ETV Bharat / state

ಅಧಿವೇಶನದ ವೇಳೆ ಸಚಿವರು, ಶಾಸಕರು, ಅಧಿಕಾರಿ ವರ್ಗ ಯಾರೂ ರಜೆ ಕೇಳುವಂತಿಲ್ಲ‌: ಸ್ಪೀಕರ್​​ - No Leave During Session for ministers

ನಾಡಿಗೆ ನಾಡೇ ತಲೆತಗ್ಗಿಸುವಂತಹ ಘಟನೆ ಮೈಸೂರಿನಲ್ಲಿ ‌ನಡೆದಿದೆ. ಈ ಅಮಾನವೀಯ ಘಟನೆಯನ್ನು ನಾವು ಯಾರೂ ನಿರೀಕ್ಷಿಸಿರಲಿಲ್ಲ. ಸರ್ಕಾರ ಈ ಘಟನೆಯನ್ನು ಗಂಭೀರವಾಗಿ ತೆಗೆದುಕೊಂಡಿದೆ ಎಂದು ವಿಧಾನಸಭೆಯ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಪ್ರತಿಕ್ರಿಯಿಸಿದ್ದಾರೆ.

no-leave-during-session-for-ministers-mlas-officers-speaker-kageri
ವಿಧಾನಸಭೆಯ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ
author img

By

Published : Aug 27, 2021, 8:34 PM IST

Updated : Aug 27, 2021, 9:26 PM IST

ಮಂಗಳೂರು: ರಾಜ್ಯ ವಿಧಾನಸಭಾ ಅಧಿವೇಶನವನ್ನು 10 ದಿನಗಳ‌ ಕಾಲ ಯಶಸ್ವಿಯಾಗಿ ನಿರ್ವಹಿಸಬೇಕೆಂಬ ಕಾರಣದಿಂದ ಅಧಿವೇಶನದಲ್ಲಿ ಎಲ್ಲ ಸಚಿವರು, ಶಾಸಕರು, ಅಧಿಕಾರಿ ವರ್ಗದವರು ಕಡ್ಡಾಯವಾಗಿ ಹಾಜರಿರಬೇಕು. ಈ ಅವಧಿಯಲ್ಲಿ ಯಾರೂ ರಜೆ ಕೇಳುವಂತಿಲ್ಲ ಎಂದು ರಾಜ್ಯ ವಿಧಾನಸಭೆಯ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.

ನಗರದ ಸರ್ಕ್ಯೂಟ್ ಹೌಸ್​​ನಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಅವರು, ಆರು ತಿಂಗಳ ಬಳಿಕ ಸೆ.13ರಿಂದ 24ರವರೆಗೆ ರಾಜ್ಯ ವಿಧಾನಸಭಾ ಅಧಿವೇಶನ ನಡೆಸಲು ಆದೇಶಿಸಲಾಗಿದೆ. ಆದ್ದರಿಂದ ಈ ಸಮಯದಲ್ಲಿ ಯಾವುದೇ ಸಚಿವರು, ಶಾಸಕರು ರಜೆ ಕೇಳುವಂತಿಲ್ಲ. ಎಲ್ಲರೂ ಹಾಜರಿರಬೇಕು ಎಂದರು.

ವಿಧಾನಸಭೆಯ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ

ಈ ಬಗ್ಗೆ ಸಿಎಂ ಸೇರಿದಂತೆ ಸಚಿವರು, ಶಾಸಕರಾದಿಯಾಗಿ ಎಲ್ಲರಿಗೂ ಪತ್ರ ಬರೆದಿದ್ದು, ಅದರಂತೆ ಎಲ್ಲರೂ ಕಡ್ಡಾಯವಾಗಿ ಹಾಜರಿರಬೇಕು. ಜೊತೆಗೆ ಅವರವರ ಇಲಾಖೆಯ ಬಿಲ್​ಗಳನ್ನು ಸೆಪ್ಟೆಂಬರ್ 5ರೊಳಗೆ ನಮಗೆ ತಲುಪಿಸಬೇಕು. ಯಾರೂ ಬಿಲ್ ತಡವಾಗಿಯೂ‌ ನೀಡುವಂತಿಲ್ಲ. ಎಲ್ಲರೂ ಈ ವಿಚಾರವನ್ನು ಗಂಭೀರವಾಗಿ ತೆಗೆದುಕೊಂಡು ವಿಧಾನಸಭೆಯ ಅಧಿವೇಶನದಲ್ಲಿ ಕಡ್ಡಾಯವಾಗಿ ಹಾಜರಿರಬೇಕು ಎಂದು ಸಭಾಧ್ಯಕ್ಷರು ಹೇಳಿದರು.

ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಡಿ ಅಗತ್ಯ ಕಾಮಗಾರಿಗಳ ನಿರ್ವಹಿಸಲು ಎಲ್ಲ ಶಾಸಕರು ಸಂಪೂರ್ಣ ಜವಾಬ್ದಾರರಾಗಿರುತ್ತಾರೆ. ರಾಜ್ಯದಲ್ಲಿ ಅಂದಾಜು ಒಟ್ಟು 1 ಸಾವಿರ ಕೋಟಿ ರೂ. ಕಾಮಗಾರಿ ಬಾಕಿ ಉಳಿದಿದ್ದು, ಜಿಲ್ಲಾಧಿಕಾರಿ, ಸಹಾಯಕ ಆಯುಕ್ತರಿಗೆ ಸೇರಿದ ವಿವಿಧ ಖಾತೆಗಳಲ್ಲಿ ಇಷ್ಟು ಹಣ ಬಾಕಿ ಉಳಿದಿದೆ. ಆದ್ದರಿಂದ ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಡಿ ಜಿಲ್ಲೆಯಲ್ಲಿ‌ ಅನುಷ್ಠಾನ ಗೊಳ್ಳುತ್ತಿರುವ ಕಾಮಗಾರಿಗಳನ್ನು ಸಹಾಯಕ ಆಯುಕ್ತರು ಪ್ರತಿ ವಾರ ಪ್ರಗತಿ ಪರಿಶೀಲನೆ ನಡೆಸಿ ಕಾಮಗಾರಿಗಳಿಗೆ ಚುರುಕು ಮುಟ್ಟಿಸಬೇಕು ಎಂದು ಹೇಳಿದರು.

ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಇಡೀ ನಾಡೇ ತಲೆತಗ್ಗಿಸುವಂತಹ ಘಟನೆ ಮೈಸೂರಿನಲ್ಲಿ ‌ನಡೆದಿದೆ. ಈ ಅಮಾನವೀಯ ಘಟನೆಯನ್ನು ನಾವು ಯಾರೂ ನಿರೀಕ್ಷಿಸಿರಲಿಲ್ಲ. ಸರ್ಕಾರ ಈ ಘಟನೆಯನ್ನು ಗಂಭೀರವಾಗಿ ತೆಗೆದುಕೊಂಡಿದ್ದು, ಆ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿದೆ. ಜನರ ಅಪೇಕ್ಷೆಗೆ ತಕ್ಕಂತೆ ಸರ್ಕಾರ ಕಾರ್ಯನಿರ್ವಹಿಸಬಹುದು ಎಂದು ನಾನು ನಂಬಿದ್ದೇನೆ ಎಂದು ಹೇಳಿದರು.

ಇದನ್ನೂ ಓದಿ: Gangrape ಪ್ರಕರಣಕ್ಕೆ ಸಂಬಂಧಿಸಿದಂತೆ ತಾಂತ್ರಿಕ, ವೈಜ್ಞಾನಿಕ ಸಾಕ್ಷ್ಯಗಳು ಸಾಕಷ್ಟಿವೆ: ಡಿಜಿಪಿ ಪ್ರವೀಣ್ ಸೂದ್

Last Updated : Aug 27, 2021, 9:26 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.