ETV Bharat / state

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಸುಳ್ಯ, ಪುತ್ತೂರಿನ 32 ಕಡೆಗಳಲ್ಲಿ ಎನ್​ಐಎ ದಾಳಿ - ರಾಷ್ಟ್ರೀಯ ತನಿಖಾ ದಳ

ಇಂದು ಮುಂಜಾನೆ 6 ಗಂಟೆಯ ಸುಮಾರಿಗೆ ಸುಳ್ಯದ ನಾವೂರು ಪರಿಸರಕ್ಕೆ ದಿಢೀರ್ ದಾಳಿ ನಡೆಸಿರುವ ಎನ್ಐಎ ತನಿಖಾ ತಂಡದ ಅಧಿಕಾರಿಗಳು ಘಟನೆಗೆ ಸಂಬಂಧಿಸಿದವರ ಮನೆಗಳಿಗೂ ತೆರಳಿ ವಿಚಾರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

NIA raids in 32 parts of Sulya Puttur
ಸುಳ್ಯ ಪುತ್ತೂರಿನ 32 ಕಡೆಗಳಲ್ಲಿ ಬೆಳ್ಳಂಬೆಳಗೆ ಎನ್​ಐಎ ದಾಳಿ
author img

By

Published : Sep 6, 2022, 9:30 AM IST

ಸುಳ್ಯ (ದಕ್ಷಿಣ ಕನ್ನಡ): ಜುಲೈ 26 ರಂದು ರಾತ್ರಿ ಬೆಳ್ಳಾರೆಯಲ್ಲಿ ನಡೆದ ಬಿಜೆಪಿಯ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಅಧಿಕಾರಿಗಳು ಇಂದು ಬೆಳಗ್ಗೆ ಸುಳ್ಯ ಹಾಗೂ ಪುತ್ತೂರು ತಾಲೂಕಿನ 32 ಕಡೆಗಳಲ್ಲಿ ಮನೆಗಳು ಹಾಗು ಇತರೆ ಕಟ್ಟಡಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾಗಿ ತಿಳಿದು ಬಂದಿದೆ.

ಎನ್ಐಎ ತಂಡ ಪ್ರಸ್ತುತ ಬಂಧನವಾಗಿರುವ ಪ್ರವೀಣ್ ನೆಟ್ಟಾರು ಹತ್ಯೆಯ ಆರೋಪಿಗಳು ಮತ್ತು ಆರೋಪಿಗಳಿಗೆ ಸಹಕಾರ ನೀಡಿದವರ ವಿಚಾರಣೆ ನಡೆಸುತ್ತಿರುವ ಮಾಹಿತಿ ದೊರೆತಿದೆ. ಎನ್ಐಎಗೆ ಕರ್ನಾಟಕ ಪೊಲೀಸರು ಸಹಕಾರ ನೀಡಿದ್ದಾರೆ. ಸುಮಾರು ಐದಕ್ಕೂ ಹೆಚ್ಚು ವಾಹನಗಳಲ್ಲಿ ಬಂದಿರುವ ಅಧಿಕಾರಿಗಳು ತನಿಖಾ ಕಾರ್ಯ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಪ್ರವೀಣ್ ಹತ್ಯೆ ಪ್ರಕರಣದಲ್ಲಿ ಮೂವರು ಪ್ರಮುಖ ಆರೋಪಿಗಳ ಬಂಧನ: ಸಿಎಂ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.