ETV Bharat / state

ರಾಷ್ಟ್ರೀಯ ವಾಲಿಬಾಲ್ ಆಟಗಾರ್ತಿ (24) ಹೃದಯಾಘಾತದಿಂದ ಸಾವು - ರಾಷ್ಟ್ರೀಯ ವಾಲಿಬಾಲ್ ಆಟಗಾರ್ತಿ ಸಾಲಿಯತ್

ರಾಷ್ಟ್ರೀಯ ವಾಲಿಬಾಲ್ ಆಟಗಾರ್ತಿ ಸಾಲಿಯತ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

Saliyat is a national volleyball player
ರಾಷ್ಟ್ರೀಯ ವಾಲಿಬಾಲ್ ಆಟಗಾರ್ತಿ ಸಾಲಿಯತ್
author img

By

Published : May 31, 2023, 1:18 PM IST

ಬೆಳ್ತಂಗಡಿ: ಉಜಿರೆ ಎಸ್‌ಡಿಎಂ ಕಾಲೇಜಿನ ಹಳೇ ವಿದ್ಯಾರ್ಥಿನಿ ಹಾಗೂ ರಾಷ್ಟ್ರೀಯ ವಾಲಿಬಾಲ್ ತಂಡದ ಆಟಗಾರ್ತಿ ಸಾಲಿಯತ್ (24) ಹೃದಯಾಘಾತದಿಂದ ಬುಧವಾರ ಕೊನೆಯುಸಿರೆಳೆದಿದ್ದಾರೆ. ಇವರು ಪಡಂಗಡಿ ಪೊಯ್ಯೆಗುಡ್ಡೆ ನಿವಾಸಿ. ವಿವಾಹವಾಗಿ ಒಂದು ವರ್ಷವಾಗಿತ್ತು. ಚಿಕ್ಕಮಗಳೂರಿನ ಪತಿಯ ಮನೆಯಲ್ಲಿ ವಾಸವಿದ್ದರು. ಹೃದ್ರೋಗ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಮೃತಪಟ್ಟಿದ್ದು, ವೈದ್ಯರು ಹೃದಯಾಘಾತ ಎಂದು ದೃಢಪಡಿಸಿದ್ದಾರೆ. ತಂದೆ, ತಾಯಿ, ಪತಿಯನ್ನು ಅಗಲಿದ್ದಾರೆ.

ರಾಷ್ಟ್ರಮಟ್ಟದ ಆಟಗಾರ್ತಿ: ಪಡಂಗಡಿಯಲ್ಲಿ ಪ್ರಾಥಮಿಕ, ಎಸ್.ಡಿ.ಎಂ. ಅನುದಾನಿತ ಪ್ರೌಢಶಾಲೆ ಉಜಿರೆಯಲ್ಲಿ 9 ನೇ ತರಗತಿ, ಮುಂಡಾಜೆಯಲ್ಲಿ 10 ನೇ ತರಗತಿ ಶಿಕ್ಷಣ ಪೂರ್ಣಗೊಳಿಸಿ, ಉಜಿರೆ ಎಸ್.ಡಿ.ಎಂ.ನಲ್ಲಿ ಪದವಿ ಪೂರ್ವ ಹಾಗೂ ಪದವಿ ಶಿಕ್ಷಣ ಪಡೆಯುತ್ತಿರುವಾಗ ಕ್ರೀಡಾ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದ್ದಾರೆ. ಹೈದರ್ ಪಡಂಗಡಿ ಅವರ ಗರಡಿಯಲ್ಲಿ ಆರಂಭದ ತರಬೇತಿ ಪಡೆದ ಇವರು ಮುಂದೆ ಪ್ರೌಢ ಶಿಕ್ಷಣವನ್ನು ಮುಂಡಾಜೆ ಶಿಕ್ಷಣ ಸಂಸ್ಥೆಯಲ್ಲಿ ಪಡೆದು, ಇದೇ ಸಂದರ್ಭದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾದ ಗುಣಪಾಲ್ ಎಂ.ಎಸ್. ಅವರ ಗರಡಿಯಲ್ಲಿ ವಾಲಿಬಾಲ್ ಆಟದಲ್ಲಿ ಉತ್ತಮ ಪಟುವಾಗಿ ಬೆಳೆದರು.

ಉತ್ತರ ಪ್ರದೇಶದ ಅಲಹಾಬಾದ್‌ನಲ್ಲಿ ನಡೆದ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಉತ್ಕೃಷ್ಟ ಪ್ರದರ್ಶನ ನೀಡಿ ಕರ್ನಾಟಕ ರಾಜ್ಯ ತಂಡಕ್ಕೆ ದ್ವಿತೀಯ ಸ್ಥಾನ ತಂದುಕೊಟ್ಟಿದ್ದರು. ಪದವಿ ಪೂರ್ವ ಹಾಗೂ ಪದವಿ ಶಿಕ್ಷಣವನ್ನು ಎಸ್‌ಡಿಎಂ ಕಾಲೇಜು ಉಜಿರೆಯಲ್ಲಿ ಪಡೆದು ಇಲ್ಲಿಯೂ ಕರ್ನಾಟಕ ರಾಜ್ಯಕ್ಕೆ ಬಹುಬೇಡಿಕೆಯ ವಾಲಿಬಾಲ್ ಆಟಗಾರ್ತಿಯಾಗಿ ಜನಮನ್ನಣೆ ಗಳಿಸಿದ್ದರು. ಸಾಧನೆಯ ಹಿಂದೆ ತರಬೇತುದಾರರಾದ ಉಜಿರೆ ಎಸ್.ಡಿ.ಎಂ. ದೈಹಿಕ ಶಿಕ್ಷಣ ನಿರ್ದೇಶಕ ರಮೇಶ್ ಶ್ರಮವಿದೆ.

