ಮಂಗಳೂರು: ನಾನು ತಪ್ಪಿ ನಡೆದರೆ ಸಾಮಾಜಿಕ ಜಾಲತಾಣದಲ್ಲಿ ಬೈಯ್ಯಬೇಡಿ. ನನ್ನ ಮನೆಗೆ ಬಂದು, ನನ್ನ ಕೊಠಡಿಗೆ ಕರೆದು ಬೈಯಿರಿ. ನಾನು ಸಾಮಾಜಿಕ ಜಾಲತಾಣವನ್ನು ಬಳಸುವುದಿಲ್ಲ. ಯಾಕೆಂದರೆ ನನ್ನಲ್ಲಿರುವುದು ಸಾಧಾರಣ ಮೊಬೈಲ್ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದರು.
ನಗರದ ನವಭಾರತ ಸರ್ಕಲ್ ಬಳಿಯಿರುವ ರಮಣ ಪೈ ಸಭಾಂಗಣದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಅವರಿಗೆ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಈ ಸಂದರ್ಭ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಅಂಗಾರ, ಸಂಜೀವ ಮಠಂದೂರು, ವೇದವ್ಯಾಸ ಕಾಮತ್, ರಾಜೇಶ್ ನಾಯ್ಕ್, ಉಮಾನಾಥ ಕೋಟ್ಯಾನ್, ಹಾಲಾಡಿ ಶ್ರೀನಿವಾಸ ಶೆಟ್ಟಿ, ದ.ಕ.ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಮಾಜಿ ಸಚಿವ ಯೋಗೀಶ್ ಭಟ್, ಬಿಜೆಪಿ ಮುಖಂಡರಾದ ಬ್ರಿಜೇಶ್ ಚೌಟ, ಕೃಷ್ಣ ಪಾಲೆಮಾರ್ ಮತ್ತಿತರರು ಉಪಸ್ಥಿತರಿದ್ದರು.