ETV Bharat / state

ವಾರದೊಳಗೆ ನೆರೆ ಪರಿಹಾರ ಕೇಂದ್ರದಿಂದ ಬರುತ್ತೆ.. ಗೃಹ ಸಚಿವ ಬೊಮ್ಮಾಯಿ ಭರವಸೆ - ಕೇಂದ್ರ ಗೃಹ ಸಚಿವ

ಕೇಂದ್ರ ಗೃಹ ಸಚಿವರಿಗೆ ರಾಜ್ಯದ ನೆರೆ ಹಾವಳಿ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಾಗಿದ್ದು, ಇನ್ನೂ ಒಂದು ವಾರದೊಳಗಾಗಿ ನೆರೆ ಪರಿಹಾರದ ಹಣ ಘೋಷಣೆ ಮಾಡಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಗೃಹ ಸಚಿವ ಬಸವರಾಜ ಬೊಮ್ಮಾಯಿ
author img

By

Published : Sep 27, 2019, 2:26 PM IST

ಮಂಗಳೂರು:ಸಿಎಂ ಯಡಿಯೂರಪ್ಪನವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಈಗಾಗಲೇ ಭೇಟಿಯಾಗಿ ಪ್ರವಾಹಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಒಂದು ವಾರದೊಳಗಾಗಿ ನೆರೆ ಪರಿಹಾರವನ್ನು ಕೇಂದ್ರದಿಂದ ಪ್ರಕಟಿಸಲಾಗುತ್ತೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಗೃಹ ಸಚಿವ ಬಸವರಾಜ ಬೊಮ್ಮಾಯಿ

ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಅವರು, ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಆರ್ಥಿಕ ಇಲಾಖೆಯ ನಿರ್ಣಯ ಅಂತಿಮಗೊಂಡಿದ್ದು, ಒಂದು ವಾರದೊಳಗೆ ಎಲ್ಲವೂ ಇತ್ಯರ್ಥವಾಗಲಿದೆ. ಉಪ ಚುನಾವಣೆ ರದ್ದಾಗಿರುವುದು ಸುಪ್ರೀಂಕೋರ್ಟ್​ ತೀರ್ಪು ಎಂದು ಮಾಧ್ಯಮದವರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Intro:ಮಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪನವರು ಎನ್ ಡಿಆರ್ ಎಫ್ ಮುಖ್ಯಸ್ಥರಾದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರನ್ನು ಈಗಾಗಲೇ ಭೇಟಿಯಾಗಿದ್ದಾರೆ. ಅವರು ಪ್ರವಾಹ ಸಂಬಧಿ ಎಲ್ಲಾ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದು, ಆದಷ್ಟು ಬೇಗ ಪ್ರವಾಹ ಪರಿಹಾರಕ್ಕೆ ಹಣ ಬಿಡುಗಡೆ ಮಾಡುವುದಾಗಿ ಅಮಿತ್ ಷಾ ಘೋಷಣೆ ಮಾಡಿದ್ದಾರೆ. ಇದಕ್ಕಾಗಿ ಪ್ರಕ್ರಿಯೆ ಈಗಾಗಲೇ ಪ್ರಾರಂಭ ಆಗಿದ್ದು, ಸಭೆ ನಡೆಸಿದ ಬಳಿಕ ಹಣ ಬಿಡುಗಡೆ ಆಗುತ್ತದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಅವರು ಉಡುಪಿಗೆ ಭೇಟಿ ನೀಡುವ ಮೊದಲು ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಔರಾದ್ಕರ್ ವರದಿಯಲ್ಲಿ ಎರಡು ಹಂತದಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಮೊದಲನೆಯದು ಕಾನ್ ಸ್ಟೇಬಲ್ ಗಳಿಗೆ ಅನುಕೂಲ ಆಗುತ್ತದೆ. ಕಳೆದ ಎರಡು ಕ್ಯಾಬಿನೆಟ್ ಸಭೆಗಳ ಹಿಂದೆ ಕಾನ್ ಸ್ಟೇಬಲ್ ಗಳಿಗೂ ಅನುಕೂಲ ಆಗುವ ರೀತಿಯಲ್ಲಿ ತೀರ್ಮಾನ ಕೈಗೊಂಡಿದ್ದೆವು. ಆರ್ಥಿಕ ಇಲಾಖೆಯ ನಿರ್ಣಯ ಅಂತಿಮಗೊಂಡಿದ್ದು, ಒಂದು ವಾರದೊಳಗೆ ಇದರ ತೀರ್ಮಾನ ವನ್ನು ಪ್ರಕಟ ಮಾಡಲಾಗುತ್ತದೆ ಎಂದು ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

Body:ಉಪ ಚುನಾವಣೆ ರದ್ದಾಗಿರೋದು ಕಾಂಗ್ರೆಸ್ ಹಾಗೂ ಜೆಡಿಎಸ್ ನಿಂದ ಎಂಬ ಮಾತುಗಳು ಕೇಳಿ ಬರುತ್ತಿವೆ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಬಸವರಾಜ ಬೊಮ್ಮಾಯಿಯವರು, ಅದು ಸುಪ್ರೀಂ ಕೋರ್ಟ್ ನಿರ್ಧಾರ ಎಂದು ಹೇಳಿದರು.

Reporter_Vishwanath Panjimogaru

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.