ವಾಲಿಬಾಲ್‌ನಲ್ಲಿ ಬೆಳ್ಳಿ ಪದಕ, ಸೀನಿಯರ್ ನ್ಯಾಷನಲ್ ದಕ್ಷಿಣ ವಲಯದಲ್ಲಿ ಚಿನ್ನದ ಪದಕ, ಜ್ಯೂನಿಯರ್ ನ್ಯಾಷನಲ್‌ನಲ್ಲಿ ತೃತೀಯ ಸ್ಥಾನಗಳಿಸಿದ್ದಾರೆ. ಧರ್ಮಸ್ಥಳ ಧರ್ಮಾಧಿಕಾರಿ, ಎಸ್ ಡಿ ಎಂ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಆಟಗಾರ್ತಿಯನ್ನು ಪ್ರಶಂಸಿಸಿ ಗೌರವಿಸಿದ್ದರು.

ಬಸ್​ ಚಾಲಕನಿಗೆ ಹೃದಯಘಾತ, ತಪ್ಪಿದ ದೊಡ್ಡ ಅನಾಹುತ: ಸಾರಿಗೆ ಬಸ್ ಚಾಲನೆ ಮಾಡುತ್ತಿದ್ದ ಚಾಲಕರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಜಿಲ್ಲೆಯ ಸಿಂದಗಿ ನಗರದಲ್ಲಿ ಮಂಗಳವಾರ ರಾತ್ರಿ‌ ನಡೆದಿದೆ. ಇದರಿಂದ ನಿಯಂತ್ರಣ ಕಳೆದುಕೊಂಡ ಬಸ್​ ನೇರವಾಗಿ ರಸ್ತೆ ಪಕ್ಕದ ಪೆಟ್ರೋಲ್​ ಬಂಕ್​ಗೆ ನುಗ್ಗಿದೆ. ಆದರೆ ನಿರ್ವಾಹಕನ ಸಮಯ ಪ್ರಜ್ಞೆಯಿಂದ ದೊಡ್ಡ ಅನಾಹುತ ತಪ್ಪಿದೆ.

ಮುರಿಗೆಪ್ಪ ಅಥಣಿ ಹಠಾತ್​ ಹೃದಯಾಘಾತದಿಂದ ಸಾವನ್ನಪ್ಪಿದ ಚಾಲಕ. ಕಲಬುರಗಿ ಜಿಲ್ಲೆಯ ಅಫಜಲಪುರದಿಂದ ವಿಜಯಪುರಕ್ಕೆ ಬಸ್​ ಹೊರಟಿತ್ತು. ಆದರೆ, ಬಸ್​ನ ಹೆಡ್‌​ ಲೈಟ್​ ಸಮಸ್ಯೆಯಿಂದ ಪ್ರಯಾಣಿಕರನ್ನು ಕೆಳಗಿಳಿಸಿ ಸಿಂದಗಿ ಡಿಪೋಗೆ ತೆಗೆದುಕೊಂಡು ಹೋಗಲಾಗುತ್ತಿತ್ತು. ಇದರ ನಡುವೆ ಏಕಾಏಕಿ ಚಾಲಕ ಮುರಿಗೆಪ್ಪಗೆ ಎದೆನೋವು ಕಾಣಿಸಿಕೊಂಡಿದೆ. ಪರಿಣಾಮ ಸೀಟಿನ ಮೇಲೆ ಕುಸಿದು ಪ್ರಾಣ ಕಳೆದುಕೊಂಡಿದ್ದಾರೆ.

ಇದರಿಂದ ಬಸ್​ ನಿಯಂತ್ರಣ ಕಳೆದುಕೊಂಡು ರಸ್ತೆ ಪಕ್ಕದ ಪೆಟ್ರೋಲ್​ ಬಂಕ್​ ಒಳಗೆ ನುಗ್ಗಿ ಬಂದಿದೆ. ಆಗ ಬಸ್​ ನಿರ್ವಾಹಕ ಶರಣು ಟಾಕಳಿ ತಕ್ಷಣ ಬ್ರೇಕ್​ ಹಾಕಿ ನಿಲ್ಲಿಸಿದ್ದಾರೆ. ಹೀಗಾಗಿ ಎರಡು ರೀತಿಯಲ್ಲಿ ದೊಡ್ಡ ಅಪಾಯ ತಪ್ಪಿದೆ. ಬಸ್​ನಲ್ಲಿದ್ದ ಪ್ರಯಾಣಿಕರನ್ನು ಮೊದಲೇ ಕೆಳಗಡೆ ಇಳಿಸಿದ್ದು, ಪೆಟ್ರೋಲ್​ ಬಂಕ್​ಗೆ ನುಗ್ಗಿದ ಕ್ಷಣವೇ ಬಸ್ ನಿಲ್ಲಿಸಲಾಗಿದೆ. ಇದರ ದೃಶ್ಯಗಳು ಬಂಕ್​ಗಳಲ್ಲಿ ಅಳವಡಿಸಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿವೆ.

ಇದನ್ನೂಓದಿ:ಕಾಸರಗೋಡಿನಲ್ಲಿ ಅಪಾರ ಪ್ರಮಾಣದ ಸ್ಫೋಟಕ ವಶ.. ಒಬ್ಬ ಆರೋಪಿ ಬಂಧನ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.