ETV Bharat / state

ತೆರಿಗೆ ಪಾವತಿಸದ ಮೊಬೈಲ್ ಫೋನ್‌ ಟವರ್‌ ಕಂಪನಿಗಳಿಗೆ ನೋಟಿಸ್‌ ನೀಡಿ: ಕೋಟ ಶ್ರೀನಿವಾಸ ಪೂಜಾರಿ - ಮೊಬೈಲ್ ಟವರ್ ಕಂಪೆನಿಗಳಿಗೆ ನೋಟಿಸ್

ದ.ಕ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಅಧಿಕಾರಿಗಳ ಜೊತೆ ಸಭೆ ನಡೆಸುತ್ತಿರುವ ಸಚಿವ ಕೋಟಾ ಶ್ರೀನಿವಾಸ ಪೂಜಾರಿ
author img

By

Published : Oct 18, 2019, 9:26 AM IST

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿರುವ ಮೊಬೈಲ್ ಫೋನ್ ಟವರ್ ಕಂಪೆನಿಗಳು ಗ್ರಾಮ ಪಂಚಾಯತಿಗೆ ತೆರಿಗೆ ಪಾವತಿಸುತ್ತಿಲ್ಲ ಎಂಬ ದೂರುಗಳು ಬಂದಿವೆ. ಇಂತಹ ಕಂಪೆನಿಗಳ ವಿರುದ್ಧ ನೋಟಿಸ್ ನೀಡಿ ತೆರಿಗೆ ಕಟ್ಟುವಂತೆ ಆದೇಶಿಸಬೇಕು ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ದ.ಕ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಪೆರ್ಮುದೆ ಗ್ರಾಮ ಪಂಚಾಯತ್ ವ್ಯಾಪ್ತಿಯ ನಿವೇಶನರಹಿತರಿಗೆ ಜಮೀನು ಕಾದಿರಿಸುವ ಬಗ್ಗೆ ಮಾಹಿತಿ ಪಡೆದು ಕೊಳ್ಳಲಾಗಿದೆ. ಇನ್ನೂ ಕೆಲವು ಜಮೀನುಗಳ ವಿಚಾರಗಳು ಕೋರ್ಟ್‌ನಲ್ಲಿ ವಿಚಾರಣೆಯ ಹಂತದಲ್ಲಿವೆ. ಆದಷ್ಟು ಬೇಗ ಈ ಕಾರ್ಯ ಪೂರ್ಣಗೊಳ್ಳುವ ಭರವಸೆ ಇದೆ. ರಾಜೀವ್ ಗಾಂಧಿ ನಿವೇಶನ ಯೋಜನೆ ಅಡಿಯಲ್ಲಿ ಖಾಲಿ ಇರುವ ಸರ್ಕಾರಿ ಜಮೀನುಗಳನ್ನು ಸರ್ವೇ ಮಾಡಿ ನಿವೇಶನ ಇಲ್ಲದವರಿಗೆ ನ್ಯಾಯಬದ್ಧವಾಗಿ ವಿತರಿಸಿ ಎಂದು ಸೂಚಿಸಿದರು.

ಕನ್ನಡ ರಾಜೋತ್ಸವ ಪ್ರಶಸ್ತಿಗೆ ನಿಯಾಮಾನುಸಾರ ಸರ್ಕಾರದ ಮಾನದಂಡದ ಮೂಲಕ ಗಣ್ಯರನ್ನು ಆಯ್ಕೆ ಮಾಡಬೇಕು. ರಾಜ್ಯಮಟ್ಟದಲ್ಲಿ ಪ್ರಶಸ್ತಿ ನಿರೀಕ್ಷೆ ಇದ್ದವರಿಗೆ ಅಲ್ಲಿ ಪ್ರಶಸ್ತಿ ಸಿಗದೇ ಇದ್ದಾಗ ಜಿಲ್ಲಾ ಮಟ್ಟದಲ್ಲಿ ನೀಡೋದು ಸಮಾಧಾನಕರವಾಗಿರುತ್ತದೆ. ಎಲ್ಲಾ ಕ್ಷೇತ್ರಗಳಿಗೆ ಹಂಚಿಕೆಯಾಗುವಂತೆ ಕನಿಷ್ಠ 25 ಪ್ರಶಸ್ತಿಗಳನ್ನು ನೀಡಬೇಕು ಎಂದು ತಿಳಿಸಿದರು.

