ETV Bharat / state

ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ನವರಾತ್ರಿ ಮಹೋತ್ಸವಕ್ಕೆ ಅದ್ಧೂರಿ ಚಾಲನೆ - ಮಂಗಳೂರಿನ ಗೋಕರ್ಣನಾಥ ಕ್ಷೇತ್ರದಲ್ಲಿ ನವರಾತ್ರಿ ಉತ್ಸವ

ಮಂಗಳೂರಿನ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಸಂಭ್ರಮದ ನವರಾತ್ರಿ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ದೊರಕಿದೆ. ದೇಗುಲದಲ್ಲಿ ನವದುರ್ಗಿಯರ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಲಾಗಿದೆ.

Kudroli Gokarnath temple in Mangalore
ಕುದ್ರೋಳಿ ಗೋಕರ್ಣನಾಥ ಕ್ಷೇತ್ರ
author img

By

Published : Oct 7, 2021, 3:38 PM IST

ಮಂಗಳೂರು: ನಗರದ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಸಂಭ್ರಮದ ನವರಾತ್ರಿ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ದೊರಕಿದೆ. ನಾಡಿನೆಲ್ಲೆಡೆ ನವರಾತ್ರಿ ಉತ್ಸವದ ಮೆರಗು ತುಂಬಿದ್ದು, ಮಂಗಳೂರಿನ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ನವದುರ್ಗೆಯರ ಮೂರ್ತಿಗಳ ಪ್ರತಿಷ್ಠಾಪನೆ ಮಾಡಲಾಗಿದೆ. ಇಂದಿನಿಂದ ಅ.16ರವರೆಗೆ 'ನಮ್ಮ ದಸರಾ - ನಮ್ಮ ಸುರಕ್ಷೆ' ಎಂಬ ಘೋಷವಾಕ್ಯದಡಿ ‌ನವರಾತ್ರಿ ಮಹೋತ್ಸವ ಹಾಗೂ ಮಂಗಳೂರು ದಸರಾ ಮಹೋತ್ಸವ ನಡೆಯಲಿದೆ.

ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ನವರಾತ್ರಿ ಮಹೋತ್ಸವಕ್ಕೆ ಅದ್ಧೂರಿ ಚಾಲನೆ

ಅ.16 ರಂದು ಸಂಜೆ ಪೂಜೆ ಸಂಪನ್ನಗೊಂಡು ರಾತ್ರಿ ವೇಳೆಗೆ ದೇವಳಕ್ಕೆ ಒಂದು ಸುತ್ತು ಬಂದು ಶ್ರೀ ಶಾರದಾ ಮಾತೆ, ಶ್ರೀಮಹಾಗಣಪತಿ ದೇವರ ಸಹಿತ ನವದುರ್ಗೆಯರ ಮೂರ್ತಿಯನ್ನು ದೇವಳದ ಕಲ್ಯಾಣಿಯಲ್ಲಿ ಜಲಸ್ತಂಭನ ಮಾಡಲಾಗುತ್ತದೆ.

ವಿದ್ಯುತ್​​ ದೀಪಗಳಿಂದ ಕಂಗೊಳಿಸುತ್ತಿವೆ ರಾಜಬೀದಿಗಳು:

ದಸರಾ ಹಿನ್ನೆಲೆಯಲ್ಲಿ ಮಂಗಳೂರಿನ ರಾಜಬೀದಿಗಳು ವಿದ್ಯುತ್ ದೀಪಳಿಂದ ಸಿಂಗಾರಗೊಂಡಿದೆ. ಅದೇ ರೀತಿ, ಶ್ರೀಕ್ಷೇತ್ರ ಕುದ್ರೋಳಿ ದೇವಳದಲ್ಲಿ ಕೊರೊನಾ ಲಸಿಕೆ ನೀಡುವ ವ್ಯವಸ್ಥೆಯನ್ನು ಮಾಡಲಾಗಿದ್ದು, ಭಕ್ತರು ಇದರ ಸದುಪಯೋಗ ಪಡೆದುಕೊಳ್ಳಬಹುದು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.