರೋಡ್​ನಲ್ಲಿರುವ ಪೊಲೀಸ್ ವಸತಿಗೃಹದಲ್ಲಿ ತಂಗಿದ್ದಾರೆ. ಅವರು ತನ್ನ ಪತ್ನಿ ಮತ್ತು ಸಂಬಂಧಿ ಜೊತೆ ಬಿ.ಸಿ.ರೋಡ್​ನ ಹೋಟೆಲ್ ಒಂದಕ್ಕೆ ಊಟಕ್ಕೆ ಜುಲೈ 27ರಂದು ರಾತ್ರಿ ಹೋಗಿದ್ದರು. ಬಳಿಕ ಅಲ್ಲಿಂದ ನಡೆದುಕೊಂಡು ಮನೆಗೆ ಬರುವ ವೇಳೆ ವೈನ್ ಶಾಪ್ ಮುಂಭಾಗದಲ್ಲಿದ್ದ ಇಬ್ಬರು ಯುವಕರು ಇವರನ್ನು ಗಮನಿಸಿ, ಹಿಂಬಾಲಿಸಿಕೊಂಡು ಬಂದಿದ್ದಾರೆ.

ಪೊಲೀಸ್ ಸಿಬಂದಿ ಕುಟುಂಬವನ್ನು ಮನೆಗೆ ಮುಟ್ಟಿಸಿ ಬಳಿಕ ಮತ್ತೆ ಕೇಸ್ ಒಂದರ ವಿಚಾರಕ್ಕೆ ಮನೆಯಿಂದ ಹೊರಕ್ಕೆ ಹೊರಡುತ್ತಿದ್ದಂತೆ, ಅವರನ್ನು ಅಡ್ಡಗಟ್ಟಿ ನಿನಗೆ ಯುವತಿಯರೊಂದಿಗೆ ಏನು ಕೆಲಸ ಎಂದು ಅವಾಚ್ಯ ಶಬ್ದಗಳಿಂದ ಬೈದಿದ್ದಾರೆ. ನಾನು ಬಿ.ಸಿ. ರೋಡ್​ನ ಪೊಲೀಸ್ ಮತ್ತು ನನ್ನ ಜೊತೆಯಲ್ಲಿದ್ದವರು ನನ್ನ ಪತ್ನಿ ಮತ್ತು ನಾದಿನಿ ಎಂದು ಪೊಲೀಸ್​ ಸಿಬ್ಬಂದಿ ಅವರಿಗೆ ತಿಳಿ ಹೇಳಿದ್ದಾರೆ.

ಆರೋಪಿಗಳು ಕೇಳದೇ, ನೀನು ಪೊಲೀಸ್ ಅಲ್ಲ. ಅವಳು ನಿನ್ನ ಪತ್ನಿಯೂ ಅಲ್ಲ ಎಂದು ಹೇಳಿದ್ದಾರೆ. ಇದನ್ನು ನೋಡಿ ಅಲ್ಲಿಗೆ ಬಂದ ಪತ್ನಿ ಮೇಲೆಯೂ ಅಸಭ್ಯವಾಗಿ ವರ್ತಿಸಿ ಕಿರುಕುಳ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಇಬ್ಬರ ವಿರುದ್ಧ ಸರಕಾರಿ ಕರ್ತವ್ಯದ ಮೇಲೆ ಹೋಗುತ್ತಿದ್ದಾಗ ಅಡ್ಡಿಪಡಿಸಿದ ಆರೋಪದ ಮೇಲೆ ಐಪಿಸಿ ಕಲಂ 341, 504, 0354 (D), 354 (A) , r/w 34 ರಂತೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಳ್ಳಲಾಗಿದೆ.