ದ.ಕ ಜಿಲ್ಲಾಡಳಿತದ ಮೂಲಕ ನಡೆಯುವಂತಹ ಪ್ರತಿ ಉತ್ಸವಗಳಿಗೆ ಸಂಬಂಧಪಟ್ಟ ಸಮಿತಿಗಳು ತಮ್ಮ ಸಲಹೆಗಳನ್ನು ನೀಡಬಹುದು. ಅಬ್ಬಕ್ಕ ಉತ್ಸವಕ್ಕೆ ಸಂಬಂಧಿಸಿದ ಎರಡು ಸಮಿತಿಗಳನ್ನು ಸೇರಿಸಿ ಸಭೆ ನಡೆಸುವ ಹಾಗೂ ಅವರ ಅಭಿಪ್ರಾಯಗಳನ್ನು ಪಡೆದು ಸರ್ಕಾರದ ನಿಯಮದ ಪ್ರಕಾರ, ಉತ್ಸವ ನಡೆಸುವುದು ಸೂಕ್ತ. ಕರಾವಳಿ ಉತ್ಸವದ ಹಿಂದಿನ ವರ್ಷದ ಮಾದರಿಯನ್ನು ಸರ್ಕಾರಕ್ಕೆ ನೀಡಿ ಅದರಂತೆ ಈ ಬಾರಿಯ ಕರಾವಳಿ ಉತ್ಸವ ನಡೆಸಲು ಪ್ರಸ್ತಾವನೆ ಸಲ್ಲಿಸಲು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

ಇದೇ ವೇಳೆ ಪಿಲಿಕುಳದಲ್ಲಿ ಜಿಲ್ಲೆಯ ಜಾನಪದ ಕಲೆ ಕಂಬಳವನ್ನು ಜನವರಿ ಅಂತ್ಯದಲ್ಲಿ ಅಥವಾ ಫೆಬ್ರವರಿಯಲ್ಲಿ ನಡೆಸಬಹುದಾಗಿದೆ. ಇದಕ್ಕೆ ಎಲ್ಲಾ ರೀತಿಯ ಪೂರ್ವಸಿದ್ಧತೆಗಳನ್ನು ನಡೆಸುವಂತೆ ಸಚಿವರು ಅಧಿಕಾರಿಗಳಿಗೆ ತಿಳಿಸಿದ್ರು.

Intro:ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಮೊಬೈಲ್ ಫೋನ್ ಟವರ್ ಕಂಪೆನಿಗಳು ಗ್ರಾಮ ಪಂಚಾಯತಿಗೆ  ತೆರಿಗೆ ಪಾವತಿ ಮಾಡುತ್ತಿಲ್ಲ ಎಂಬ ದೂರುಗಳು ಹೆಚ್ಚು  ಬಂದಿವೆ .ಹಾಗಾಗಿ ಅಂತಹ ಕಂಪೆನಿಗಳ ವಿರುದ್ಧ ನೋಟಿಸ್ ನೀಡಿ ತೆರಿಗೆ ಕಟ್ಟುವಂತೆ ಆದೇಶ ನೀಡಬೇಕು ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.Body:
     ದ.ಕ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,  ಪೆರ್ಮುದೆ ಗ್ರಾಮ ಪಂಚಾಯತ್ ವ್ಯಾಪ್ತಿಯ ನಿವೇಶನ ರಹಿತರಿಗೆ ಜಮೀನು ಕಾದಿರಿಸುವ ಬಗ್ಗೆ ಮಾಹಿತಿ ಪಡೆದು ಕೊಳ್ಳಲಾಗಿದೆ ಮತ್ತು  ಇನ್ನೂ ಕೆಲವು ಜಮೀನುಗಳ ವಿಚಾರಗಳು ಕೋರ್ಟ್ ನಲ್ಲಿ ವಿಚಾರಣೆಯ ಹಂತದಲ್ಲಿದೆ. ಆದಷ್ಟೂ ಬೇಗನೆ ಈ ಕಾರ್ಯ ಪೂರ್ಣಗೊಳ್ಳುವ ಭರವಸೆ ಇದೆ ಹಾಗೂ ರಾಜೀವ್ ಗಾಂಧಿ ನಿವೇಶನ ಯೋಜನೆ ಅಡಿಯಲ್ಲಿ ಖಾಲಿರುವ ಸರ್ಕಾರಿ ಜಮೀನುಗಳನ್ನು ಸರ್ವೆ ಮಾಡಿ ನಿವೇಶನ ಇಲ್ಲದವರಿಗೆ ನ್ಯಾಯ ಬದ್ಧವಾಗಿ ವಿತರಿಸಿ  ಎಂದು ಅವರು ಹೇಳಿದರು.
   
