ದಕ್ಷಿಣ ಕನ್ನಡ/ಗುರುವಾಯನಕೆರೆ: ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ಶಕ್ತಿನಗರದ ಬಳಿ ಪೊಟ್ಟುಕೆರೆ ಸಮೀಪ ಕೊಲೆ ನಡೆದಿದೆ.
ನಾರಾಯಣ ಯಾನೆ ರಮೇಶ್ ಎಂಬುವರು ಕೊಲೆಯಾದ ವ್ಯಕ್ತಿ ಎಂದು ತಿಳಿದು ಬಂದಿದೆ. ಜ.24 ರಂದು ರಾತ್ರಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತನಿಖೆ ಮುಂದುವರೆದಿದ್ದು, ಕೊಲೆ ಮಾಡಿರುವ ಕಾರಣ , ಆರೋಪಿಗಳ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ, ಪೊಲೀಸರು ತನಿಖೆ ಆರಂಭಿಸಿದ್ದಾರೆ.