ಮಂಗಳೂರು: ಪೊಲೀಸರ ಅನುಮತಿ ನಿರಾಕರಣೆ ಹಿನ್ನೆಲೆಯಲ್ಲಿ ಇಂದು ಮುಸ್ಲಿಂ ಸೆಂಟ್ರಲ್ ಕಮಿಟಿ ಹಮ್ಮಿಕೊಂಡಿದ್ದ ಸಮಾವೇಶ ರದ್ದುಗೊಂಡಿದೆ. ಮುನ್ನೆಚ್ಚರಿಕಾ ಕ್ರಮವಾಗಿ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.
ನಗರದ ಸ್ಟೇಟ್ ಬ್ಯಾಂಕ್ ವೃತ್ತದ ಬಳಿ ಇರುವ ಪೊಲೀಸ್ ಆಯುಕ್ತರ ಕಚೇರಿ ಹಾಗೂ ನೆಹರೂ ಮೈದಾನದ ಬಳಿಯಲ್ಲಿ ಸಾಕಷ್ಟು ಪೊಲೀಸರನ್ನು ನಿಯೋಜಿಸಿ ಭದ್ರತೆ ನೀಡಲಾಗಿದೆ.
ಭದ್ರತೆಗೆ ಆರ್ಎಎಫ್ 3 ತುಕಡಿ, ಕೆಎಸ್ಆರ್ಪಿಯ 20 ತುಕಡಿಯನ್ನು ನಿಯೋಜಿಸಲಾಗಿದೆ. ಸಿಎಎ ವಿರುದ್ಧದ ಪ್ರತಿಭಟನೆ ಹಿನ್ನೆಲೆಯಲ್ಲಿ ಡಿ. 19ರಂದು 144 ಸೆಕ್ಷನ್ ಜಾರಿಗೊಳಿಸಿದ್ದರೂ ಅಂದು ಭಾರಿ ಹಿಂಸಾಚಾರ ನಡೆದಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಇದೀಗ ಮುನ್ನೆಚ್ಚರಿಕೆ ಕ್ರಮವಹಿಸಿ ನಗರದಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಮಾಡಿಕೊಂಡಿದೆ. ಅಲ್ಲದೆ ಎಡಿಜಿಪಿ ಅಮರ್ ಕುಮಾರ್ ಪಾಂಡೆ ನಗರಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ.