ETV Bharat / state

ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಸಂಭ್ರಮದ ನಾಗರಪಂಚಮಿ ಆಚರಣೆ - Nagar Panchami celebration at Puttur Mahatobhara Sri Mahalingeshwar Temple

ನಾಗರ ಪಂಚಮಿ ನಿಮಿತ್ತ ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮೂಲ ನಾಗ, ವಾಸುಕೀ ನಾಗರಾಜ ಸನ್ನಿಧಿಯಲ್ಲಿ ಹಾಲಿನ, ಸೀಯಾಳಾಭಿಷೇಕ ನಡೆಯಿತು.

nagara-panchami-celebration-at-puttur-mahatobhara-sri-mahalingeshwar-temple
ಪುತ್ತೂರು : ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಸಂಭ್ರಮದ ನಾಗರಪಂಚಮಿ ಆಚರಣೆ
author img

By

Published : Aug 2, 2022, 1:15 PM IST

ಪುತ್ತೂರು(ದಕ್ಷಿಣ ಕನ್ನಡ) : ನಾಗರ ಪಂಚಮಿ ಹಬ್ಬ ಎಲ್ಲೆಡೆ ಸಂಭ್ರಮ ಸಡಗರದಿಂದ ಆಚರಿಸಲ್ಪಡುತ್ತಿದೆ. ಈ ದಿನ ಭಕ್ತರು ದೇವಾಲಯಗಳಿಗೆ ತೆರಳಿ ನಾಗನಿಗೆ ತನುವನ್ನು ಎರೆಯುತ್ತಾರೆ. ಇಲ್ಲಿನ ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲೂ ನಾಗರ ಪಂಚಮಿಯನ್ನು ವಿಶೇಷವಾಗಿ ಆಚರಿಸಲಾಯಿತು.

ಪುತ್ತೂರು : ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಸಂಭ್ರಮದ ನಾಗರಪಂಚಮಿ ಆಚರಣೆ

ಬೆಳಗ್ಗೆ ದೇವಳದ ಮೂಲ ನಾಗನ ಸನ್ನಿಧಿ ಮತ್ತು ದೇವಳದ ಬಳಿಯ ವಾಸುಕೀ ನಾಗರಾಜ ಸನ್ನಿಧಿಯಲ್ಲಿ ಹಾಲಿನ ಅಭಿಷೇಕ ಮತ್ತು ಸೀಯಾಳಾಭಿಷೇಕ ಮತ್ತು ತಂಬಿಲ ಸೇವೆ ನಡೆಯಿತು. ದೇವಳದ ಪ್ರಧಾನ ಅರ್ಚಕ ವೇ ಮೂ ವಿ.ಎಸ್ ಭಟ್, ವೇ ಮೂ ಉದಯ ಭಟ್ ವೈದಿಕ ಕಾರ್ಯಕ್ರಮ ನೆರವೇರಿಸಿದರು. ಅಪಾರ ಸಂಖ್ಯೆ ಭಕ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ, ಸದಸ್ಯರಾದ ಶೇಖರ್ ನಾರಾವಿ, ರಾಮದಾಸ್ ಗೌಡ, ರವೀಂದ್ರನಾಥ ರೈ ಬಳ್ಳಮಜಲು, ಡಾ.ಸುಧಾ ಎಸ್ ರಾವ್, ವೀಣಾ ಬಿ ಕೆ, ಐತ್ತಪ್ಪ ನಾಯ್ಕ್, ರಾಮಚಂದ್ರ ಕಾಮತ್, ಮಾಜಿ ಮೊಕ್ತೇಸರ ಚಿದಾನಂದ ಬೈಲಾಡಿ ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು.

ಓದಿ : ಭಗವಾನ್ ಶ್ರೀ ನಾಗಚಂದ್ರೇಶ್ವರ ದೇವಾಲಯದಲ್ಲಿ ವಿಶೇಷ ನಾಗರಪಂಚಮಿ ಆಚರಣೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.