ETV Bharat / state

Viral ಆಡಿಯೋಗೂ ನನಗೂ ಯಾವುದೇ ಸಂಬಂಧವಿಲ್ಲ : ನಳಿನ್ ಕುಮಾರ್ ಕಟೀಲ್

ರಾಜ್ಯ ರಾಜಕಾರಣದಲ್ಲಿ ತಲ್ಲಣ ಸೃಷ್ಟಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರದ್ದು ಎನ್ನಲಾದ ವೈರಲ್ ಆಡಿಯೋದ ಬಗ್ಗೆ ಸ್ವತಃ ನಳಿನ್ ಕುಮಾರ್ ಅವರೇ ಪ್ರತಿಕ್ರಿಯೆ ನೀಡಿದ್ದಾರೆ.

http://10.10.50.85//karnataka/19-July-2021/kn-mng-01-nalin-audio-byte-script-ka10015_19072021084243_1907f_1626664363_521.jpg
ನಳಿನ್ ಕುಮಾರ್ ಕಟೀಲ್
author img

By

Published : Jul 19, 2021, 9:16 AM IST

ಮಂಗಳೂರು: ವೈರಲ್ ಆಡಿಯೋಗೂ ನನಗೂ ಯಾವುದೇ ಸಂಬಂಧವಿಲ್ಲ. ಈ ಬಗ್ಗೆ ಪೂರ್ಣ ತನಿಖೆಯಾಗಬೇಕೆಂದು ಸಿಎಂಗೆ ಪತ್ರ ಬರೆಯುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ನಿನ್ನೆಯಿಂದ ವೈರಲ್ ಆಗುತ್ತಿರುವ ನಳಿನ್ ಕುಮಾರ್ ಅವರದ್ದು ಎನ್ನಲಾದ ಆಡಿಯೋದ ಬಗ್ಗೆ ಪ್ರತಿಕ್ರಿಯಿಸಿದ ಅವರು, ತನಿಖೆಯಿಂದ ಸತ್ಯಾಸತ್ಯತೆ ಹೊರ ಬರಲಿ. ನಮ್ಮಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳೇ ಇಲ್ಲ. ಹಾಗಾಗಿ, ಈ ವಿಷಯ ಅಪ್ರಸ್ತುತ ಎಂದರು.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್

ಯಡಿಯೂರಪ್ಪ ನಮ್ಮ ಪಕ್ಷದ ಆತ್ಮ ಹಾಗೂ ಸರ್ವ ಸಮ್ಮತಿಯ ನಾಯಕ. ಈಶ್ವರಪ್ಪ ಹಾಗೂ ಜಗದೀಶ್ ಶೆಟ್ಟರ್ ಮುಂತಾದ ಹಿರಿಯ ನಾಯಕರ ಮಾರ್ಗದರ್ಶನದಲ್ಲಿ ನಮ್ಮ ಪಕ್ಷದ ಸರ್ಕಾರ ನಡೆಯುತ್ತಿದೆ ಎಂದು ಹೇಳಿದರು.

ಓದಿ : ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ: ನಳಿನ್ ಕುಮಾರ್‌ ಕಟೀಲ್​ ಸ್ಫೋಟಕ ಆಡಿಯೋ ವೈರಲ್..?!

ಆಡಿಯೋ ಬಗ್ಗೆ ತನಿಖೆಯಾಗದೇ ಯಾರ ಮೇಲೂ ಸಂಶಯ ವ್ಯಕ್ತಪಡಿಸಲು ಆಗುವುದಿಲ್ಲ. ತನಿಖೆ ಮೂಲಕ ಸತ್ಯ ಹೊರ ಬರಲಿ, ಬಳಿಕ ಎಲ್ಲದಕ್ಕೂ ಉತ್ತರ ನೀಡುತ್ತೇನೆ. ಸಂಸತ್ ಅಧಿವೇಶನದಲ್ಲಿ ಪಾಲ್ಗೊಳ್ಳಲು ಇಂದು ದೆಹಲಿಗೆ ಹೋಗುತ್ತಿದ್ದೇನೆ‌. ನ್ಯಾಯಾಲಯದ ಮೊರೆ ಹೋಗುವ ಬಗ್ಗೆ ಚಿಂತನೆ ನಡೆಸುತ್ತಿದ್ದೇನೆ ಎಂದು ನಳಿನ್ ಕುಮಾರ್ ಕಟೀಲ್ ಇದೇ ವೇಳೆ,ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.