ETV Bharat / state

ಮೋದಿ ಕಾರ್ಯಕ್ರಮದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು: ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ ಎನ್ಐಎ ದಾಳಿ - ಈಟಿವಿ ಭಾರತ ಕನ್ನಡ

ಬಂಟ್ವಾಳ, ಬೆಳ್ತಂಗಡಿ, ಉಪ್ಪಿನಂಗಡಿ ಸೇರಿ ಹಲವೆಡೆ ಎನ್​ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಎನ್ಐಎ ದಾಳಿ
ಎನ್ಐಎ ದಾಳಿ
author img

By

Published : May 31, 2023, 9:22 AM IST

Updated : May 31, 2023, 8:33 PM IST

ಮಂಗಳೂರು: ಕಳೆದ ವರ್ಷ ಬಿಹಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸ್ ಆಧಿಕಾರಿಗಳ ನೆರವು ಪಡೆದು ರಾಷ್ಟ್ರೀಯ ತನಿಖಾ ದಳದ (ಎನ್ಐಎ) ಅಧಿಕಾರಿಗಳು ಇಂದು ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆಗಳಲ್ಲಿ ದಿಢೀರ್ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

  • #WATCH | NIA is conducting raids at about 25 locations in Karnataka, Kerala and Bihar in connection with the Popular Front of India Phulwarisharif case

    (Visuals from Mangaluru, Karnataka) pic.twitter.com/JH4fXl5C72

    — ANI (@ANI) May 31, 2023 " class="align-text-top noRightClick twitterSection" data=" ">

ಭಯೋತ್ಪಾದಕ ಕೃತ್ಯಗಳಿಗೆ ಗಲ್ಫ್ ರಾಷ್ಟ್ರಗಳಿಂದ ಹವಾಲಾ ಹಣ ಬಳಕೆ, ದಕ್ಷಿಣ ಭಾರತದ ಪಿಎಫ್ಐ ಹವಾಲಾ ಹಣ ಜಾಲ, ಭಾರತದಲ್ಲಿ ಭಯೋತ್ಪಾದನೆಗೆ ಫಂಡಿಂಗ್ ಮಾಡುತ್ತಿದ್ದ ಹವಾಲಾ ನೆಟ್ವರ್ಕ್ ಪತ್ತೆ ಕಾರ್ಯ, ಬಿಹಾರದ ಪಾಟ್ನಾದಲ್ಲಿ 2022ರ ಜುಲೈ ತಿಂಗಳಲ್ಲಿನ ಫುಲ್ವಾರಿ ಶರೀಫ್ ಪ್ರಕರಣಗಳೂ ಸೇರಿದಂತೆ ದೇಶದಲ್ಲಿ ಕೋಮು ಗಮಭೆ ಸೃಷ್ಠಿಸಲು ಯತ್ನಿಸಿದ ಆರೋಪಗಳೆಲ್ಲವೂ ಸೇರಿ ವಿವಿಧ ಪ್ರಕರಣಗಳ ತನಿಖೆಯ ಜಾಡು ಹಿಡಿದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತನಿಖೆ ಪ್ರಗತಿಯಲ್ಲಿದೆ.

ಬಂಟ್ವಾಳ, ಬೆಳ್ತಂಗಡಿ, ಉಪ್ಪಿನಂಗಡಿ, ವೇಣೂರು ಸೇರಿ ಹಲವು ಕಡೆಗಳಲ್ಲಿ ಸಾಕಷ್ಟು ಮನೆ, ಕಚೇರಿಗಳು, ಒಂದು ಆಸ್ಪತ್ರೆ ಮೇಲೆ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಇತ್ತೀಚೆಗೆ ಇದೇ ಪ್ರಕರಣಗಳಿಗೆ ಸಂಬಂಧಿಸಿದಂತೆ ಬಂಟ್ವಾಳ ಮತ್ತು ಪುತ್ತೂರಿನಲ್ಲಿ ಶೋಧ ನಡೆದಿತ್ತು. ಬಂಟ್ವಾಳ ನಿವಾಸಿ ಮಹಮ್ಮದ್ ಸಿನಾನ್, ಸಜಿಪ ಮೂಡದ ಸರ್ಫ್ರಾಜ್ ನವಾಜ್, ಇಕ್ಬಾಲ್, ಪುತ್ತೂರಿನ ಅಬ್ದುಲ್ ರಫೀಕ್ ಎಂಬವರನ್ನು ಎನ್ಐಎ ವಶಕ್ಕೆ ಪಡೆದಿತ್ತು. ಅದೇ ರೀತಿ ಕೇರಳದ ಕಾಸರಗೋಡಿನ ಕುಂಜತ್ತೂರು ನಿವಾಸಿ ಅಬೀದ್ ಕೆ.ಎಂ.ಎಂಬಾತನನ್ನು ಬಂಧಿಸಿದ್ದರು.

ಪ್ರಸ್ತುತ ದಾಳಿ ಸಂದರ್ಭದಲ್ಲಿ ಹಲವು ಡಿಜಿಟಲ್ ಸಾಕ್ಷ್ಯಗಳು ಮತ್ತು ಕೋಟ್ಯಂತರ ರೂಪಾಯಿ ವಹಿವಾಟು ನಡೆಸಿದ್ದ ಬಗ್ಗೆ ದಾಖಲೆಗಳನ್ನು ಎನ್ಐಎ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಮಂಗಳೂರು ಅಷ್ಟೇ ಅಲ್ಲ ಕೇರಳದಲ್ಲೂ ಎನ್​​ಐಎ ಅಧಿಕಾರಿಗಳು ಇಂತಹ ಸಂಘಟನೆಗಳ ನೆಲೆಗಳ ಮೇಲೆ ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿವೆ. ಬ್ಯಾನ್​ ಮಾಡಿರುವ ಸಂಘಟನೆಗಳ ಬದಲು ಹೊಸ ಹೆಸರಿನಲ್ಲಿ ಸಂಘಟನೆ ಕೆಲಸ ಮಾಡಲಾಗುತ್ತಿದೆ ಎಂಬ ಶಂಕೆ ಹಿನ್ನೆಲೆಯಲ್ಲಿ ಎನ್​ಐಎ ದೇಶಾದ್ಯಂತ ವಿವಿಧ 51 ಸ್ಥಳಗಳ ಮೇಲೆ ದಾಳಿ ನಡೆಸಿ, ಸಂಘಟನೆಗಳ ಮೂಲಗಳ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ.

ಇದನ್ನೂ ಓದಿ: ಐಸಿಸ್ ಭಯೋತ್ಪಾದನಾ ಚಟುವಟಿಕೆಗಳನ್ನು ನಡೆಸುತ್ತಿದ್ದ ಮೂವರನ್ನು ಬಂಧಿಸಿದ ಎನ್​ಐಎ

Last Updated : May 31, 2023, 8:33 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.