ETV Bharat / state

WANTED! ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗಳ ಪತ್ತೆಗೆ ನಗದು ಬಹುಮಾನ ಘೋಷಿಸಿದ NIA - ರಾಷ್ಟ್ರೀಯ ತನಿಖಾ ಸಂಸ್ಥೆ

ಪ್ರವೀಣ್‌ ನೆಟ್ಟಾರು ಹತ್ಯೆಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ನಾಲ್ವರ ಬಗ್ಗೆ ಮಾಹಿತಿ ನೀಡುವ ಮೂಲಕ ಅವರ ಪತ್ತೆಗೆ ನೆರವಾಗುವವರಿಗೆ ಬಹುಮಾನ ನೀಡುವುದಾಗಿ ಎನ್​ಐಎ ಘೋಷಣೆ ಮಾಡಿದೆ.

nia-announces-reward-to-information-on-praveen-nettaru-murder-accused
ಪ್ರವೀಣ್ ನೆಟ್ಟಾರು ಕೊಲೆ: ಆರೋಪಿಗಳ ಪತ್ತೆಗೆ ಬಹುಮಾನ ಘೋಷಿಸಿದ ಎನ್‌ಐಎ
author img

By

Published : Nov 2, 2022, 7:19 AM IST

ಸುಳ್ಯ(ದಕ್ಷಿಣ ಕನ್ನಡ): ಬೆಳ್ಳಾರೆಯ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಭಾಗಿಯಾಗಿ, ತಲೆಮರೆಸಿಕೊಂಡಿರುವ ನಾಲ್ವರು ಆರೋಪಿಗಳ ಬಗ್ಗೆ ಸುಳಿವು ಕೊಟ್ಟರೆ ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಘೋಷಿಸಿದೆ.

ಕಳೆದ ಜುಲೈ 26ರಂದು ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ದುಷ್ಕರ್ಮಿಗಳು ಪ್ರವೀಣ್ ನೆಟ್ಟಾರು ಅವರನ್ನು ಕೊಲೆ ಮಾಡಿ ಪರಾರಿಯಾಗಿದ್ದರು. ಪ್ರಕರಣ ಸಂಬಂಧ ಪೊಲೀಸರು ಸುಮಾರು 10 ಮಂದಿ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಕೊಲೆಗೆ ಪ್ರಮುಖವಾಗಿ ಸಂಚು ರೂಪಿಸಿದ ಹಾಗೂ ಸಹಾಯ ಮಾಡಿದ ಆರೋಪಿಗಳ ಪೈಕಿ ನಾಲ್ವರ ಬಂಧನವಾಗಿಲ್ಲ ಎನ್ನಲಾಗುತ್ತಿದೆ. ನಂತರ ಈ ಪ್ರಕರಣವು ರಾಷ್ಟ್ರೀಯ ತನಿಖಾ ಸಂಸ್ಥೆಗೆ ವರ್ಗಾವಣೆಯಾಗಿತ್ತು.

nia-announces-reward-to-information-on-praveen-nettaru-murder-accused
ಆರೋಪಿಗಳ ಪತ್ತೆಗೆ ಬಹುಮಾನ ಘೋಷಿಸಿದ ಎನ್‌ಐಎ

ಪ್ರಕರಣದ ತನಿಖೆ ನಡೆಸುತ್ತಿರುವ ಎನ್ಐಎ ಅಧಿಕಾರಿಗಳು, ಪ್ರಮುಖ ಆರೋಪಿಗಳಾದ ಬೆಳ್ಳಾರೆಯ ಮಹಮ್ಮದ್ ಮುಸ್ತಾಫಾ ಮತ್ತು ಮಡಿಕೇರಿಯ ತುಫೈಲ್ ಬಗ್ಗೆ ಸುಳಿವು ನೀಡಿದರೆ ತಲಾ 5 ಲಕ್ಷ ರೂ. ಬಹುಮಾನ, ಜೊತೆಗೆ ಕೊಲೆಗೆ ಸಹಕಾರ ನೀಡಿದ ಸುಳ್ಯದ ಉಮ್ಮರ್ ಫಾರೂಕ್ ಹಾಗೂ ಬೆಳ್ಳಾರೆಯ ಅಬೂಬಕ್ಕರ್ ಸಿದ್ದಿಕ್ ‌ಬಗ್ಗೆ ಮಾಹಿತಿ ನೀಡಿದರೆ ತಲಾ 2 ಲಕ್ಷ ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ.

ಆರೋಪಿಗಳ ಬಗ್ಗೆ ಮಾಹಿತಿ ನೀಡಿದವರಿಗೆ ಬಹುಮಾನ ನೀಡುವ ಜೊತೆಗೆ ಮಾಹಿತಿದಾರರ ಹೆಸರನ್ನು ಗೌಪ್ಯವಾಗಿ ಇಡಲಾಗುವುದು ಎಂದೂ ತನಿಖಾ ಸಂಸ್ಥೆ ತಿಳಿಸಿದೆ. ಮಾಹಿತಿದಾರರು info.blr.nia@gov.in ಅಥವಾ ದೂರವಾಣಿ ಸಂಖ್ಯೆ 080-29510900/8904241100 ಅಥವಾ ಪೊಲೀಸ್ ಅಧೀಕ್ಷಕರು, ರಾಷ್ಟ್ರೀಯ ತನಿಖಾ ದಳ (ಎನ್​ಐಎ), 8ನೇ ಮಹಡಿ, ಸರ್. ಎಂ ವಿಶ್ವೇಶ್ವರಯ್ಯ ಕೇಂದ್ರೀಯ ಸದನ, ದೊಮ್ಮಲೂರು, ಬೆಂಗಳೂರು 560071 ಈ ವಿಳಾಸಕ್ಕೆ ಸಂಪರ್ಕಿಸುವಂತೆ ವಿನಂತಿಸಲಾಗಿದೆ.

ಇದನ್ನೂ ಓದಿ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆಲಸಕ್ಕೆ ಹಾಜರಾದ ಪ್ರವೀಣ್ ನೆಟ್ಟಾರು ಪತ್ನಿ ನೂತನ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.