ETV Bharat / state

ರಸ್ತೆ, ಚರಂಡಿ ಸಣ್ಣಪುಟ್ಟ ವಿಷಯ ಬಿಟ್ಟು ಲವ್ ಜಿಹಾದ್ ವಿರುದ್ಧ ಹೋರಾಡಿ: ಕಾರ್ಯಕರ್ತರಿಗೆ ಕಟೀಲ್ ಕರೆ

ಮಂಗಳೂರಿನ ಬೂತ್ ವಿಜಯ ಅಭಿಯಾನದಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಲವ್ ಜಿಹಾದ್ ವಿಷಯದ ವಿರುದ್ಧ ಹೋರಾಡಬೇಕೇ ಹೊರತು ರಸ್ತೆ ಮತ್ತು ಚರಂಡಿ ಸಮಸ್ಯೆಗಳ ಬಗ್ಗೆ ಅಲ್ಲ ಎಂದು ಕಾರ್ಯಕರ್ತರಿಗೆ ಸಲಹೆ ನೀಡಿದ್ದಾರೆ.

nalin kumar kateel
ನಳಿನ್ ಕುಮಾರ್ ಕಟೀಲ್
author img

By

Published : Jan 4, 2023, 8:56 AM IST

Updated : Jan 4, 2023, 12:14 PM IST

ಬೂತ್ ವಿಜಯ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದ ಕಟೀಲ್

ಮಂಗಳೂರು: ನಿನ್ನೆ ನಗರದಲ್ಲಿ ನಡೆದ ಬಿಜೆಪಿಯ ಬೂತ್ ವಿಜಯ ಅಭಿಯಾನದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೀಡಿರುವ ಹೇಳಿಕೆಯೊಂದು ಚರ್ಚೆಗೆ ಕಾರಣವಾಗಿದೆ. 'ರಸ್ತೆ ಕಾಮಗಾರಿ, ಚರಂಡಿ ಅಭಿವೃದ್ಧಿ ಎಂಬ ಸಣ್ಣ ವಿಷಯದ ಬಗ್ಗೆ ಮಾತನಾಡಬೇಡಿ, ನಿಮ್ಮ ಮಕ್ಕಳ ಬದುಕಿನ ಪ್ರಶ್ನೆಯಾಗಿರುವ ಲವ್ ಜಿಹಾದ್ ತಡೆಯಲು ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಬೇಕು' ಎಂದು ಜನರ ಬಳಿ ಚರ್ಚೆಯಲ್ಲಿ ತೊಡಗುವಂತೆ ಕಾರ್ಯಕರ್ತರಿಗೆ ಕಟೀಲ್ ಕರೆ ಕೊಟ್ಟಿದ್ದಾರೆ.

ಬೂತ್ ವಿಜಯ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಪಿಎಫ್ಐ (ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ) ನಿಷೇಧ ಆಗದಿದ್ದರೆ ಬಿಜೆಪಿ ನಾಯಕರು ಬದುಕುಳಿಯುತ್ತಿರಲಿಲ್ಲ. ಅವರ ಫೋಟೋಗಳಿಗೆ ಹಾರ ಹಾಕಬೇಕಿತ್ತು. ಪಿಎಫ್ಐ ಹಾಗೂ ಕೆಎಫ್​ಡಿ ನಿಷೇಧದ ಮೂಲಕ ರಾಷ್ಟ್ರಭಕ್ತರಿಗೆ ಒಳಿತಾಯಿತು. ಇದನ್ನು ಅಮಿತ್ ಶಾ ಹಾಗೂ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಮಾಡಿದೆ. ಇಲ್ಲದಿದ್ದರೆ ಹಿಂದೂಗಳ ಸರಣಿ ಹತ್ಯೆಗಳು ನಡೆಯುತ್ತಿತ್ತು ಎಂದರು.

