ಮಂಗಳೂರು: ನಗರದ ಗರೋಡಿ ಸಮೀಪ ಶನಿವಾರ ಸಂಜೆ ಆಟೋ ರಿಕ್ಷಾ ಸಂಭವಿಸಿದ ಸ್ಪೋಟ ಪ್ರಕರಣ ಹಿನ್ನೆಲೆಯಲ್ಲಿ ಸ್ಥಳಕ್ಕೆ ನಾಲ್ವರು ಅಧಿಕಾರಿಗಳಿದ್ದ ರಾಷ್ಟ್ರೀಯ ತನಿಖಾ ಸಂಸ್ಥೆಯ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಆಟೋ ರಿಕ್ಷಾ ಸ್ಫೋಟಗೊಂಡ ಸ್ಥಳದಲ್ಲಿ ಪರಿಶೀಲನೆ ನಡೆಸಿದ ತನಿಖಾಧಿಕಾರಿಗಳು, ಬಳಿಕ ಅಲ್ಲೇ ರಸ್ತೆಯ ಮತ್ತೊಂದೆಡೆ ಆಟೋ ಇರಿಸಿದ್ದ ಸ್ಥಳಕ್ಕೆ ತೆರಳಿ ಪರಿಶೀಲಿಸಿದರು. ಸ್ಥಳದಲ್ಲಿ ನಗರ ಪೊಲೀಸರು ಬೀಡು ಬಿಟ್ಟಿದ್ದಾರೆ.
ಇದನ್ನೂ ಓದಿ: ಮಂಗಳೂರು ಆಟೋ ಸ್ಫೋಟ ಪ್ರಕರಣ: ಬಾಂಬ್ ಸ್ಕ್ವಾಡ್, ಶ್ವಾನದಳದಿಂದ ತನಿಖೆ
ಶನಿವಾರ ಸಂಜೆ ಗರೋಡಿ ಬಳಿ ಸಂಚರಿಸುತ್ತಿದ್ದ ರಿಕ್ಷಾದಲ್ಲಿದ್ದ ಪ್ರಯಾಣಿಕನ ಬಳಿಯಿದ್ದ ಬ್ಯಾಗ್ನಲ್ಲಿದ್ದ ಕುಕ್ಕರ್ ಸ್ಪೋಟಗೊಂಡಿದೆ ಎನ್ನಲಾಗಿದೆ. ಘಟನೆಯಲ್ಲಿ ಆಟೋ ಚಾಲಕ ಮತ್ತು ಪ್ರಯಾಣಿಕ ಗಾಯಗೊಂಡಿದ್ದಾರೆ. ಪ್ರಕರಣದ ಬಗ್ಗೆ ಈಗಾಗಲೇ ಡಿಜಿಪಿ ಪ್ರವೀಣ್ ಸೂದ್, ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಪ್ರತಿಕ್ರಿಯಿಸಿ ಇದೊಂದು ಭಯೋತ್ಪಾದಕ ಕೃತ್ಯ ಎಂದು ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ: ಮಂಗಳೂರು ಆಟೋ ರಿಕ್ಷಾ ಸ್ಫೋಟ ಭಯೋತ್ಪಾದಕ ಕೃತ್ಯ: ಡಿಜಿಪಿ ಪ್ರವೀಣ್ ಸೂದ್