ಓದಿ: ನೈತಿಕ ಪೊಲೀಸ್ ಗಿರಿ: ಪ್ರಕರಣ ದಾಖಲಾಗುತ್ತಿದ್ದಂತೆ ಇಬ್ಬರನ್ನ ಬಂಧಿಸಿದ ದಾವಣಗೆರೆ ಪೊಲೀಸರು.. "ತನಿಖೆ ನಡೆಸಿ ಕ್ರಮಕೈಗೊಳ್ಳುತ್ತೇವೆ" ಎಂದ ಎಸ್​ಪಿ

ಕಾಲೇಜು ವಿದ್ಯಾರ್ಥಿನಿ ಮೇಲೆ ನೈತಿಕ ಪೊಲೀಸ್ ಗಿರಿ ಆರೋಪ: ಕಳೆದ ಜುಲೈ 21ರಂದು ಪಣಂಬೂರು ಬೀಚ್​ಗೆ ತೆರಳಿದ್ದ ವಿದ್ಯಾರ್ಥಿನಿಯೊಬ್ಬರಿಗೆ ಯುವಕರ ಗುಂಪೊಂದು ಅವಾಚ್ಯ ಪದಗಳಿಂದ ನಿಂದಿಸಿ ಹಲ್ಲೆ ನಡೆಸಿ ನೈತಿಕ ಪೊಲೀಸ್ ಗಿರಿ ನಡೆಸಿದ ಆರೋಪ ಪ್ರಕರಣ ನಡೆದಿತ್ತು. ಮಂಗಳೂರಿನ ಮೆಡಿಕಲ್ ಕಾಲೇಜೊಂದರ 6 ವಿದ್ಯಾರ್ಥಿಗಳು ಜುಲೈ 21ರ ಶುಕ್ರವಾರ ಸಂಜೆ 5.30ರ ಸುಮಾರಿಗೆ ಪಣಂಬೂರು ಬೀಚ್​ಗೆ ಹೋಗಿದ್ದಾರೆ. ಇವರು ಬೀಚ್​ನಲ್ಲಿದ್ದ ವೇಳೆ ಇಬ್ಬರು ಅಪರಿಚಿತರು ಇವರ ಚಲನವಲನಗಳನ್ನು ಗಮನಿಸುತ್ತ, ಮೊಬೈಲ್ ಫೋನ್​ಗಳಲ್ಲಿ ವಿಡಿಯೋ ಮಾಡಿದ್ದರು. ವಿದ್ಯಾರ್ಥಿಗಳು ಇದನ್ನು ಗಮನಿಸಿದರೂ ಅದನ್ನು ‌ಪ್ರಶ್ನಿಸದೇ ತಮ್ಮ ಪಾಡಿಗೆ ತಾವು ಇದ್ದರು. ನಂತರ ಯುವಕರು ಬೈಕ್​ನಲ್ಲಿ, ಯುವತಿಯರು ಬಸ್​ನಲ್ಲಿ ಹಿಂದಿರುಗಿದ್ದಾರೆ.

ನಾಲ್ವರು ವಿದ್ಯಾರ್ಥಿನಿಯರ ಪೈಕಿ ಓರ್ವ ಯುವತಿ ನಗರದ ಚಿಲಿಂಬಿಯಲ್ಲಿ ಬಸ್​ನಿಂದ ಇಳಿದು ತನ್ನ ಪಿಜಿ ಕಡೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಪಣಂಬೂರು ಬೀಚ್​ನಲ್ಲಿ ಹಿಂಬಾಲಿಸುತ್ತಿದ್ದ ಅದೇ ಅಪರಿಚಿತರು ಆಕೆಯನ್ನು ಹಿಂಬಾಲಿಸಿಕೊಂಡು ಬಂದು ಯುವತಿಗೆ ಬೆದರಿಸಿದ್ದರು. ಅಲ್ಲದೆ 'ಕೇರಳ ಸ್ಟೋರಿ' ನೋಡಿಯೂ ನಿಮಗೆ ಬುದ್ಧಿ ಬರುವುದಿಲ್ವಾ ಎಂದು ಅವಾಚ್ಯ ಪದಗಳಿಂದ ಬೈದು ಹಲ್ಲೆ ನಡೆಸಿದ್ದರು. ಈ ಸಂಬಂಧ ವಿದ್ಯಾರ್ಥಿನಿಯರು ಉರ್ವ ಸ್ಟೋರ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ತನಿಖೆ ಕೈಗೊಳ್ಳಲಾಗಿತ್ತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.