ETV Bharat / state

ಶ್ರೀಲಂಕಾ ಪ್ರಜೆಗಳ ಬಂಧನ ಪ್ರಕರಣ: NIA ತನಿಖೆಗೆ ಗೃಹ ಇಲಾಖೆ ಸೂಚನೆ

author img

By

Published : Jul 24, 2021, 5:44 PM IST

ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಕೆಲವೆಡೆ ಕಳೆದ ತಿಂಗಳು 38 ಶ್ರೀಲಂಕಾ ಪ್ರಜೆಗಳನ್ನು ಮಾನವ ಕಳ್ಳ ಸಾಗಣೆ, ಪಾಸ್ ಪೋರ್ಟ್ ಕಾಯ್ದೆ ವಂಚನೆ, ಅಕ್ರಮ ವಲಸೆ ಆರೋಪದ ಮೇಲೆ ಬಂಧಿಸಲಾಗಿತ್ತು.

ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಹೇಳಿಕೆ

ಮಂಗಳೂರು: ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕಳೆದ ತಿಂಗಳು ಶ್ರೀಲಂಕಾ ಪ್ರಜೆಗಳ ಬಂಧನ ಪ್ರಕರಣ ರಾಷ್ಟ್ರದ ಆಂತರಿಕ ಭದ್ರತೆಗೆ ಸಂಬಂಧಿಸಿರುವ ಹಿನ್ನೆಲೆಯಲ್ಲಿ ಕೇಂದ್ರದ ಗೃಹ ಇಲಾಖೆ, ರಾಷ್ಟ್ರೀಯ ತನಿಖಾ ಸಂಸ್ಥೆ NIA ತನಿಖೆ ನಡೆಸಬೇಕೆಂದು ಆದೇಶಿಸಿದೆ ಎಂದು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಹೇಳಿದರು.

ಅದರ ಹಿನ್ನೆಲೆಯಲ್ಲಿ ಪ್ರಕರಣದ ಕಡತವನ್ನು ಡಿಎಸ್ಪಿ ರ‍್ಯಾಂಕ್ ಅಧಿಕಾರಿ ಬಂದು, ಪ್ರಕರಣವನ್ನು ಸುಪರ್ದಿಗೆ ತೆಗೆದುಕೊಂಡಿದೆ. ಹಾಗೆಯೇ ತನಿಖೆಗೆ ಪೂರಕವಾಗಿ ಸ್ಥಳೀಯವಾಗಿ ಅಗತ್ಯ ಅಧಿಕಾರಿಗಳು, ಸಿಬ್ಬಂದಿ ವಾಹನಗಳು ಹಾಗೂ ಇನ್ನಿತರ ವ್ಯವಸ್ಥೆಗಳನ್ನು ಮಾಡಬೇಕೆಂದು ನಮ್ಮ ಕೇಂದ್ರ ಕಚೇರಿಯಿಂದ ನಿರ್ದೇಶನ ಬಂದಿದೆ. ಆ ಪ್ರಕಾರ NIA ಅಧಿಕಾರಿಗಳು ತನಿಖೆಗೆ ಬಂದಾಗ ಎಲ್ಲ ರೀತಿಯಲ್ಲೂ ಸಹಕಾರ ನೀಡಲಾಗುತ್ತದೆ‌ ಎಂದು ಪೊಲೀಸ್ ಕಮಿಷನರ್ ಹೇಳಿದರು.

ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಕೆಲವೆಡೆಯಲ್ಲಿ ಕಳೆದ ತಿಂಗಳು 38 ಶ್ರೀಲಂಕಾ ಪ್ರಜೆಗಳನ್ನು ಮಾನವ ಕಳ್ಳ ಸಾಗಣೆ, ಪಾಸ್ ಪೋರ್ಟ್ ಕಾಯ್ದೆ ವಂಚನೆ, ಅಕ್ರಮ ವಲಸೆ ಆರೋಪದ ಮೇಲೆ ಬಂಧಿಸಲಾಗಿತ್ತು. ಈ ಬಗ್ಗೆ ಕೇಂದ್ರ ಕಚೇರಿಯಿಂದ ಬಂದಿರುವ ನಿರ್ಧಿಷ್ಟ ಮಾಹಿತಿ ಹಿನ್ನೆಲೆಯಲ್ಲಿ ಅವರ ಬಂಧನವಾಗಿತ್ತು. ಅವರೀಗ ನ್ಯಾಯಾಂಗ‌ ಬಂಧನದಲ್ಲಿದ್ದಾರೆ.

ಇದನ್ನೂ ಓದಿ : "ಪೆಗಾಸಸ್​ನಂತಹ ತಂತ್ರಜ್ಞಾನಗಳಿಂದಾಗಿ ಲಕ್ಷಾಂತರ ಜನರು ರಾತ್ರಿಯಲ್ಲಿ ಚೆನ್ನಾಗಿ ನಿದ್ರಿಸುತ್ತಾರೆ": NSO ಸಮರ್ಥನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.