ETV Bharat / state

ಪ್ರಾಕೃತಿಕ ವಿಕೋಪ ನಿರ್ವಹಣೆಗೆ ತಂಡ ಸಿದ್ಧ: ನಳಿನ್ ಕುಮಾರ್ ಕಟೀಲ್ - 7. ಪ್ರಾಕೃತಿಕ ವಿಕೋಪ ನಿರ್ವಹಣೆಗೆ ತಂಡ ಸಿದ್ಧ: ನಳಿನ್ ಕುಮಾರ್ ಕಟೀಲ್

ಮಂಗಳವಾರ ಸಂಜೆ ಪುತ್ತೂರಿನ ಪರ್ಲಡ್ಕ ಗೋಳಿಕಟ್ಟೆ ಎಂಬಲ್ಲಿ ಆವರಣಗೋಡೆ ಜರಿದು ಮೃತಪಟ್ಟ ವಸಂತಿ ಯಾನೆ ಶೋಭಾ ಅವರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

nalin kumar kateel
ನಳಿನ್ ಕುಮಾರ್ ಕಟೀಲ್
author img

By

Published : Jul 8, 2020, 12:07 AM IST

ಪುತ್ತೂರು: ಪ್ರತಿ ವರ್ಷವೂ ಮಳೆಗಾಲದಲ್ಲಿ ಪ್ರಾಕೃತಿಕ ವಿಕೋಪದಿಂದ ಹಾನಿಗಳು ಸಂಭವಿಸುತ್ತಿರುವುದು ಸಾಮಾನ್ಯವಾಗಿದ್ದು, ಇದನ್ನು ಸಮರ್ಪಕವಾಗಿ ನಿರ್ವಹಿಸಲು ಜಿಲ್ಲೆಯಲ್ಲಿ ತಂಡ ಸಿದ್ಧವಾಗಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

ಪ್ರಾಕೃತಿಕ ವಿಕೋಪ ನಿರ್ವಹಣೆಗೆ ತಂಡ ಸಿದ್ಧ: ನಳಿನ್ ಕುಮಾರ್ ಕಟೀಲ್

ಪ್ರಾಕೃತಿಕ ವಿಕೋಪವನ್ನು ಎದುರಿಸುವ ನಿಟ್ಟಿನಲ್ಲಿ ಈಗಾಗಲೇ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ 2 ಸಭೆಗಳನ್ನು ಜಿಲ್ಲಾ ಮಟ್ಟದಲ್ಲಿ ನಡೆಸಲಾಗಿದೆ. ಎಲ್ಲಾ ಅಧಿಕಾರಿಗಳಿಗೂ ಅಲರ್ಟ್‌ ಆಗಿರುವಂತೆ ಸೂಚನೆ ನೀಡಲಾಗಿದೆ. ಗ್ರಾಮ ಮಟ್ಟದಲ್ಲಿ ಘಟನೆಗಳು ನಡೆದಾಗ ಸ್ಥಳೀಯ ಗ್ರಾಮ ಕರಣಿಕರು ತಹಸೀಲ್ದಾರ್ ಮತ್ತು ಉಪವಿಭಾಗಾಧಿಕಾರಿಗಳಿಗೆ ಮಾಹಿತಿ ನೀಡಬೇಕು ಎಂದು ತಿಳಿಸಲಾಗಿದ್ದು, ಸೂಕ್ತ ನಿರ್ವಹಣೆಗಾಗಿ ತಂಡವನ್ನು ರಚನೆ ಮಾಡಲಾಗಿದೆ. ಈ ತಂಡ ಎಲ್ಲವನ್ನೂ ನಿಭಾಯಿಸಲು ಸಿದ್ಧವಿದೆ ಎಂದರು.

ಗೋಡೆ ಕುಸಿತ ದುರಂತದಲ್ಲಿ ಮೃತಪಟ್ಟ ವಸಂತಿ ಅವರ ಕುಟುಂಬಕ್ಕೆ ಸರ್ಕಾರವು ರೂ. 5 ಲಕ್ಷ ಪರಿಹಾರವನ್ನು ತಕ್ಷಣವೇ ನೀಡಲಿದ್ದು, ಈ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗಿದೆ. ಕುಟುಂಬಕ್ಕೆ ಪರಿಹಾರವನ್ನು ಉಸ್ತುವಾರಿ ಸಚಿವರ ಮೂಲಕ ಶೀಘ್ರವಾಗಿ ನೀಡಲಾಗುವುದು. ಅಲ್ಲದೆ ಅಪಾಯದಲ್ಲಿರುವ ಮೇಲ್ಬಾಗದ ಮನೆಯವರನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಈ ಸಂದರ್ಭದಲ್ಲಿ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಜಿ.ಪಂ.ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಶಾಸಕ ಸಂಜೀವ ಮಠಂದೂರು ಉಪಸ್ಥಿತರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.