2014 ರಿಂದ ದೇಶದಲ್ಲಿ ಬಾಂಬ್ ಬ್ಲಾಸ್ಟ್ ಸಂಭವಿಸಿಲ್ಲ. ಅದಕ್ಕೆ ಒಂದೇ ಉತ್ತರ, ದೇಶದಲ್ಲಿ ಅಮಿತ್ ಶಾ ಮತ್ತು ಕರ್ನಾಟಕದಲ್ಲಿ ಬಸವರಾಜ ಬೊಮ್ಮಾಯಿ ಸರ್ಕಾರ ಎಂದರು. ಈ ಮೂಲಕ ಗೋಹತ್ಯೆ ನಿಷೇಧಿಸಿದ ಬಿಜೆಪಿ ಸರ್ಕಾರ ಲವ್ ಜಿಹಾದ್ ಕುರಿತಂತೆಯೂ ಕಾನೂನು ತರಲಿದೆ ಎಂದು ಹೇಳಿದರು.

ಇದನ್ನೂ ಓದಿ: ಮುಂದಿನ ಚುನಾವಣೆಗೂ ಮುಂಚೆ ಸಿದ್ದರಾಮಯ್ಯ ಜೈಲಿಗೆ ಹೋಗಲಿದ್ದಾರೆ: ನಳಿನ್​ ಕುಮಾರ್​ ಕಟೀಲ್

ನಾಳೆಯ ನಮ್ಮ ಬದುಕು ಬಿಜೆಪಿ ಕೈಯಲ್ಲಿದೆ. ಡಿ.ಕೆ.ಶಿವಕುಮಾರ್​ ಮುಖ್ಯಮಂತ್ರಿ ಆದರೆ ಭಯೋತ್ಪಾದಕರು ಬೀದಿಗೆ ಬರುತ್ತಾರೆ. ಕುಕ್ಕರ್ ಬಾಂಬ್ ಬ್ಲಾಸ್ಟ್ ಆದವರನ್ನು ಬಿಡುತ್ತೇವೆ, ಪಿಎಫ್​ಐ ಕೆಎಫ್​ಡಿ ನಿಷೇಧ ವಾಪಸ್​ ತೆಗೆದುಕೊಳ್ಳುತ್ತೇವೆ ಎಂದು ಅವರು ಹೇಳುತ್ತಿದ್ದಾರೆ ಅಂತಾ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ಕಾಂಗ್ರೆಸ್ ಕಾಲದಲ್ಲಿ ಬಾಂಬ್ ತಯಾರಿಕೆ ಕಾರ್ಖಾನೆಗಳು ಸ್ಥಾಪನೆ : ಬಿಜೆಪಿ ರಾಜ್ಯಾಧ್ಯಕ್ಷ ಕಟೀಲು ಆರೋಪ

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಲವ್ ಜಿಹಾದ್ ಹೆಚ್ಚಾಗಲಿದೆ. ಧಾರ್ಮಿಕ ಮತಾಂತರದ ವಿರುದ್ಧದ ಕಾನೂನುಗಳನ್ನು ಹಿಂಪಡೆಯುತ್ತಾರೆ. ಗೋಹತ್ಯೆ ಮುಂದುವರೆಯಲಿದೆ. ರಾಜ್ಯದ ಜನತೆಗೆ ಈಗ ನವ ಕರ್ನಾಟಕ ಬೇಕೇ ಅಥವಾ ಭಯೋತ್ಪಾದನೆಯ ನಾಡು ಬೇಕೇ ಎಂಬುದನ್ನು ನಿರ್ಧರಿಸಬೇಕಿದೆ ಎಂದು ಬಿಜೆಪಿ ಮತ ಹಾಕಿ, ಮುಂದಿನ ಚುನಾವಣೆಯಲ್ಲಿ ಗೆಲ್ಲಿಸುವಂತೆ ಮನವಿ ಮಾಡಿದರು.

ಇದನ್ನೂ ಓದಿ: ಡಿಕೆಶಿ ಹೇಳಿಕೆ ಭಯೋತ್ಪಾದನಾ ಚಟುವಟಿಕೆಗೆ ಪ್ರೇರಣೆ: ನಳಿನ್ ಕುಮಾರ್ ಕಟೀಲ್

Last Updated : Jan 4, 2023, 12:14 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.