ETV Bharat / state

8 ವಿಧಾನಸಭಾ ಕ್ಷೇತ್ರಗಳಿಗೆ ವಿತರಿಸಲು ಶಾಸಕರ ಮೂಲಕ ದಿನಸಿ ಕಿಟ್​ ಹಸ್ತಾಂತರಿಸಿದ ಕಟೀಲ್​! - nalin kumar kateel news

ಮಂಗಳೂರು ನಗರದ ಕದ್ರಿ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ 15 ಸಾವಿರ ಆಹಾರ ಸಾಮಗ್ರಿಗಳ ಕಿಟ್​​ಗಳನ್ನು ಜಿಲ್ಲೆಯ 8 ಶಾಸಕರಿಗೆ ಬಿಜೆಪಿ ರಜ್ಯಾಧ್ಯಕ್ಷ ನಳಿನ್​ ಕುಮಾರ್​ ಕಟೀಲ್​ ವಿತರಣೆ ಮಾಡಿದರು.

author img

By

Published : Apr 26, 2020, 3:59 PM IST

ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್ ಕಟೀಲ್ ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳಿಗೆ ಆಹಾರ ಸಾಮಗ್ರಿಗಳ ಕಿಟ್​ಗಳನ್ನು ಶಾಸಕರ ಮೂಲಕ ಹಸ್ತಾಂತರ ಮಾಡಿದರು.

ನಗರದ ಕದ್ರಿ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ 15 ಸಾವಿರ ಆಹಾರ ಸಾಮಗ್ರಿಗಳ ಕಿಟ್​​ಗಳನ್ನು ವಿತರಣೆ ಮಾಡಿದರು. ಬಳಿಕ ಮಾತನಾಡಿದ ಅವರು, ಬಿಜೆಪಿಯ ಪ್ರತಿಯೊಬ್ಬ ಕಾರ್ಯಕರ್ತನೂ ಐದು ಜನರಿಗೆ ಆಹಾರ ಸಾಮಾಗ್ರಿಗಳ ಕಿಟ್ ವಿತರಣೆ ಮಾಡಬೇಕೆಂದು ರಾಷ್ಟ್ರೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಅವರು ಸೂಚಿಸಿದ್ದರು. ನಮ್ಮ ದ.ಕ ಜಿಲ್ಲೆಯ 8 ಶಾಸಕರು ರಾಜ್ಯದಲ್ಲಿಯೇ ಅತೀ ಹೆಚ್ಚು ಕಿಟ್​ಗಳ ವಿತರಣೆ ಮಾಡಿ ಮಾದರಿಯಾಗಿದ್ದಾರೆ.

ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿಯವರ ನೇತೃತ್ವದಲ್ಲಿ ದ.ಕ ಜಿಲ್ಲೆಯ 16,500 ಮಂದಿ ನಿರಾಶ್ರಿತರಿಗೆ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಲಾಗಿದೆ. ಇದರಲ್ಲಿ ಧಾರ್ಮಿಕ ದತ್ತಿ ಇಲಾಖೆಯಿಂದ 9,500 ಸಾವಿರ ಮಂದಿಗೆ ಹಾಗೂ ಉಳಿದವರಿಗೆ ನಮ್ಮ ವಾರ್ ರೂಂಗಳಿಂದ ಆಹಾರ ವ್ಯವಸ್ಥೆ ಮಾಡಲಾಗುತ್ತಿದೆ.

ಇದೀಗ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೆ 20 ಸಾವಿರ ಆಹಾರ ಪದಾರ್ಥಗಳ ಕಿಟ್​ ವಿತರಣೆ ಮಾಡುವ ಕಾರ್ಯ ಮಾಡಲಾಗುತ್ತಿದೆ. ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೆ 1,500 ಕಿಟ್​ನಂತೆ ವಿತರಣೆ ಮಾಡಲಾಗಿದೆ. ಉಳಿದ ಐದು ಸಾವಿರ ಕಿಟ್​​ಗಳನ್ನು ಮುಂದಿನ ದಿನಗಳಲ್ಲಿ ವಿತರಣೆ ಮಾಡಲಾಗುವುದು ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.