ದಕ್ಷಿಣ ಕನ್ನಡ: ಕಡಬ ತಾಲೂಕಿನ ನೆಟ್ಟಣ ಕಿದು ಕೇಂದ್ರೀಯ ಕೃಷಿ ಸಂಶೋಧನಾ ಕೇಂದ್ರ ಸಿಪಿಸಿಆರ್‌ಐನ ಯಾವುದೇ ಕಾರಣಕ್ಕೂ ಮುಚ್ಚಲು ಬಿಡುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.
ಸಿಪಿಸಿಆರ್‌ಐನಲ್ಲಿ ನಡೆಯುತ್ತಿರುವ ಕೃಷಿ ಮೇಳಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಎಲ್ಲರಿಗೂ ತಿಳಿದಿರುವಂತೆ ಅರಣ್ಯ ಇಲಾಖೆ ಹಾಗೂ ಸಂಶೋಧನಾ ಕೇಂದ್ರದಿಂದ ಕೆಲವು ಕಾನೂನಾತ್ಮಕ ತೊಡಕುಗಳು ಎದುರಾಗಿವೆ. ಇದನ್ನೆಲ್ಲ ಕೂಡಲೇ ಸರಿಪಡಿಸುವ ಬಗ್ಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ ಎಂದರು.
ಎಲ್ಲಾ ಸಮಸ್ಯೆಗಳನ್ನು ಸರಿಪಡಿಸಿ ಈ ಸಂಸ್ಥೆಯನ್ನು ಕರ್ನಾಟಕದ ಕೃಷಿ ಸಂಶೋಧನಾ ಯುನಿವರ್ಸಿಟಿಯಾಗಿ ಉನ್ನತೀಕರಿಸಿ, ಕೃಷಿಯ ಬಗ್ಗೆ ಸಂಶೋಧನೆ ಮಾಡುವಂತಹ ಕೃಷಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಅನುಕೂಲಕರವಾದ ರೀತಿಯಲ್ಲಿ ಬೇಕಾದ ವ್ಯವಸ್ಥೆಗಳನ್ನು ಕಲ್ಪಿಸಲಾಗುವುದು ಎಂದರು.
ಇನ್ನು, ಕಟೀಲ್ ಬಿಜೆಪಿ ರಾಜ್ಯಾಧ್ಯಕ್ಷರಾದ ಬಳಿಕ ಈ ಪ್ರದೇಶಕ್ಕೆ ಮೊದಲ ಬಾರಿಗೆ ಭೇಟಿ ನೀಡಿದ ಹಿನ್ನೆಲೆ, ಅವರಿಗೆ ಬಿಜೆಪಿ ಕಾರ್ಯಕರ್ತರು ಅದ್ದೂರಿ ಸ್ವಾಗತ ನೀಡಿದರು. ಕಾರ್ಯಕ್ರಮದಲ್ಲಿ ಸುಳ್ಯ ಶಾಸಕ ಎಸ್.ಅಂಗಾರ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.