ಕನ್ನಡ ರಾಜೋತ್ಸವ ಪ್ರಶಸ್ತಿ ಆಯ್ಕೆ ಮಾಡುವ ಸಂದರ್ಭದಲ್ಲಿ  ನಿಯಾಮಾನುಸಾರವಾಗಿ ಸರಕಾರದ ಮಾನದಂಡದ ಮೂಲಕ ಆಯ್ಕೆ ಮಾಡಬೇಕು. ರಾಜ್ಯ ಮಟ್ಟದಲ್ಲಿ ಪ್ರಶಸ್ತಿ ನಿರೀಕ್ಷೆ ಇದ್ದವರಿಗೆ ಅಲ್ಲಿ ಪ್ರಶಸ್ತಿ ಸಿಗದೆ ಇದ್ದಾಗ ಜಿಲ್ಲಾ ಮಟ್ಟದಲ್ಲಿ ನೀಡೋದು ಸಮಾಧಾನಕರವಾಗಿರುತ್ತದೆ. ಎಲ್ಲಾ ಕ್ಷೇತ್ರಗಳಿಗೆ ಹಂಚಿಕೆಯಾಗುವಂತೆ ಕನಿಷ್ಠ 25 ಪ್ರಶಸ್ತಿಗಳನ್ನು ನೀಡಬೇಕು ಎಂದು ತಿಳಿಸಿದರು. 
   ದ.ಕಜಿಲ್ಲಾಡಳಿತದ ಮೂಲಕ ನಡೆಯುವಂತಹ ಪ್ರತಿ ಉತ್ಸವಗಳಿಗೆ ಸಂಬಂಧಪಟ್ಟ ಸಮಿತಿಗಳು ತಮ್ಮ ಸಲಹೆಗಳನ್ನು ನೀಡಬಹುದು, ಆದುದರಿಂದ ಅಬ್ಬಕ್ಕ ಉತ್ಸವಕ್ಕೆ ಸಂಬಂಧಿಸಿದ ಎರಡು ಸಮಿತಿಗಳನ್ನು ಸೇರಿಸಿ ಸಭೆ ನಡೆಸುವ ಹಾಗೂ ಅವರ ಅಭಿಪ್ರಾಯಗಳನ್ನು ಪಡೆದು ಸರಕಾರದ ನಿಯಮದ ಪ್ರಕಾರ ಉತ್ಸವ ನಡೆಸುವುದು ಸೂಕ್ತವಾದೆ. ಕರಾವಳಿ ಉತ್ಸವದ ಹಿಂದಿನ ವರ್ಷದ ಮಾದರಿಯನ್ನು ಸರಕಾರಕ್ಕೆ ನೀಡಿ ಅದರಂತೆ ಪ್ರಸ್ತುತ ಕರಾವಳಿ ಉತ್ಸವ ನಡೆಸಲು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.
   ಪಿಲಿಕುಳದಲ್ಲಿ  ಜಿಲ್ಲೆಯ ಜಾನಪದ ಕಲೆಯಾದ ಕಂಬಳವನ್ನು ಜನವರಿ ಅಂತ್ಯದಲ್ಲಿ ಅಥವಾ ಫೆಬ್ರವರಿಯಲ್ಲಿ ನಡೆಸಬಹುದಾಗಿದೆ. ಇದಕ್ಕೆ ಎಲ್ಲಾ ರೀತಿಯ ಪೂರ್ವಸಿದ್ಧತೆಗಳನ್ನು ನಡೆಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.
    ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್, ಅಪರ ಜಿಲ್ಲಾಧಿಕಾರಿ ಎಂ.ಜೆ ರೂಪ, ಮುಖ್ಯಕಾರ್ಯನಿವಾಹಣಾಧಿಕಾರಿ ಡಾ ಆರ್ ಸೆಲ್ವಮಣಿ, ಉಳ್ಳಾಲ ಶಾಸಕ ಯು ಟಿ ಖಾದರ್, ಮೂಡಬಿದ್ರೆ ಶಾಸಕ ಊಮಾನಾಥ ಕೋಟ್ಯಾನ್ ಉಪಸ್ಥಿತರಿದ್ದರು.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.