ETV Bharat / state

2024ನೇ ಚುನಾವಣೆ ನಂತರ ದೇಶದಲ್ಲಿ 50 ರಾಜ್ಯಗಳ ಉದಯ: ಉಮೇಶ್‌ 'ಕತ್ತಿ' ವರಸೆ - umesh katti statement about north karnataka

ಉತ್ತರ ಕರ್ನಾಟಕಕ್ಕೆ ಅನ್ಯಾಯವಾದಾಗ ಧ್ವನಿ ಎತ್ತಿದ್ದೇನೆ, ಮುಂದೆಯೂ ಎತ್ತುತ್ತೇನೆ. ಆದರೂ ಅಖಂಡ ಕರ್ನಾಟಕದಲ್ಲಿ ತೊಂದರೆ ಆಗಬಾರದು ಅನ್ನೋ ಕಾರಣಕ್ಕೆ ಮುಖ್ಯಮಂತ್ರಿಯನ್ನು ಎಚ್ಚರಿಸುತ್ತೇನೆ. ಅದು ಬಿಟ್ಟರೆ, ನಾವು ಪ್ರತ್ಯೇಕ ರಾಜ್ಯ ಕೇಳುತ್ತಿಲ್ಲ ಎಂದು ಉಮೇಶ್ ಕತ್ತಿ ಹೇಳಿದ್ದಾರೆ.

North Karnataka will be state after Lok Sabha election: Umesh Katti

author img

By

Published : Jun 23, 2022, 6:40 PM IST

Updated : Jun 23, 2022, 7:04 PM IST

ಬೆಳ್ತಂಗಡಿ (ದಕ್ಷಿಣ ಕನ್ನಡ): ಪ್ರಧಾನಿ ನರೇಂದ್ರ ಮೋದಿಯವರು ಮುಂಬರುವ 2024ನೇ ಚುನಾವಣೆಯ ನಂತರ ದೇಶದಲ್ಲಿ 50 ರಾಜ್ಯಗಳನ್ನು ರಚಿಸುವ ಬಗ್ಗೆ ಯೋಚನೆ ಮಾಡಿದ್ದು, ಈ ಬಗ್ಗೆ ಚಿಂತನೆಗಳು ನಡೆಯುತ್ತಿವೆ ಎಂದು ಅರಣ್ಯ ಸಚಿವ ಉಮೇಶ್ ಕತ್ತಿ ಹೇಳಿದರು.

ಬೆಳ್ತಂಗಡಿ ತಾಲೂಕಿನ ಎರ್ಮೋಡಿ ಅರಣ್ಯ ಪ್ರದೇಶದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಕರ್ನಾಟಕ ಅರಣ್ಯ ಇಲಾಖೆ, ಕುಂದಾಪುರ ಪ್ರಾದೇಶಿಕ ಅರಣ್ಯ ವಿಭಾಗ, ವೇಣೂರು ವಲಯ ಇವರ ಸಂಯುಕ್ತ ಆಶ್ರಯದಲ್ಲಿ ರಾಜ್ಯಾದ್ಯಂತ ಸಾಮಾಜಿಕ ಅರಣ್ಯೀಕರಣದ ಅಂಗವಾಗಿ ದಶಲಕ್ಷ ಹಣ್ಣಿನ ಗಿಡಗಳ ನಾಟಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾಧ್ಯಮದೊಂದಿಗೆ ಮಾತನಾಡಿದರು.

ಅರಣ್ಯ ಸಚಿವ ಉಮೇಶ್ ಕತ್ತಿ

2024ರ ಚುನಾವಣೆಯ ನಂತರ ಈ ದೇಶದಲ್ಲಿ 50 ರಾಜ್ಯಗಳು ಉದಯವಾಗಲಿವೆ. ಈ ಬಗ್ಗೆ ಮೋದಿ ಚಿಂತನೆ ನಡೆಸಿದ್ದು, ಸಿದ್ಧತೆ ಕೂಡ ನಡೆಯುತ್ತಿದೆ. ಎರಡೂವರೆ ಕೋಟಿ ಇದ್ದ ಜನಸಂಖ್ಯೆ ರಾಜ್ಯದಲ್ಲಿ ಆರೂವರೆ ಕೋಟಿ ಆಗಿದೆ. ಅಂದರೆ ಇದರ ಅರ್ಥ, ಜನಸಂಖ್ಯೆ ಬೆಳೆದಂತೆ ರಾಜ್ಯವನ್ನು ಇಬ್ಭಾಗ ಮಾಡಬೇಕಿದೆ ಎಂಬುದು. ಕರ್ನಾಟಕದಲ್ಲಿ ಎರಡು, ಉತ್ತರಪ್ರದೇಶದಲ್ಲಿ 4 ರಾಜ್ಯ ಮತ್ತು ಮಹಾರಾಷ್ಟ್ರದಲ್ಲಿ 3 ರಾಜ್ಯ ಹೀಗೆ... ಇಡೀ ದೇಶದಲ್ಲಿ ಒಟ್ಟು 50 ರಾಜ್ಯ ನಿರ್ಮಾಣವಾಗಲಿದೆ. ಈ ಬಗ್ಗೆ ದೇಶದ ಪ್ರಧಾನಿಗಳು ಚಿಂತನೆ ನಡೆಸಿದ್ದಾರೆ ಎಂಬುದು ನನ್ನ ಅನಿಸಿಕೆ ಎಂದರು.

ಉತ್ತರ ಕರ್ನಾಟಕಕ್ಕೆ ಅನ್ಯಾಯವಾದಾಗ ಧ್ವನಿ ಎತ್ತಿದ್ದೇನೆ, ಮುಂದೆಯೂ ಎತ್ತುತ್ತೇನೆ. ಆದರೂ ಅಖಂಡ ಕರ್ನಾಟಕದಲ್ಲಿ ತೊಂದರೆ ಆಗಬಾರದು ಅನ್ನೋ ಕಾರಣಕ್ಕೆ ಮುಖ್ಯಮಂತ್ರಿಯನ್ನು ಎಚ್ಚರಿಸುತ್ತೇನೆ. ಅದು ಬಿಟ್ಟರೆ ನಾವು ಪ್ರತ್ಯೇಕ ರಾಜ್ಯ ಕೇಳುತ್ತಿಲ್ಲ. ಅಭಿವೃದ್ಧಿ ದೃಷ್ಟಿಯಿಂದ ಪ್ರತ್ಯೇಕ ರಾಜ್ಯವಾದರೂ ತಪ್ಪೇನಿಲ್ಲ ಎಂದು ಹೇಳಿದರು.

ಸಚಿವರ ಈ ಹೇಳಿಕೆಯಿಂದ ಪ್ರತ್ಯೇಕ ರಾಜ್ಯದ ಕೂಗಿಗೆ ಮತ್ತಷ್ಟು ಪುಷ್ಠಿ ನೀಡಿದಂತಾಗಿದೆ.

ಇದನ್ನೂ ಓದಿ: 2024ರ ಲೋಕಸಭೆ ಎಲೆಕ್ಷನ್​ ನಂತರ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ; ಸಚಿವ ಕತ್ತಿ

Last Updated : Jun 23, 2022, 7:04 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.