ETV Bharat / state

ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಒಟ್ಟಿಗೆ ಬರೆದು ಪಾಸ್​ ಮಾಡಿದ ತಾಯಿ, ಮಗಳು! - ದ್ವಿತೀಯ ಪಿಯುಸಿ

ಗೃಹರಕ್ಷಕ ದಳದಲ್ಲಿ ಕೆಲಸ ಮಾಡುತ್ತಿರುವ ತಾಯಿ ತನ್ನ ಮಗಳೊಂದಿಗೆ ದ್ವಿತೀಯ ಪಿಯುಸಿ ಪರೀಕ್ಷೆ ಬರೆದು ಉತ್ತೀರ್ಣರಾಗಿದ್ದಾರೆ.

mother-and-daughter-passed-second-puc-exam-together
ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಒಟ್ಟಿಗೆ ಪಾಸ್​ ಮಾಡಿದ ತಾಯಿ- ಮಗಳು!
author img

By

Published : Apr 21, 2023, 9:57 PM IST

Updated : Apr 21, 2023, 10:56 PM IST

ಸುಳ್ಯ(ದಕ್ಷಿಣ ಕನ್ನಡ): ತಾಯಿ ಮತ್ತು ಮಗಳು ಒಟ್ಟಿಗೆ ದ್ವಿತೀಯ ಪಿಯುಸಿ ಪರೀಕ್ಷೆ ಬರೆದು ಉತ್ತೀರ್ಣರಾದ ಅಪರೂಪದ ಘಟನೆಗೆ ಸುಳ್ಯ ಸಾಕ್ಷಿಯಾಗಿದೆ. ಜಯನಗರದ ರಮೇಶ್ ಎಂಬವರ ಪತ್ನಿ ಗೀತಾ ಮತ್ತು ಪುತ್ರಿ ತ್ರಿಶಾ ಪರೀಕ್ಷೆ ಪಾಸ್ ಮಾಡಿದ್ದಾರೆ. ಸುಳ್ಯದ ಪೊಲೀಸ್ ಠಾಣೆಯಲ್ಲಿ ಗೃಹರಕ್ಷಕ ದಳದ ಸಿಬ್ಬಂದಿಯಾಗಿರುವ ಗೀತಾ ವೃತ್ತಿ ಜೀವನದ ಮಧ್ಯೆಯೂ ಅಧ್ಯಯನ ನಡೆಸಿದ್ದರು. ಖಾಸಗಿಯಾಗಿ ಕಲಾ ವಿಭಾಗದಲ್ಲಿ ಶಿಕ್ಷಣ ಪಡೆದು ತಮ್ಮ 45ನೇ ವರ್ಷದಲ್ಲಿ ಪಿಯುಸಿ ಉತ್ತೀರ್ಣರಾಗಿದ್ದಾರೆ.

ತ್ರಿಶಾ ಸುಳ್ಯದ ಜೂನಿಯರ್ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ ಓದಿ ಪರೀಕ್ಷೆ ಬರೆದಿದ್ದರು. 25 ವರ್ಷದ ಹಿಂದೆ ಗೀತಾ ಅವರ ಹೈಸ್ಕೂಲ್ ವಿದ್ಯಾಭ್ಯಾಸ ಮೊಟಕುಗೊಂಡಿತ್ತು. ಎರಡು ವರ್ಷಗಳ ಹಿಂದೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದು ಉತ್ತೀರ್ಣಗೊಂಡಿದ್ದರು. ಈ ವರ್ಷ ಪಿಯುಸಿ ಪರೀಕ್ಷೆಯನ್ನು ಸುಳ್ಯದ ಜೂನಿಯರ್ ಕಾಲೇಜಿನಲ್ಲಿ ಬರೆದಿದ್ದರು.

ಮನೆಗೆಲಸದ ಬಿಡುವಿನ ವೇಳೆ ಇವರು ವಿದ್ಯಾಭ್ಯಾಸ ನಡೆಸಿದ್ದಾರೆ. ಕಲಿಕೆಗೆ ಪೂರಕವಾಗಿ ಕಾಲೇಜಿನ ಉಪನ್ಯಾಸಕರೂ ಪುಸ್ತಕಗಳನ್ನು ನೀಡಿ ಸಹಕರಿಸಿದ್ದು, ಗೀತಾ ಕೃತಜ್ಞತೆ ಸಲ್ಲಿಸಿದ್ದಾರೆ. ಈ ಬಗ್ಗೆ ಗೀತಾ ಅವರು ಈಟಿವಿ ಭಾರತದೊಂದಿಗೆ ಮಾತನಾಡಿದ್ದು, 'ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವುದು ತುಂಬಾ ಖುಷಿ ತಂದಿದೆ. ನನ್ನ ಪತಿ ಮತ್ತು ಮಗಳಿಗೂ ನಾನು ಉತ್ತೀರ್ಣಳಾಗಿರುವುದು ಬಹಳ ಸಂತೋಷವಾಗಿದೆ. ಮುಂದಿನ ವಿದ್ಯಾಭ್ಯಾಸ ಮುಂದುವರೆಸಲು ಇಷ್ಟವಿಲ್ಲ. ಮಗಳನ್ನು ಚೆನ್ನಾಗಿ ಓದಿಸುತ್ತೇನೆ' ಎಂದು ಹೇಳಿದರು.

ಇದನ್ನೂ ಓದಿ:ಪಿಯುಸಿ ಪರೀಕ್ಷೆ: ವಾಣಿಜ್ಯ ವಿಭಾಗದಲ್ಲಿ ಇವರೇ ನೋಡಿ ಟಾಪರ್ಸ್!

Last Updated : Apr 21, 2023, 10:56 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.